Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಕ್ಕೆ ಸೇರಿಸಿಕೊಳ್ಳಲು ಶುರುಮಾಡಿದರೆ ಬಿಜೆಪಿ, ಜೆಡಿಎಸ್​ನಲ್ಲಿ ಯಾರೂ ಇರಲ್ಲ: ಸಚಿವ ಶಿವರಾಜ್ ತಂಗಡಗಿ

ನಮ್ಮ ತತ್ವ, ಸಿದ್ಧಾಂತವನ್ನು ಒಪ್ಪಿಕೊಂಡು ಬರುವವರು ಇದ್ದರೆ ಬರಬಹುದು. ಪಕ್ಷಕ್ಕೆ ಸೇರಿಸಿಕೊಳ್ಳಲು ಶುರುಮಾಡಿದರೆ ಬಿಜೆಪಿ ಮತ್ತು ಜೆಡಿಎಸ್​ನಲ್ಲಿ ಯಾರೂ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಪಕ್ಷಕ್ಕೆ ಸೇರಿಸಿಕೊಳ್ಳಲು ಶುರುಮಾಡಿದರೆ ಬಿಜೆಪಿ, ಜೆಡಿಎಸ್​ನಲ್ಲಿ ಯಾರೂ ಇರಲ್ಲ: ಸಚಿವ ಶಿವರಾಜ್ ತಂಗಡಗಿ
ಸಚಿವ ಶಿವರಾಜ ತಂಗಡಗಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 21, 2023 | 8:16 PM

ಹುಬ್ಬಳ್ಳಿ, ಆಗಸ್ಟ್​ 21: ಪಕ್ಷಕ್ಕೆ ಸೇರಿಸಿಕೊಳ್ಳಲು ಶುರುಮಾಡಿದರೆ ಬಿಜೆಪಿ ಮತ್ತು ಜೆಡಿಎಸ್​ನಲ್ಲಿ ಯಾರೂ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದರು. ನಗರದಲ್ಲಿ ಮಾಧ್ಯವದರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ನಮ್ಮ ತತ್ವ, ಸಿದ್ಧಾಂತವನ್ನು ಒಪ್ಪಿಕೊಂಡು ಬರುವವರು ಇದ್ದರೆ ಬರಬಹುದು. ದ್ವೇಷದ ರಾಜಕಾರಣ ಮಾಡುವವರು ಬಿಜೆಪಿಯವರು ಎಂದು ವಾಗ್ದಾಳಿ ಮಾಡಿದ್ದಾರೆ.

ಬಡವರು, ಮಧ್ಯಮ ವರ್ಗದವರಿಗೆ ಒಂದೇ ಒಂದು ಯೋಜನೆ ತಂದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪೆನ್​ಡ್ರೈವ್​ನಲ್ಲಿ ಏನೂ ಹುರುಳಿಲ್ಲ. ಬುಟ್ಟಿಯಲ್ಲಿ ಹಾವಿಟ್ಟು ಹಾವಿದೆ ಹಾವಿದೇ ಎಂದು ಹೆದರಿಸುವ ಮೂಲಕ ಕುಮಾರಸ್ವಾಮಿ ಹತಾಶರಾಗಿದ್ದಾರೆ. ವರ್ಗಾವಣೆ ಎಲ್ಲ ಸರ್ಕಾರದ ಅವಧಿಯಲ್ಲಿಯೂ ಆಗಿದೆ. ಸರಿಯಾದ ದಾಖಲಾತಿ ನೀಡದೇ ಹರಾಜು ಪ್ರಕ್ರಿಯೆ ಎಂದು ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ಆಪರೇಷನ್ ಹಸ್ತ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ರಾಜ್ಯ ರಾಜಕಾರಣದಲ್ಲಿ ಮತ್ತೆ ಪಕ್ಷಾಂತರ ಪರ್ವದ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಹಾಲಿ ಶಾಸಕ ಶಿವರಾಮ್​​​ ಹೆಬ್ಬಾರ್​​​​, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.

ಯಶವಂತಪುರದ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಕೂಡ ಬಿಜೆಪಿ ತೊರದು ಮತ್ತೆ ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಸುದ್ದಿ ವಿಧಾನಸೌಧದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೇ ಹೊತ್ತಲ್ಲಿ ಸೋಮಶೇಖರ್,  ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿಯಾಗಿದ್ದು, ಇದಾದ ಬಳಿಕ ನಿನ್ನೆ ಬೆಂಬಲಿಗರ ಸಭೆ ನಡೆಸಿದ್ದು, ಆಪರೇಷನ್ ಹಸ್ತಕ್ಕೆ ಪುಷ್ಟಿ ನೀಡಿದಂತಿದೆ.

ಇದನ್ನೂ ಓದಿ: ಆಪರೇಷನ್ ಹಸ್ತ ಭೀತಿ; ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

ಸೋಮಶೇಖರ್ ಕಾಂಗ್ರೆಸ್‌ ಹಾದಿಯಲ್ಲೇ ಇದ್ದಾರೆ ಎಂಬುದಕ್ಕೆ ಪುರಾವೆ ನೀಡಿದಂತಿದೆ. ಇಂಟ್ರಸ್ಟಿಂಗ್ ಅಂದರೆ ಸೋಮಶೇಖರ್ ಕರೆದಿದ್ದ ಸಭೆಯಲ್ಲಿ ನೆಲಮಂಗಲದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಕೂಡ ಪ್ರತ್ಯಕ್ಷವಾಗಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ