Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋ ಪಿಲ್ಲರ್ ಕುಸಿದು​ ಇಬ್ಬರು ಸಾವು ಪ್ರಕರಣ: ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿ ವೇಳೆ ಕಬ್ಬಿಣದ ಪಿಲ್ಲರ್ ಕುಸಿದು​ ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಭಂದಿಸಿದಂತೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

Namma Metro: ಮೆಟ್ರೋ ಪಿಲ್ಲರ್ ಕುಸಿದು​ ಇಬ್ಬರು ಸಾವು ಪ್ರಕರಣ: ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 10, 2023 | 4:49 PM

ಧಾರವಾಡ: ಬೆಂಗಳೂರಲ್ಲಿ (Bengaluru) ಮೆಟ್ರೋ ಕಾಮಗಾರಿ (Metro construction) ವೇಳೆ ಕಬ್ಬಿಣದ ಪಿಲ್ಲರ್ ಕುಸಿದು​ ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಭಂದಿಸಿದಂತೆ ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. BMRCL ಈಗಾಗಲೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲ ಮಾಹಿತಿ ಪಡೆಯುತ್ತಿದ್ದೇನೆ. ನಾಗವಾರ್‌ನಲ್ಲಿ ಸ್ಟೀಲ್ ಪಿಲ್ಲರ್ ಕುಸಿದಿದೆ. ಗದಗನ ಹೆಣ್ಣು ಮಗಳು ಹಾದು ಹೋಗುವಾಗ ಕಬ್ಬಿಣದ ಪಿಲ್ಲರ್ ತಲೆ ಮೇಲೆ ಬಿದ್ದು ಸಾವಾಗಿದೆ. ಅದು ಅತ್ಯಂತ ದುರದೃಷ್ಟಕರ. ಈ ಬಗ್ಗೆ ತನಿಖೆ ಮಾಡಿಸುತ್ತೇವೆ. ಏನು ಕಾರಣ? ಯಾರು ಗುತ್ತಿಗೆದಾರ? ಎಲ್ಲವನ್ನೂ ತನಿಖೆ ಮಾಡಲಾಗುವುದು. ಸಂಬಂಧಿಸಿವರ ಮೇಲೆ ಪ್ರಕರಣ ದಾಖಲಿಸಲು ಹೇಳಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ಬಿದ್ದು ತಾಯಿ ಮತ್ತು ಮಗು ಸಾವು

40 ಪರ್ಸೆಂಟ್ ಕಮೀಷನ್‌ದಿಂದಲೇ ಅಪಘಡ ಎಂದು ಡಿಕೆಶಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಕಾಮಾಲೆ ಕಣ್ಣಿಯಿಂದ ಎಲ್ಲವನ್ನು ನೋಡಿದರೇ ಹೀಗೆ. ಅವರ ಕಾಲದಲ್ಲಿ ಏನೆಲ್ಲ ಆಗಿದೆ. ಅದಕ್ಕೆಲ್ಲ ಅವರು ಇರೋವಾಗ ಹಂಡ್ರೆಡ್ ಪರ್ಸೆಂಟ್ ಕಮೀಷನ್​ ಅಂತಾ ಹೇಳೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ಕಬ್ಬಿಣ ಕಂಬಿಗಳ ಪಿಲ್ಲರ್ ನಿರ್ಮಾಣ ಹಂತದಲ್ಲಿ ದೋಷ

ಹೆಣ್ಣೂರು-ನಾಗವಾರ ಮೆಟ್ರೋ ಮಾರ್ಗದಲ್ಲಿ ದುರಂತ ಸಂಭವಿಸಿದೆ. ಕಬ್ಬಿಣ ಕಂಬಿಗಳ ಪಿಲ್ಲರ್ ನಿರ್ಮಾಣ ಹಂತದಲ್ಲಿ ದೋಷ ಕಂಡುಬಂದಿದೆ. ಕಂಬಿ ಕುಸಿದುಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಾಯಿ, ಮಗು ಸಾವನ್ನಪ್ಪಿದ್ದಾರೆ. ತಾಂತ್ರಿಕ ಅಂಶಗಳ ಬಗ್ಗೆ ಪರಿಶೀಲನೆ ನಡೆಸಬೇಕು. ನಿರ್ಮಾಣ ಹಂತದಲ್ಲಿ ದೋಷ ಕಂಡು ಬಂದರೆ ಕಾಮಗಾರಿ ನಿಲ್ಲಿಸುತ್ತೇವೆ ಎಂದು ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್​ ಹೇಳಿದ್ದಾರೆ.

ಐರನ್ ಪಿಲ್ಲರ್ Structural problem ಇತ್ತು ಅಂತ ಮೇಲ್ನೋಟಕ್ಕೆ ಕಂಡುಬಂದಿದೆ. ರಸ್ತೆ ಮೇಲೆ ಬಿದ್ದ ಹಿನ್ನೆಲೆ ತಾಯಿ ಮಗು ಮೃತವಾಗಿದೆ. Technical aspects ಪರಿಶೀಲನೆ ಆಗಬೇಕು. ಅದನ್ನು ತಜ್ಞರ ತಂಡ ಮಾಡಲಿದೆ. Structural fault ಇರೋ ಪಿಲ್ಲರ್‌ಗಳ ಕೆಲಸ ನಿಲ್ಲಿಸಲಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!