ನೂರೆಂಟು ವಿಘ್ನ ಎದುರಿಸಿ ಇಂದು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ವಿರಾಜಮಾನನಾಗಿ ಕುಳಿತು ಕುಳಿತುಕೊಳ್ಳಲಿರುವ ಗಣೇಶ

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳು ತಾಯಾರಾಗಿದ್ದು, ಶಾಂತಿಯುತ ಗಣೇಶೋತ್ಸವಕ್ಕೆ ಪೊಲೀಸ್​ರೂ ಕೂಡಾ ಸನ್ನದ್ಧರಾಗಿದ್ದಾರೆ.

ಹುಬ್ಬಳ್ಳಿ ಸೆ.19: ವಾಣಿಜ್ಯ ನಗರಿ ಹುಬ್ಬಳ್ಳಿ (Hubballi) ಹೃದಯಭಾಗ ಚೆನ್ನಮ್ಮ ವೃತ್ತದ (Chennamma Circle) ಪಕ್ಕದಲ್ಲಿರುವ ಈದ್ಗಾ (ಚೆನ್ನಮ್ಮ) ಮೈದಾನದಲ್ಲಿ (Idgah Ground) ಗಣೇಶ (Ganesha) ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಹೇರಂಬನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳು ತಾಯಾರಾಗಿದ್ದು, ಶಾಂತಿಯುತ ಗಣೇಶೋತ್ಸವಕ್ಕೆ ಪೊಲೀಸ್​ರೂ ಕೂಡಾ ಸನ್ನದ್ಧರಾಗಿದ್ದಾರೆ. ಈಗಾಗಲೆ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಬೆಳಿಗ್ಗೆ 9.30 ಕ್ಕೆ ನಗರದ ಮೂರು ಸಾವಿರ ಮಠದಿಂದ ವಿಜೃಂಭಣೆಯಿಂದ ಗಣೇಶನ ಮೆರವಣಿಗೆ ಆರಂಭವಾಗುತ್ತದೆ.ಮೆರವಣಿಗೆ ಮುಖಾಂತರ ಗಣೇಶ ಮೂರ್ತಿ ಈದ್ಗಾ ಮೈದಾನಕ್ಕೆ ಕರೆತರಲಾಗುತ್ತದೆ. ಸರಿಯಾಗಿ 10.30 ಕ್ಕೆ ಐದು ಅಡಿ ಎತ್ತರದ ಮಣ್ಣಿನ ಗಣೇಶ ಮೂರ್ತಿಯನ್ನು ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ನಂತರ ಹೋಮ, ಹವನ ಜೊತೆಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರುತ್ತದೆ. ತದನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಮೂರು ದಿನಗಳ ಕಾಲ ಇದೆ ರೀತಿಯ ಧಾರ್ಮಿಕ ಕಾರ್ಯಕ್ರಮ ಜರಗುಲಿವೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದ ವಿವಾದದ ಹಿಂದಿನ ಕಥೆ ಏನು? ಇಲ್ಲಿದೆ ಮಾಹಿತಿ

ಇನ್ನೂ ಶಾಂತಿಯುತವಾಗಿ ಹಬ್ಬ ಆಚರಣೆಗೆ ಪೊಲೀಸ್ ಇಲಾಖೆ ಸಹ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ಮೈದಾನವನ್ನು ಎರಡು ಭಾಗ ಮಾಡಿ, ನಮಾಝ್ ಮಾಡುವ ಸ್ಥಳ ಹಾಗೂ ಮೂರ್ತಿ ಪ್ರತಿಷ್ಠಾಪನೆ ಸ್ಥಳದ ನಡುವೆ ತಗಡಿನ ಸೀಟ್​ಗಳನ್ನು ಹಾಕಿ ಅದರ ಮೇಲೆ ಪರದೆ ಕಟ್ಟಲಾಗಿದೆ‌.

ಮೈದಾನದಲ್ಲಿ ಸುತ್ತಲೂ ಸಿಸಿ ಕ್ಯಾಮರಾಗಳ‌ನ್ನು ಅಳವಡಿಸಲಾಗಿದೆ. ಮೈದಾನದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಆರಂಭಿಸಲಾಗಿದೆ, ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಈದ್ಗಾ ಮೈದಾನಕ್ಕೆ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಭೇಟಿ ನೀಡಿ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 am, Tue, 19 September 23

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us