AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ. ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ […]

 India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?
Guru
| Edited By: |

Updated on: Jun 26, 2020 | 11:13 AM

Share

ಧಾರವಾಡ: ಕೇವಲ ಎರಡೂವರೆ ವರ್ಷದ ಪುಟಾಣಿ ಬಾಲಕಿಯೊಬ್ಬಳು ತನ್ನ ತೊದಲು ನುಡಿಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳು, ರಾಷ್ಟ್ರೀಯ ನಾಯಕರು, ಇತಿಹಾಸದ ಘಟನಾವಳಿಗಳು, ಪ್ರಾಣಿ-ಪಕ್ಷಿಗಳ ಅನುಕರಣೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗ್‌ಗೆ ಸೇರ್ಪಡೆಯಾಗಿದ್ದಾಳೆ.

ಮೂಲತಃ ಧಾರವಾಡ ತಾಲೂಕಿನ ಜೋಡಳ್ಳಿ ಗ್ರಾಮದ ಉಮೇಶ ಮುತ್ತಗಿ-ಸಕ್ಕೂಬಾಯಿ ದಂಪತಿಯ ಎರಡೂವರೆ ವರ್ಷದ ಮಗು ವೈಷ್ಣವಿ ಈ ಸಾಧನೆಗೈದ ಬಾಲಕಿ. ಬಾಲಕಿಯ ತಂದೆ ಉಮೇಶ ಮುತ್ತಗಿ ಉತ್ತರ ಪ್ರದೇಶದ ಮಥುರಾದಲ್ಲಿ ಭಾರತೀಯ ಸೇನೆಯ 51 ಮೀಡಿಯಂ ರೆಜಿಮೆಂಟ್‌ನಲ್ಲಿ ಹವಾಲ್ದಾರರಾಗಿ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಗಳು ವೈಷ್ಣವಿ ಕಳೆದ ಮಾರ್ಚ್ ತಿಂಗಳಲ್ಲಿ India Book of Records ನಲ್ಲಿ ತನ್ನ ಪ್ರತಿಭೆಯ ಮೂಲಕ ದಾಖಲೆ ಬರೆದಿದ್ದಾಳೆ.

ಚಿಕ್ಕ ವಯಸ್ಸಿನಲ್ಲಿಯೇ ಅಮೋಘ ಸಾಧನೆ ವೈಷ್ಣವಿ ಚಿಕ್ಕ ವಯಸ್ಸಿರನಲ್ಲಿಯೇ ಸ್ಪಷ್ಟವಾಗಿ ರಾಷ್ಟ್ರ ಗೀತೆ, ಐದು ಸಂಸ್ಕೃತದ ಮಂತ್ರಗಳು, 170 ಇತಿಹಾಸದ ಮತ್ತು ಈಗಿನ ಶ್ರೇಷ್ಠ ನಾಯಕರ ಹೆಸರು ಹೇಳುವುದು, ಪ್ರಾಣಿ, ಪಕ್ಷಿ, ಹಣ್ಣು, ತರಕಾರಿ, ಸೌರ ಮಂಡಲದ ಗ್ರಹಗಳ ಹೆಸರು, ಗಣಿತದ ಚಿಹ್ನೆಗಳು, ವಾರಗಳ ಹೆಸರು, ತಿಂಗಳುಗಳು, ಶರೀರದ ವಿಭಿನ್ನ ಭಾಗಗಳ ಹೆಸರುಗಳನ್ನು ನಿಖರವಾಗಿ ಹೇಳುತ್ತಾಳೆ. ಜೊತೆಗೆ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವ ಜಾಣ್ಮೆಯಿದೆ. 1ರಿಂದ 70ರ ವರೆಗೆ ಅಂಕಿಗಳನ್ನ ಸರಳವಾಗಿ ಗುರುತಿಸುತ್ತಾಳೆ.

ಇದೆಲ್ಲಕ್ಕಿಂತ ಅಚ್ಚರಿಯಂದ್ರೆ ಅನೇಕ ಪ್ರಾಣಿ-ಪಕ್ಷಿಗಳ ಧ್ವನಿಯನ್ನು ಅನುಕರಣೆ ಮಾಡುವುದು. ಸ್ಪಷ್ಟವಾದ ವಾಕ್ ಚಾತುರ್ಯ ದಿಂದ ಎಳೆಯ ವಯಸ್ಸಿನಲ್ಲಿಯೇ ವೈಷ್ಣವಿ ಭಾರತದಲ್ಲಿ ಈ ದಾಖಲೆ ಬರೆದಿರುವುದು ಧಾರವಾಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. -ನರಸಿಂಹಮೂರ್ತಿ ಪ್ಯಾಟಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ