AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saansad Adarsh Gram Yojana: ಆದರ್ಶ ಗ್ರಾಮ ಯೋಜನೆಯಡಿ ಧಾರವಾಡದಲ್ಲಿ ಸರ್ಕಾರಿ ಶಾಲೆ ಅಭಿವೃದ್ದಿಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Pralha Joshi: ಈ ಶಾಲೆ ಬರುವ ದಿನಗಳಲ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ವ್ಯಕ್ತಪಡಿಸಿದ್ದಾರೆ.

Saansad Adarsh Gram Yojana: ಆದರ್ಶ ಗ್ರಾಮ ಯೋಜನೆಯಡಿ ಧಾರವಾಡದಲ್ಲಿ ಸರ್ಕಾರಿ ಶಾಲೆ ಅಭಿವೃದ್ದಿಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಆದರ್ಶ ಗ್ರಾಮ ಯೋಜನೆಯಡಿ ಧಾರವಾಡದಲ್ಲಿ ಸರ್ಕಾರಿ ಶಾಲೆ ಅಭಿವೃದ್ದಿಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
TV9 Web
| Updated By: ಸಾಧು ಶ್ರೀನಾಥ್​|

Updated on:Feb 24, 2023 | 7:08 PM

Share

ಧಾರವಾಡ: ಧಾರವಾಡದ (Dharwad) ಹಾರೋಬೆಳವಡಿ ಸರ್ಕಾರಿ ಶಾಲೆಗಳ ನೂತನ ಕಟ್ಟಡಗಳನ್ನ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಇಂದು ಲೋಕಾರ್ಪಣೆ ಮಾಡಿದರು. ಸಂಸದರ ಆದರ್ಶ ಗ್ರಾಮ ಯೋಜನೆಯ ಅಡಿಯಲ್ಲಿ (Saansad Adarsh Gram Yojana -SAGY) ಧಾರವಾಡದ ಹಾರೋಬೆಳವಡಿ ಹಿರಿಯ ಪ್ರಾಥಮಿಕ ಶಾಲೆಯ (School) ನೂತನ ಕಟ್ಟಡವನ್ನ 2.84 ಕೋಟಿ ವೆಚ್ವದಲ್ಲಿ ನಿರ್ಮಿಸಲಾಗಿದೆ. ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನ ಸಿಎಸ್ಆರ್ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಶಾಲೆಯ ಎಲ್ಲಾ ವರ್ಗಗಳಿಗೂ ಸ್ಮಾರ್ಟ್ ಕ್ಲಾಸ್ ಅಳವಡಿಸಲಾಗಿದೆ. ಈ ಶಾಲೆ ಬರುವ ದಿನಗಳಲ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂಬ ಭರವಸೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಕ್ತಪಡಿಸಿದ್ದಾರೆ.

ಧಾರವಾಡದ ಕಬ್ಬೇನೂರಿನಲ್ಲಿ ನಿರ್ಮಾಣವಾಗಿರುವ ಸರಕಾರಿ ಹಿರಿಯ ಪ್ರಥಮಿಕ ಶಾಲೆ ನೂತನ ಕಟ್ಟಡವನ್ನ ಇಂಜಿನೀಯರ್ಸ್ ಇಂಡಿಯಾ ಲಿಮಿಟೆಡ್ ನ ಸಿಎಸ್ಆರ್ ಅನುದಾನ 3.30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಅಮೃತ್ ದೇಸಾಯಿ, ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿಯ ಮಂಡಳಿಯ ಅಧ್ಯಕ್ಷರಾದ ತವನಪ್ಪ ಅಷ್ಟಗಿ, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Fri, 24 February 23