AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪ್ಪರಂಕುಂದ್ರಂ ದೀಪ ವಿವಾದ: ಸುಪ್ರೀಂ ಆದೇಶಕ್ಕೆ ಸಂತಸ; ಹುಬ್ಬಳ್ಳಿಯಲ್ಲಿ ದೀಪ ಬೆಳಗಿದ ಹಿಂದೂ ಕಾರ್ಯಕರ್ತರು

ತಮಿಳುನಾಡಿನ ತಿರುಪ್ಪರಂಕುಂದ್ರಂ ಬೆಟ್ಟದ ದೀಪ ವಿವಾದ ದೇಶದಲ್ಲಿ ಚರ್ಚೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಮೂಲ ಸ್ಥಳದಲ್ಲಿ ದೀಪ ಹಚ್ಚಲು ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದ ನಂತರ, ಹುಬ್ಬಳ್ಳಿಯಲ್ಲಿ ಹಿಂದೂಪರ ಕಾರ್ಯಕರ್ತರು ದೀಪ ಬೆಳಗಿಸಿ ಸಂತಸ ವ್ಯಕ್ತಪಡಿಸಿದರು. ಆ ಮೂಲಕ ಸುಪ್ರೀಂ ಆದೇಶವನ್ನು ಸ್ವಾಗತಿಸಿದರು.

ತಿರುಪ್ಪರಂಕುಂದ್ರಂ ದೀಪ ವಿವಾದ: ಸುಪ್ರೀಂ ಆದೇಶಕ್ಕೆ ಸಂತಸ; ಹುಬ್ಬಳ್ಳಿಯಲ್ಲಿ ದೀಪ ಬೆಳಗಿದ ಹಿಂದೂ ಕಾರ್ಯಕರ್ತರು
ದೀಪ ಬೆಳಗಿಸಿದ ಹಿಂದೂ ಕಾರ್ಯಕರ್ತರು
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 28, 2026 | 6:31 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿಗೂ ವ್ಯಾಪಿಸಿದ ಮದುರೈ ದೀಪ ವಿವಾದದ ಕಿಚ್ಚು
  • ಸುಪ್ರೀಂಕೋರ್ಟ್ ಆದೇಶಕ್ಕೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಂತಸ
  • ಪ್ರಮೋದ್ ಮುತಾಲಿಕ್​​ ನೇತೃತ್ವದಲ್ಲಿ ದೀಪ ಬೆಳಗಿದ ಕಾರ್ಯಕರ್ತರು

ಹುಬ್ಬಳ್ಳಿ, ನವೆಂಬರ್​​ 28: ತಮಿಳುನಾಡಿನ ಮದುರೈ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿನ ದೀಪದ ವಿವಾದ ದೇಶದಲ್ಲಿ ದೊಡ್ಡ ಸದ್ದು ಮಾಡಿದೆ. ಸ್ವತಃ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ತಪರಾಕಿ ಹಾಕಿದ್ದು, ನಿಗದಿತ ಸ್ಥಳದಲ್ಲಿಯೇ ಇಂದು ದೀಪ ಹಚ್ಚುವಂತೆ ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಹಿಂದೂಪರ ಕಾರ್ಯಕರ್ತರು ಭವಾನಿ ಶಂಕರ ದೇವಾಲಯದಲ್ಲಿ ದೀಪ ಬೆಳಗಿದರು. ತಮಿಳುನಾಡು ಸಿಎಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶಕ್ಕೆ ಹಿಂದೂಪರ ಸಂಘಟನೆಗಳ ಸ್ವಾಗತ

ಹುಬ್ಬಳ್ಳಿಯಲ್ಲಿ ಕೂಡ ತಮಿಳುನಾಡಿನ ಮದುರೈ ತಿರುಪ್ಪರಂಕುಂದ್ರಂ ಬೆಟ್ಟದ ದೀಪದ ವಿವಾದಕ್ಕೆ ಸಂಬಂಧಿಸಿದಂತೆ ಆಕ್ರೋಶ ಮತ್ತು ಸುಪ್ರೀಂ ಕೋರ್ಟ್ ಆದೇಶಕ್ಕೆ ಸಂತಸ ವ್ಯಕ್ತವಾಗಿದೆ. ಹುಬ್ಬಳ್ಳಿಯ ಭವಾನಿ ಶಂಕರ ದೇವಲಾಯದ ಮುಂದೆ ಸೇರಿದ್ದ ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನಗಳ ಕಾರ್ಯಕರ್ತರು, ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ಹುಬ್ಬಳ್ಳಿಯಲ್ಲಿ ದೀಪ ಬೆಳಗಿಸಿ, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದರು.

ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ದೀಪೋತ್ಸವ

ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿನ ಕಲ್ಲಿನ ಕಂಬದ ಮೇಲೆ ಕಾರ್ತಿಕ ಮಾಸದಲ್ಲಿ ನೂರಾರು ವರ್ಷಗಳಿಂದ ದೀಪ ಹಚ್ಚಲಾಗುತ್ತಿದೆ. ಆದರೆ ತಮಿಳುನಾಡು ಸರ್ಕಾರ, ಅಲ್ಲಿ ದೀಪ ಹಚ್ಚದೆ ಬೇರೆ ಕಡೆ ದೀಪ ಹಚ್ಚಿದ್ದು, ಅನೇಕರ ಆಕ್ರೋಶಕ್ಕೆ ಕಾರಣವಾಗಿತ್ತು. ಸುಪ್ರೀಂ ಕೋರ್ಟ್ ಹೇಳಿದರೂ ದೀಪ ಹಚ್ಚಲಿಲ್ಲ, ದೀಪ ಹಚ್ಚಲು ಅವಕಾಶ ನೀಡಲಿಲ್ಲ. ಹೀಗಾಗಿ ಅನೇಕರು ಮೇಲ್ವನವಿ ಸಲ್ಲಿಸಿದ್ದರು. ಶುಕ್ರವಾರ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ತಪರಾಕಿ ಹಾಕಿತ್ತು. ನಿಗದಿತ ಸ್ಥಳಗಲ್ಲಿಯೇ ದೀಪ ಹಚ್ಚಲು ಅವಕಾಶ ನೀಡಿತ್ತು. ಸಿಆರ್ ಪಿ ಪಿ ಭದ್ರತೆಯಲ್ಲಿ ಇಂದು ದೀಪ ಹಚ್ಚುವಂತೆ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಘಟನೆ ಮತ್ತು ಹಿಂದೂಪರ ಕಾರ್ಯಕರ್ತರು, ದೀಪ ಬೆಳಗಿಸಿ, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಎಂಎಲ್​ಸಿ ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ

ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿವಾದ ಕೂಡ ನಡೆಯುತ್ತಿದೆ. ಪುಷ್ಕರಣಿ ವಿಚಾರಕ್ಕೆ ಸಂಬಂಧಸಿದಂತೆ ಪಾಲಿಕೆ ಅಲ್ಪಸಂಖ್ಯಾತರ ಓಲೈಕೆಗಾಗಿ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಿದೆ ಅಂತ ಕಳೆದ ಮೂರ್ನಾಲ್ಕು ತಿಂಗಳಿಂದ ಹೋರಾಟಗಳು ನಡೆದಿವೆ. ಇದೇ ಸಮಯದಲ್ಲಿ ತಮಿಳುನಾಡಿನ ಮದುರೈ ದೀಪದ ವಿವಾದಕ್ಕೆ ಸಂಬಂಧಿಸದಂತೆ ಇದೇ ಭವಾನಿ ಶಂಕರ ದೇವಾಲಯ ಮುಂದೆ ದೀಪ ಹಚ್ಚಿ ಸಂತಸ ವ್ಯಕ್ತಪಡಿಸಿದ್ದಾರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು.

ತಮಿಳುನಾಡು ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್​​ ಆಕ್ರೋಶ

ಇನ್ನು ಇದೇ ಸಮಯದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಧಿಕ್ಕಾರದ ಘೋಷಣೆ ಕೂಗಿದ್ದು, ತಮಿಳುನಾಡು ಸಿಎಂ ವಿಜಯ್, ಹಿಂದೂಗಳ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದರು. ‘ತಮಿಳುನಾಡು ಸರ್ಕಾರ ಎಲ್ಲರ ಮತ ಪಡೆದು ಅಧಿಕಾರಕ್ಕೆ ಬಂದಿದೆ. ಆದರೆ ಅಲ್ಪಸಂಖ್ಯಾತರ ಓಲೈಕೆಗಾಗಿ ಸುಪ್ರೀಂ ಕೋರ್ಟ್ ಹೇಳಿದರೂ ಮೊಂಡುತನ ತೋರಿದ್ದು ಸರಿಯಲ್ಲ’ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಪುಷ್ಕರಣಿ ವಿವಾದ: ಹು-ಧಾ ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಶ್ರೀರಾಮ ಸೇನೆ!

ಸದ್ಯ ತಮಿಳುನಾಡಿನ ಮದುರೈ ದೀಪದ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ದೀಪ ಬೆಳಗಿಸಲಾಗಿದೆ. ಅದು ಪುಷ್ಕರಣಿ ವಿವಾದಕ್ಕೆ ಕಾರಣವಾಗಿರೋ ಹುಬ್ಬಳ್ಳಿ ಭವಾನಿ ಶಂಕರ ದೇವಾಲಯ ಮುಂದೆ. ಆ ಮೂಲಕ ಪರೋಕ್ಷ ಸಂದೇಶವನ್ನು ನೀಡುವ ಕೆಲಸವನ್ನು ಹಿಂದೂಪರ ಸಂಘಟನೆಗಳು ಮಾಡಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್
ಸರ್ಕಾರಿ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ಮೌಲ್ಯದ ಅವಧಿ ಮೀರಿದ ಔಷಧಿ ಪತ್ತೆ
ಸರ್ಕಾರಿ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ಮೌಲ್ಯದ ಅವಧಿ ಮೀರಿದ ಔಷಧಿ ಪತ್ತೆ
ಸುದೀಪ್ ಎದುರು ಕಳಚಲಿದೆ ಗುಳ್ಳೆನರಿ ಯಶಸ್ ಮುಖವಾಡ
ಸುದೀಪ್ ಎದುರು ಕಳಚಲಿದೆ ಗುಳ್ಳೆನರಿ ಯಶಸ್ ಮುಖವಾಡ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿದ ಖಾಸಗಿ ಎಲೆಕ್ಟ್ರಿಕ್ ಬಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿದ ಖಾಸಗಿ ಎಲೆಕ್ಟ್ರಿಕ್ ಬಸ್