Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಉಣಕಲ್ ಸಿದ್ದಪ್ಪಜ್ಜನ ಜಾತ್ರೆಯಲ್ಲಿ ಪೈಲ್ವಾನರ ಜಿದ್ದಾಜಿದ್ದಿಗೆ ಮನಸೋತ ಪ್ರೇಕ್ಷಕರು

ಮೊದಲ ಬಹುಮಾನವನ್ನು ಬೆಳಗಾವಿಯ ಅಪ್ಪು ಪೈಲ್ವಾನ್ ಮುಡಿಗೇರಿಸಿಕೊಂಡರು. ದ್ವೀತಿಯ ಬಹಮಾನಕ್ಕೆ ಕಾರ್ತೀಕ್ ಇಂಗಳಗಿ ಹಾಗೂ ಪರಶುರಾಮ ಅವರ ನಡುವೆ ಕುಸ್ತಿ ನಡೆಯಿತು. ಮೂರನೇ ಬಹುಮಾನವನ್ನು ಸುನೀಲ್ ಪೈಲ್ವಾನ್ ಪಡೆದುಕೊಂಡರು.

ಹುಬ್ಬಳ್ಳಿ: ಉಣಕಲ್ ಸಿದ್ದಪ್ಪಜ್ಜನ ಜಾತ್ರೆಯಲ್ಲಿ ಪೈಲ್ವಾನರ ಜಿದ್ದಾಜಿದ್ದಿಗೆ ಮನಸೋತ ಪ್ರೇಕ್ಷಕರು
ಪೈಲ್ವಾನರ ಜಿದ್ದಾಜಿದ್ದಿ
Follow us
TV9 Web
| Updated By: sandhya thejappa

Updated on: Apr 07, 2022 | 5:07 PM

ಹುಬ್ಬಳ್ಳಿ: ಉಣಕಲ್ ಸಿದ್ದಪ್ಪಜ್ಜನ ಜಾತ್ರೆ ಅಂದರೆ ಉತ್ತರ ಕರ್ನಾಟಕ (Uttara Karnataka) ಭಾಗದ ಹೆಸರಾಂತ ಜಾತ್ರೆ. ಈ ಜಾತ್ರೆ ತನ್ನದೇ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಈ ಜಾತ್ರೆಗೆ ಕುಸ್ತಿ ಪಟುಗಳು (Wrestlers) ಆಗಮಿಸಿ ತಮ್ಮ ಪ್ರದರ್ಶನ ನೀಡುತ್ತಾರೆ. ಈ ಜಾತ್ರೆ ಸಾಂಸ್ಕೃತಿಕ ಹಾಗೂ ಜಾನಪದ, ಕ್ರೀಡೆಗಳಿಗೆ ಪ್ರೋತ್ಸಾಹವಂತದ್ದು. ಹುಬ್ಬಳ್ಳಿಯ ಉಣಕಲ್ ಸಿದ್ದಪ್ಪಜ್ಜನ ಜಾತ್ರೆಯ ಅಂಗವಾಗಿ ನಡೆದ ಬಯಲು ಕುಸ್ತಿ ಸ್ಪರ್ಧೆಯಲ್ಲಿ ಪೈಲ್ವಾನರ ಜಿದ್ದಾಜಿದ್ದಿಗೆ ಪ್ರೇಕ್ಷಕರು ಮನಸೋತರು. ಜಾತ್ರೆ ನಡೆಯುವಾಗ ಪ್ರತಿ ವರ್ಷವೂ ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿತ್ತು.

ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಸ್ಪರ್ಧೆಗಳು ನಡೆದಿರಲಿಲ್ಲ. ಆದ್ದರಿಂದ ಈ ಬಾರಿ ನಡೆದ ಜಿದ್ದಾಜಿದ್ದಿಗೆ ಸಾವಿರಾರು ಕುಸ್ತಿ ಪ್ರೇಮಿಗಳು ಸಾಕ್ಷಿಯಾದರು. ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ ರಾಜ್ಯ ಹಾಗೂ ನೆರೆ ರಾಜ್ಯಗಳ ಕುಸ್ತಿಪಟುಗಳು ಹಾಕಿದ ಪಟ್ಟುಗಳು ಗಮನ ಸೆಳೆದವು. ಎಂಟು ವರ್ಷದ ಬಾಲಕರಿಂದ ಹಿಡಿದು ಪುರುಷರ ತನಕ ವಿವಿಧ ವಯೋಮಾನದ ಪೈಲ್ವಾನರಿಗೆ ಸ್ಪರ್ಧೆಗಳು ನಡೆದವು. ಮೊದಲ ನಾಲ್ಕು ಸಂಖ್ಯೆಗಳ ಕುಸ್ತಿಯ ವೇಳೆ ಸ್ಪರ್ಧಿ ಹಾಗೂ ಪ್ರತಿಸ್ಪರ್ಧಿ ಗೆಲುವಿಗಾಗಿ ಹೋರಾಟ ಮಾಡುತ್ತಿದ್ದಾಗ ಜನ ಚಪ್ಪಾಳೆ ಹೊಡೆದು ಸಂಭ್ರಮಿಸಿದರು.

ಇನ್ನು ಉಣಕಲ್ ಗ್ರಾಮದ ಹಿರಿಯ ಪೈಲ್ವಾನರು ಹಾಗೂ ಕುಸ್ತಿ ಪ್ರೇಮಿಗಳು ತಮ್ಮ ಕುಟುಂಬದ ಹಿರಿಯರ ಹೆಸರಿನಲ್ಲಿ ಪಂದ್ಯಗಳನ್ನು ಕಟ್ಟಿದರು. ಇದರಿಂದ ಪ್ರತಿ ಸ್ಪರ್ಧೆಗಳು ರಂಗೇರಿದ್ದವು. ಮೊದಲ ಬಹುಮಾನ 21 ಸಾವಿರ ರೂ., ದ್ವಿತೀಯ 15 ಸಾವಿರ ರೂ., ಮೂರನೇ 10 ಸಾವಿರ ರೂ. ಮತ್ತು ನಾಲ್ಕನೇ ವಿಜೇತರಿಗೆ 5,000 ರೂಪಾಯಿ ನೀಡಲಾಯಿತು.

ಮೊದಲ ಬಹುಮಾನವನ್ನು ಬೆಳಗಾವಿಯ ಅಪ್ಪು ಪೈಲ್ವಾನ್ ಮುಡಿಗೇರಿಸಿಕೊಂಡರು. ದ್ವೀತಿಯ ಬಹಮಾನಕ್ಕೆ ಕಾರ್ತೀಕ್ ಇಂಗಳಗಿ ಹಾಗೂ ಪರಶುರಾಮ ಅವರ ನಡುವೆ ಕುಸ್ತಿ ನಡೆಯಿತು. ಮೂರನೇ ಬಹುಮಾನವನ್ನು ಸುನೀಲ್ ಪೈಲ್ವಾನ್ ಪಡೆದುಕೊಂಡರು. ನಾಲ್ಕನೇ ಬಹುಮಾನದಲ್ಲಿ ಜಟ್ಟಿಗಳಾದ ದೃವ ಕೋಟಿ ಉಣಕಲ್ ಮತ್ತು ಲಿಂಗರಾಜ ಬೊಮ್ಮನಹಳ್ಳಿ ನಡುವೆ ರೋಚಕ ಪಂದ್ಯ ಏರ್ಪಟ್ಟಿತು. ಆದರೆ ಫಲಿತಾಂಶ ಮಾತ್ರ ಸಮವೆಂದು ಹೊರ ಬಿತ್ತು.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ

IPL 2022 PBKS vs GT Live Streaming: ಗುಜರಾತ್- ಪಂಜಾಬ್ ಮುಖಾಮುಖಿ; ಪಂದ್ಯದ ಬಗೆಗಿನ ಪೂರ್ಣ ಮಾಹಿತಿ

ಬೆಳಗಾವಿ ಅಜ್ಜಿ ಬಳ್ಳಾರಿ ಕಾಲೇಜಿಗೆ ದೇಹ ದಾನ ಮಾಡಿ ಸಾರ್ಥಕತೆ ಮೆರೆದರು ! ಇದಕ್ಕೆ ಪ್ರೇರಣೆ ಯಾರು? ಇಲ್ಲಿದೆ ಕ್ರಾಂತಿಕಾರಿ ಸ್ಟೋರಿ!

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್