ಕೊರೊನಾ ನಿಯಮ ಉಲ್ಲಂಘಿಸಿ ತ್ರಿವರ್ಣ ಧ್ವಜ ಮೆರವಣಿಗೆ; ಕಲಘಟಗಿಯ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲು

| Updated By: ganapathi bhat

Updated on: Aug 15, 2021 | 10:32 PM

ಕಲಘಟಗಿಯ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಮೆರವಣಿಗೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಭಾಗಿ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ.

ಕೊರೊನಾ ನಿಯಮ ಉಲ್ಲಂಘಿಸಿ ತ್ರಿವರ್ಣ ಧ್ವಜ ಮೆರವಣಿಗೆ; ಕಲಘಟಗಿಯ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲು
ಕೊರೊನಾ ಮಧ್ಯೆ ಅಪಾರ ಜನಸಂದಣಿ
Follow us on

ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ನಡುವೆ ಕೊರೊನಾ ನಿಯಮ ಉಲ್ಲಂಘಿಸಿ ತ್ರಿವರ್ಣ ಧ್ವಜ ಮೆರವಣಿಗೆ ಮಾಡಿರುವ ಕಾರಣ 14 ಮಂದಿ ಕಾಂಗ್ರೆಸ್​​​ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ. ಮಾಜಿ ಸಚಿವ ಸಂತೋಷ್​​​​​​ ಲಾಡ್ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಗಿತ್ತು. ಆದರೆ, ಸಂತೋಷ್ ಲಾಡ್​​ರನ್ನ ಹೊರಗಿಟ್ಟು ದೂರು ದಾಖಲು ಮಾಡಲಾಗಿದೆ. ಕಲಘಟಗಿಯ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಮೆರವಣಿಗೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಭಾಗಿ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ.

ಕರ್ನಾಟಕ ಕೊರೊನಾ ವರದಿ
ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 15) ಹೊಸದಾಗಿ 1,431 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,29,464 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,69,962 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 21 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,979 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,497 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 305 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,32,902 ಕ್ಕೆ ಏರಿಕೆಯಾಗಿದೆ. 12,32,902 ಸೋಂಕಿತರ ಪೈಕಿ 12,08,798 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,937 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,166 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 2, ಬಳ್ಳಾರಿ 5, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 305, ಬೀದರ್ 3, ಚಾಮರಾಜನಗರ 10, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 45, ಚಿತ್ರದುರ್ಗ 20, ದಕ್ಷಿಣ ಕನ್ನಡ 311, ದಾವಣಗೆರೆ 3, ಧಾರವಾಡ 15, ಗದಗ 4, ಹಾಸನ 87, ಹಾವೇರಿ 3, ಕಲಬುರಗಿ 3, ಕೊಡಗು 82, ಕೋಲಾರ 23, ಕೊಪ್ಪಳ 1, ಮಂಡ್ಯ 32, ಮೈಸೂರು 83, ರಾಯಚೂರು 4, ರಾಮನಗರ 6, ಶಿವಮೊಗ್ಗ 41, ತುಮಕೂರು 51, ಉಡುಪಿ 177, ಉತ್ತರ ಕನ್ನಡ 64, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣ: ಮೂವರು ಎಸ್​ಡಿಪಿಐ ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನ

ದಾವಣಗೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನವೇ ಕಾರ್ಮಿಕರ ಪ್ರತಿಭಟನೆ!