AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಜಾಮ್, ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹುಬ್ಬಳ್ಳಿಯಲ್ಲಿ ಶೀಘ್ರವೇ ತಲೆ ಎತ್ತಲಿದೆ ಟಿಎಂಸಿ

ಕಟ್ಟಡ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಒಟ್ಟು 4 ಕೋಟಿ ರೂ. ವೆಚ್ಚದಲ್ಲಿ 371 ಬುಲೆಟ್ ಹಾಗೂ ಪಿಟಿಝಡ್ ಸಿಸಿಟಿವಿ ಕ್ಯಾಮರಾಗಳು, ಎಲ್ಇಡಿ ಪರದೆ, ಪಿಸಿಆರ್, ಸರ್ವರ್, ಮತ್ತಿತರ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಿದ್ಧತೆ ನಡೆಸಲಾಗಿದೆ.

ಟ್ರಾಫಿಕ್ ಜಾಮ್, ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹುಬ್ಬಳ್ಳಿಯಲ್ಲಿ ಶೀಘ್ರವೇ ತಲೆ ಎತ್ತಲಿದೆ  ಟಿಎಂಸಿ
ಸಂಚಾರ ನಿರ್ವಹಣಾ ಕೇಂದ್ರ ಸಿದ್ಧವಾಗುತ್ತಿದೆ.
Follow us
TV9 Web
| Updated By: sandhya thejappa

Updated on: Apr 11, 2022 | 9:08 AM

ಹುಬ್ಬಳ್ಳಿ: ಅವಳಿನಗರದ ಸಂಚಾರ ದಟ್ಟಣೆ (Traffic Jam), ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಹು-ಧಾ ಪೊಲೀಸ್ ಕಮಿಷನರೇಟ್​ನ ನವನಗರದ ಕಚೇರಿ ಕಟ್ಟಡದಲ್ಲಿ (Building) ಸ್ಮಾರ್ಟ್ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ) ಶೀಘ್ರವೇ ತಲೆ ಎತ್ತಲಿದೆ. ಮಹಾನಗರ ಪಾಲಿಕೆಯ ಗಾಂಧಿ ನಗರ ವಿಕಾಸ ಯೋಜನೆಯ ವಿಶೇಷ ಅನುದಾನದಡಿ ಐದು ಕೋಟಿ ರೂ. ವೆಚ್ಚದಲ್ಲಿ ಕಮಿಷನರೇಟ್ ಕಚೇರಿಯ ಎರಡನೇ ಮಹಡಿಯಲ್ಲಿ 1.3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ. ಇದರಲ್ಲಿ ಒಂದು ಹಾಲ್, ಒಂದು ಕಚೇರಿ, ಪುರುಷ- ಮಹಿಳೆಯರ ಪ್ರತ್ಯೇಕ ಶೌಚಗೃಹಗಳು ಒಳಗೊಂಡಿದೆ.

ಕಟ್ಟಡ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಒಟ್ಟು 4 ಕೋಟಿ ರೂ. ವೆಚ್ಚದಲ್ಲಿ 371 ಬುಲೆಟ್ ಹಾಗೂ ಪಿಟಿಝಡ್ ಸಿಸಿಟಿವಿ ಕ್ಯಾಮರಾಗಳು, ಎಲ್ಇಡಿ ಪರದೆ, ಪಿಸಿಆರ್, ಸರ್ವರ್, ಮತ್ತಿತರ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಿದ್ಧತೆ ನಡೆಸಲಾಗಿದೆ.

ಅವಳಿನಗರದ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 371 ಅತ್ಯಾಧುನಿಕ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಒಂದೊಂದು ಠಾಣೆ ವ್ಯಾಪ್ತಿಯಲ್ಲಿ 15 ರಿಂದ 30ರವರೆಗೆ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘನೆ, ಹೆಲೈಟ್ ರಹಿತ ಬೈಕ್ ಚಾಲನೆ, ಟ್ರಿಪಲ್ ರೈಡಿಂಗ್, ಸಿಗ್ನಲ್ ಜಂಪಿಂಗ್, ಮತ್ತಿತರ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಛಾಯಾಚಿತ್ರವನ್ನು ಸ್ವಯಂಪ್ರೇರಿತವಾಗಿ ತೆಗೆದು ರವಾನಿಸುತ್ತದೆ. ಟಿಎಂಸಿಯಲ್ಲಿರುವ ಸಿಬ್ಬಂದಿ ವಾಹನದ ಮಾಲೀಕರ ವಿಳಾಸಕ್ಕೆ ದಂಡದ ನೋಟಿಸ್ ರವಾನಿಸುತ್ತಾರೆ.

ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸ್ಮಾರ್ಟ್ ಟಿಎಂಸಿ ವ್ಯವಸ್ಥೆಗೆ ಮುಂದಾಗಿರುವುದು ವಿಶೇಷವಾಗಿದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಬಿಸಿ ಮುಟ್ಟಿಸಲು ನಿರ್ಧಾರ ಕೈಗೆತ್ತಿಕೊಂಡಿರುವುದು ಸಾರ್ವಜನಿಕರಿಗೆ ಅನುಕೂಲವಾಗಬೇಕಿದೆ.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ

ನಿನ್ನೆ ಬಸವರಾಜ್‌ ದಡೇಸಗೂರು ಇಂದು ಶಿವರಾಜ್ ತಂಗಡಗಿ; ಕೊಪ್ಪಳದಲ್ಲಿ ಹನುಮ ಮಾಲೆ ಪಾಲಿಟಿಕ್ಸ್, ಯಾರ ಕೈ ಹಿಡಿಯುತ್ತಾನೆ ಆಂಜನೇಯ?

ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ