ಧಾರವಾಡ: ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ-ಇಬ್ಬರು ಸಾವು

| Updated By: ವಿವೇಕ ಬಿರಾದಾರ

Updated on: Aug 14, 2023 | 12:25 PM

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಧಾರವಾಡ ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡ: ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ-ಇಬ್ಬರು ಸಾವು
ಸಾಂದರ್ಭಿಕ ಚಿತ್ರ
Follow us on

ಧಾರವಾಡ (ಆ.14): ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರು (Car) ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಧಾರವಾಡ (Dharwad) ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಕಾರಿನಲ್ಲಿದ್ದ ವಿನಯ ಹಿರೇಮಠ(28), ಸಂದೀಪ್(29) ಮೃತ ದುರ್ದೈವಿಗಳು. ಇನ್ನು ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲೇ‌ ಓರ್ವ ಮೃತಪಟ್ಟಿದ್ದು, ಮತ್ತೋರ್ವ ‌ಚಿಕಿತ್ಸೆ‌ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು.

ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಹೊಂದಿರುವ ಆರೋಪ ಕೇಳಿಬಂದಿದೆ. ದಾವಣಗೆರೆ ತಾಲೂಕಿನ ಕಲ್ಕಕೇರಿ ಕ್ಯಾಂಪ್ ನಿವಾಸಿ ನೇತ್ರಾವತಿ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಒಂದು ಕೆಜಿ 700 ಗ್ರಾಂದ ಹೆಣ್ಣು ಮಗು ಹಾಗೂ ಒಂದು ಕೆಜಿ 800 ಗ್ರಾಮದ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಗಂಡು ಮಗು ನಿಧನವಾಗಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ; 510 ಗ್ರಾಂ ಗಾಂಜಾ ಜಪ್ತಿ

ಇದೀಗ ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಬದುಕುಳಿದ ಹೆಣ್ಣು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದ ಮುಂದೆ ಸಂಬಂಧಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

18 ನಾಯಿಗಳಿಗೆ ವಿಷ ಪ್ರಾಷಣ ಮಾಡಿ ಕೊಲೆ ಶಂಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆರ್.ಆರ್ ನಗರದಲ್ಲಿ 18 ಶ್ವಾನಗಳ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಿಷ ಪ್ರಾಷಣ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅನಿಮಲ್ ಆಕ್ಟಿವಿಸ್ಟ್ ಮೃತ ಶ್ವಾನಗಳ ದೇಹಗಳ ಪತ್ತೆಗೆ ಶೋಧ ನಡೆಸುತ್ತಿದ್ದು, ಇವರೆಗೆ ಏಳು ಶ್ವಾನಗಳ ಮೃತದೇಹ ಪತ್ತೆಯಾಗಿದೆ. ಏಳರಲ್ಲಿ ಐದು ಮೃತದೇಹಗಳು ಸಂಪೂರ್ಣ ಕೊಳೆತು ಹೋಗಿವೆ. ಈ ಬಗ್ಗೆ ಆರ್.ಆರ್ ನಗರ ಪೋಲಿಸ್ ಠಾಣೆಯಲ್ಲಿ ಎಫ್​ಐಆರ್​ ದಾಖದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ