CEIR: ಮೊಬೈಲ್ ಕಳೆದುಕೊಂಡವರು ಇ-ಸ್ಪಂದನ ಮೂಲಕ ದೂರು ಸಲ್ಲಿಸಿ : ಹುಬ್ಬಳ್ಳಿ ಧಾರವಾಡ ಜನತೆಗೆ ಕರೆಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pralhad Joshi: ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಿದ ಅವಳಿ ನಗರದ ಪೊಲೀಸರಿಗೆ ಅಭಿನಂದನೆ ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮೊಬೈಲ್ ಕಳೆದುಕೊಂಡ ಜನರು ಇ-ಸ್ಪಂದನ ವ್ಯವಸ್ಥೆಯ ಮೂಲಕ ದೂರು ಸಲ್ಲಿಸುವಂತೆ ಕರೆ ನೀಡಿದ್ದಾರೆ.

CEIR: ಮೊಬೈಲ್ ಕಳೆದುಕೊಂಡವರು ಇ-ಸ್ಪಂದನ ಮೂಲಕ ದೂರು ಸಲ್ಲಿಸಿ : ಹುಬ್ಬಳ್ಳಿ ಧಾರವಾಡ ಜನತೆಗೆ ಕರೆಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಮೊಬೈಲ್ ಕಳೆದುಕೊಂಡವರು ಇ ಸ್ಪಂದನದ ಮೂಲಕ ದೂರು ಸಲ್ಲಿಸಿ : ಸಚಿವ ಪ್ರಲ್ಹಾದ್ ಜೋಶಿ
Follow us
ಸಾಧು ಶ್ರೀನಾಥ್​
|

Updated on:Apr 07, 2023 | 8:19 PM

ಧಾರವಾಡ: ಕಳ್ಳತನವಾಗಿದ್ದ ಒಂದು ಕೋಟಿ ಮೌಲ್ಯದ ಮೊಬೈಲ್ ಫೋನ್ (Mobile Phone) ಗಳನ್ನು ಹುಬ್ಬಳ್ಳಿ – ಧಾರವಾಡ ಅವಳಿ ನಗರದ ಜನರಿಗೆ ವಾಪಸ್ ಕೊಡಿಸುವಲ್ಲಿ ಪೊಲೀಸರ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಳೆದು ಹೋಗಿದ್ದ ಒಂದು ಕೋಟಿ ರೂಪಾಯಿಯಷ್ಟು ಮೌಲ್ಯದ 400 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿದ್ದ ಅವಳಿನಗರದ (Hubballi and Dharwad) ಪೊಲೀಸರು, ಅವುಗಳನ್ನ ಇಂದು ವಾರಸುದಾರರಿಗೆ ಹಿಂದಿರುಗಿಸಿದರು. ಪೊಲೀಸರ ಕಾರ್ಯವನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ಸಮಾಜಕ್ಕೆ ಪೊಲೀಸರ ಇಂತಹ ಕಾರ್ಯ ಅಗತ್ಯವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ

ಮೊಬೈಲ್ ಕಳೆದುಕೊಂಡವರು ಇ – ಸ್ಪಂದನ ಹಾಗೂ ಸಿ ಐ ಇ ಆರ್ ಮೂಲಕ ( (Mobile Theft and Central Equipment Identity Register) ದೂರು ಸಲ್ಲಿಸಿದ್ದರು. ಅವಳಿ ನಗರದ ಡಿ ಜಿ ಹಾಗೂ ಐ ಜಿ ಪಿ ಪ್ರವೀಣ್ ಸೂದ್ ಅವರ ಸಮ್ಮುಖದಲ್ಲಿ ವಾರಸುದಾರರು ಕಳೆದುಹೋದ ತಮ್ಮ ಫೋನ್ ಗಳನ್ನು ವಾಪಸ್ ಪಡೆದುಕೊಂಡರು.

ಸಿ ಇ ಐ ಆರ್ ಕೇಂದ್ರ ದೂರಸಂಪರ್ಕ ಇಲಾಖೆಯ ಯೋಜನೆಯಾಗಿದ್ದು ಕಳೆದು ಹೋದ ಮೊಬೈಲ್ ಡಿವೈಸ್​​​ನ ಐ ಎಂ ಇ ಐ ಸಂಖ್ಯೆಯ ಸಹಾಯದಿಂದ ಅದನ್ನು ಪತ್ತೆ ಮಾಡಬಹುದಾಗಿದೆ. ಇ – ಸ್ಪಂದನದ ಮೂಲಕ ಸಾರ್ವಜನಿಕರು ತಮ್ಮ ದೂರು ಸಲ್ಲಿಸಬಹುದಾಗಿದ್ದು, ಶೀಘ್ರದಲ್ಲಿ ಅವುಗಳಿಗೆ ಸ್ಪಂದಿಸುವ ವ್ಯವಸ್ಥೆ ತರಲಾಗಿದೆ.

Also Read: ಮೊಬೈಲ್ ಕಳೆದುಕೊಂಡವರು ಸೀದಾ ಈ ವೆಬ್​ಸೈಟ್​​ಗೆ ಭೇಟಿ ನೀಡ್ತಿದಾರೆ! ತಡವೇಕೆ? ಮೊಬೈಲ್ ಕಳೆದಿದ್ದರೆ ನೀವೂ ಹೀಗೆ ಮಾಡಿ!

ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಿದ ಅವಳಿ ನಗರದ ಪೊಲೀಸರಿಗೆ ಅಭಿನಂದನೆ ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮೊಬೈಲ್ ಕಳೆದುಕೊಂಡ ಜನರು ಇ ಸ್ಪಂದನದ ಮೂಲಕ ದೂರು ಸಲ್ಲಿಸುವಂತೆ ಕರೆ ನೀಡಿದ್ದಾರೆ.  Central Equipment Identity Register -CEIR   ವೆಬ್​ ಸೈಟ್​​ಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಅಥವಾ 02-8277952828 ಈ ಮೊಬೈಲ್​​ ಸಂಖ್ಯೆಗೆ Hi ಎಂದು ವಾಟ್ಸಪ್​ ಸಂದೇಶ ಕಳುಹಿಸಿ ಸಾರ್ವಜನಿಕರು ದೂರ ದಾಖಲಿಸಬಹುದಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Fri, 7 April 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ