ಧಾರವಾಡ (Dharwad): ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Dharwad) ಬಿಜೆಪಿ ಬಿಟ್ಟು ಹೋದರು. ಪಕ್ಷ ಬಲಪಡಿಸುವ ಕಾರ್ಯ ನಾವು ಮುಂದುವರಿಸ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಶೆಟ್ಟರ್ ಬಿಜೆಪಿ ಬಿಟ್ಟು ಹೋಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ ಜೋಶಿಯವರು, ಶೆಟ್ಟರ್ ಅವರನ್ನ ಪಕ್ಷದಲ್ಲಿ ಉಳಿಸಿಕೊಳ್ಳಲು ನಾನು ಕೊನೆಯ ಕ್ಷಣದವರೆಗೂ ಪ್ರಯತ್ನಿಸಿದ್ದೇನೆ. ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರಕ್ಕೆ ಬನ್ನಿ ನಾನು ಹೈಕಮಾಂಡ್ ಜೊತೆ ಮಾತನಾಡ್ತೇನೆ ಎಂದು ಶೆಟ್ಟರ್ ಗೆ ಮನವಿ ಮಾಡಿದ್ದೆ. ಆದರೆ ಶೆಟ್ಟರ್ ನನ್ನ ಮಾತು ಕೇಳಲಿಲ್ಲ ಎಂದರು (Karnataka Assembly Elections 2023).
ಶೆಟ್ಟರ್ ನಿರ್ಧಾರಕ್ಕೆ ಬೇಸರ ಹೊಂದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಶೆಟ್ಟರ್ ಇಲ್ಲದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷಕ್ಕಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಅಖಾಡಕ್ಕಿಳಿದಿದ್ದಾರೆ. ಧಾರವಾಡದಲ್ಲಿಂದು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿದ ಅವರು, ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಅರವಿಂದ ಬೆಲ್ಲದ್ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಮೃತ್ ದೇಸಾಯಿ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿದರು. ಈ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ನೈತಿಕ ಸ್ಥೈರ್ಯ ತುಂಬಿದ ಅವರು, ಹುಬ್ಬಳ್ಳಿ ಧಾರವಾಡದಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಚಿಕ್ಕೋಡಿಗೆ ತೆರಳಿ, ನಿಖಿಲ್ ಕತ್ತಿ ಅವರ ನಾಮಪತ್ರ ಸಲ್ಲಿಕೆಗೂ ಸಾಕ್ಷಿಯಾದರು.
Also read:
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೆಟ್ಟರ್ ಪಕ್ಷ ಬಿಟ್ಟು ಹೋಗಬಾರದಿತ್ತು. ಅವರನ್ನ ಉಳಿಸಿಕೊಳ್ಳಲು ನಾನು ಕೊನೆಯ ಕ್ಷಣದವರೆಗೂ ರಾಜ್ಯಸಭೆ ಮೂಲಕ ಕೇಂದ್ರಕ್ಕೆ ಬನ್ನಿ, ಸಚಿವರಾಗಿ ಎಂದು ಮನವಿ ಮಾಡಿದೆ. ಆದರೆ, ಶೆಟ್ಟರ್ ಯಾವುದಕ್ಕೂ ಒಪ್ಪಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಶೆಟ್ಟರ್ ಪಕ್ಷ ಬಿಟ್ಟು ಹೋದರೂ ಸಹ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಚಿಂತೆ ಮಾಡುವ ಅಗತ್ಯವಿಲ್ಲ. ನಾವು ಪಕ್ಷ ಕಟ್ಟುವ ಕಾರ್ಯದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ತೇವೆ ಎಂದು ಜೋಶಿಯವರು ಇದೇ ವೇಳೆ ಹೇಳಿದರು.
ಇಂದು ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಹಾಗೂ ಪಕ್ಷದ ಇತರ ಸಭೆಗಳಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. pic.twitter.com/Si7YIdg6PR
— Pralhad Joshi (@JoshiPralhad) April 18, 2023
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ರಾಷ್ಟ್ರೀಯ ಬಿಜೆಪಿ ನಾಯಕರು ರಾಜ್ಯಕ್ಕೆ ಬಂದು ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಜೋಶಿಯವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:02 pm, Tue, 18 April 23