ಕೆವಿಜಿ ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಗ್ಯಾಸ್ ಕಟರ್‌ನಿಂದ ಸೇಫ್ ಲಾಕರ್ ಮುರಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬ್ಯಾಂಕ್ ಮ್ಯಾನೇಜರ್ ಶರತ್ ನಾಯಕ್‌ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆವಿಜಿ ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಗ್ಯಾಸ್ ಕಟರ್‌ನಿಂದ ಸೇಫ್ ಲಾಕರ್ ಮುರಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೆವಿಜಿ ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ
Follow us
TV9 Web
| Updated By: preethi shettigar

Updated on:Sep 08, 2021 | 12:51 PM

ಧಾರವಾಡ: ಕೆವಿಜಿ ಬ್ಯಾಂಕ್‌ ಶಾಖೆಯಲ್ಲಿ ಕಳವಿಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿಯಲ್ಲಿ ನಡೆದಿದೆ. ಬ್ಯಾಂಕ್ ಹಿಂದಿನ ಕ್ಯಾಶ್ ಕ್ಯಾಬಿನ್ ಹತ್ತಿರದ ಗೋಡೆಯನ್ನು ಒಡೆದು ದರೋಡೆ ಮಾಡಲು ಬ್ಯಾಂಕ್ ಒಳಗೆ ನುಗ್ಗಿ ಕಳ್ಳುರು ತಡಕಾಡಿದ್ದಾರೆ ಕಳ್ಳರು ಗ್ಯಾಸ್ ಕಟರ್‌ನಿಂದ ಸೇಫ್ ಲಾಕರ್ ಮುರಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಬ್ಯಾಂಕ್ ಮ್ಯಾನೇಜರ್ ಶರತ್ ನಾಯಕ್‌ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ: ರಾತ್ರಿ ನೆಡೆದಿದ್ದ ಕಳ್ಳತನ ಪ್ರಕರಣ; ಘಟನಾ ಸ್ಥಳಕ್ಕೆ ಆಗಮಿಸಿದ ದಕ್ಷಿಣ ವಲಯ ಐಜಿಪಿ ಹಾಸನ ಜಿಲ್ಲೆಯಲ್ಲಿ ನೆನ್ನೆ ತಡರಾತ್ರಿ ಗ್ರಾನೈಟ್ ಉದ್ಯಮಿ ರಘು ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಈ ಸಂಬಂಧ ಇಂದು ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಮಧುಕರ್ ಸೂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 2.5 ಕೋಟಿ ಮೌಲ್ಯದ ಆಭರಣ, ಹಣವನ್ನು ಕಳ್ಳರು ದೋಚಿದ್ದರು. ಹಾಸನದ ಬೇಲೂರು ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಐಜಿಪಿ ಭೇಟಿ ನೀಡಿದ್ದಾರೆ. ಇನ್ನು ದಕ್ಷಿಣ ವಲಯ ಐಜಿಪಿಗೆ ಹಾಸನ ಎಸ್​ಪಿ ಶ್ರೀನಿವಾಸ್ ಗೌಡ ಸಾಥ್ ನೀಡಿದ್ದಾರೆ.

ಹಾವೇರಿ: ಕರಿಯಮ್ಮದೇವಿ ದೇವಾಲಯದಲ್ಲಿದ್ದ ಹುಂಡಿ ಕಳ್ಳತನ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದಲ್ಲಿ ಇರುವ ಕರಿಯಮ್ಮದೇವಿ ದೇವಾಲಯದಲ್ಲಿ ಹುಂಡಿ ಕಳ್ಳತನವಾಗಿದೆ. ದೇವಸ್ಥಾನದ ಆವರಣದ ಡಬ್ಬಿಯಲ್ಲಿದ್ದ ಇಪ್ಪತ್ತೈದು ಸಾವಿರ ಹಣವನ್ನು ಕಳ್ಳರು ದೋಚಿದ್ದಾರೆ. ಎಂದಿನಂತೆ ಬೆಳಿಗ್ಗೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ರಾಬರಿಗೆ ಯತ್ನಿಸಿದ ಖದೀಮರನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು ಶಿವಮೊಗ್ಗದ ಗಾಂಧಿನಗರದಲ್ಲಿ ಬೆಳ್ಳಂಬೆಳಗ್ಗೆ ಲಾಂಗು, ಮಚ್ಚು ಹಿಡಿದು ರಾಬರಿಗೆ ಯತ್ನಿಸಿದವರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ವಾಕಿಂಗ್‌ಗೆ ಬಂದವರ ಬಳಿ ರಾಬರಿ ಮಾಡಲು ಯತ್ನಿಸಿದ ಮೂವರನ್ನು ಹಿಡಿದ ಸ್ಥಳೀಯರು, ಜಯನಗರ ಪೊಲೀಸರಿಗೊಪ್ಪಿಸಿದ್ದಾರೆ. ಮತ್ತೊಬ್ಬ ದರೋಡೆಕೋರ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ತಡವಾಗಿ ಬಂದ ಹಿನ್ನೆಲೆ ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ

ಸಿಎಂ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ 13 ಜನರ ಕಿಸೆಗೆ ಬಿತ್ತು ಕತ್ತರಿ! 1.50 ಲಕ್ಷ ಕಳ್ಳತನದ ಆರೋಪ

Published On - 12:27 pm, Wed, 8 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ