ಧಾರವಾಡ: ಧಾರವಾಡದ (Dharwad) ಹಾರೋಬೆಳವಡಿ ಸರ್ಕಾರಿ ಶಾಲೆಗಳ ನೂತನ ಕಟ್ಟಡಗಳನ್ನ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಇಂದು ಲೋಕಾರ್ಪಣೆ ಮಾಡಿದರು. ಸಂಸದರ ಆದರ್ಶ ಗ್ರಾಮ ಯೋಜನೆಯ ಅಡಿಯಲ್ಲಿ (Saansad Adarsh Gram Yojana -SAGY) ಧಾರವಾಡದ ಹಾರೋಬೆಳವಡಿ ಹಿರಿಯ ಪ್ರಾಥಮಿಕ ಶಾಲೆಯ (School) ನೂತನ ಕಟ್ಟಡವನ್ನ 2.84 ಕೋಟಿ ವೆಚ್ವದಲ್ಲಿ ನಿರ್ಮಿಸಲಾಗಿದೆ. ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನ ಸಿಎಸ್ಆರ್ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಶಾಲೆಯ ಎಲ್ಲಾ ವರ್ಗಗಳಿಗೂ ಸ್ಮಾರ್ಟ್ ಕ್ಲಾಸ್ ಅಳವಡಿಸಲಾಗಿದೆ. ಈ ಶಾಲೆ ಬರುವ ದಿನಗಳಲ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂಬ ಭರವಸೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಕ್ತಪಡಿಸಿದ್ದಾರೆ.
ಧಾರವಾಡದ ಕಬ್ಬೇನೂರಿನಲ್ಲಿ ನಿರ್ಮಾಣವಾಗಿರುವ ಸರಕಾರಿ ಹಿರಿಯ ಪ್ರಥಮಿಕ ಶಾಲೆ ನೂತನ ಕಟ್ಟಡವನ್ನ ಇಂಜಿನೀಯರ್ಸ್ ಇಂಡಿಯಾ ಲಿಮಿಟೆಡ್ ನ ಸಿಎಸ್ಆರ್ ಅನುದಾನ 3.30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಸಂಸದ ಆದರ್ಶ ಗ್ರಾಮ ಯೋಜನೆಯ ಅಡಿಯಲ್ಲಿ ಧಾರವಾಡದ ಕಬ್ಬೇನೂರಿನಲ್ಲಿ ನಿರ್ಮಾಣವಾಗಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಯಿತು. pic.twitter.com/S8abw9MYtY
— Pralhad Joshi (@JoshiPralhad) February 24, 2023
ಕಾರ್ಯಕ್ರಮದಲ್ಲಿ ಶಾಸಕರಾದ ಅಮೃತ್ ದೇಸಾಯಿ, ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿಯ ಮಂಡಳಿಯ ಅಧ್ಯಕ್ಷರಾದ ತವನಪ್ಪ ಅಷ್ಟಗಿ, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:02 pm, Fri, 24 February 23