AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು: ಪ್ರಲ್ಹಾದ ಜೋಶಿ

ಕೇಂದ್ರ ಸಚಿವ ಸಂಪುಟವು ಧಾರವಾಡ ಐಐಟಿ ಸೇರಿದಂತೆ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಒಪ್ಪಿಗೆ ನೀಡಿದೆ. ಇದರಿಂದ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ. ಹೊಸ ಸಂಶೋಧನಾ ಪಾರ್ಕ್‌ಗಳು ಮತ್ತು 130 ಅಧ್ಯಾಪಕರ ಹುದ್ದೆಗಳ ಸೃಷ್ಟಿಯೂ ಈ ಯೋಜನೆಯ ಭಾಗವಾಗಿದೆ. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ.

ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು: ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ
Follow us
ವಿವೇಕ ಬಿರಾದಾರ
|

Updated on: May 07, 2025 | 4:49 PM

ನವದೆಹಲಿ, ಮೇ 07: ರಾಜ್ಯದ ಧಾರವಾಡ ಐಐಟಿ (Dharwad IIT) ಸೇರಿದಂತೆ ದೇಶದ 5 ಐಐಟಿಗಳಲ್ಲಿ 11,828.79 ಕೋಟಿ ರೂ. ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದಿದ್ದಾರೆ.

ಈ ಐದು ಪ್ರಮುಖ ಐಐಟಿಗಳಲ್ಲಿ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಸೌಲಭ್ಯಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ, ಕೈಗಾರಿಕೆ-ಶೈಕ್ಷಣಿಕ ಸಂಪರ್ಕವನ್ನು ಬಲಪಡಿಸಲು ಐದು ಹೊಸ ಅತ್ಯಾಧುನಿಕ ಸಂಶೋಧನಾ ಪಾರ್ಕ್‌ಗಳು ಸಹ ಈ ಯೋಜನೆಯಲ್ಲಿ ಬರಲಿವೆ.

ಇದನ್ನೂ ಓದಿ
Image
ಗ್ರೀನ್ ಹೈಡ್ರೋನ್ ಸರ್ಟಿಫಿಕೇಶನ್ ಸ್ಕೀಮ್​​ಗೆ ಚಾಲನೆ
Image
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
Image
ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ನಂಬಿಕೆ ಮೇಲಿನ ದಾಳಿ; ಪ್ರಲ್ಹಾದ್ ಜೋಶಿ
Image
ಕ್ಷೇತ್ರ ವಿಂಗಡಣೆ: ದಕ್ಷಿಣ ಭಾರತಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾದ ಐದು ಹೊಸ ಐಐಟಿಗಳ ಅಭಿವೃದ್ಧಿಗೆ “ಬಿʼ ಹಂತದ ಯೋಜನೆ ಇದಾಗಿದ್ದು, ಕೇಂದ್ರ ಸಂಪುಟದಿಂದ ಅನುಮೋದನೆಗೊಂಡಿತು ಎಂದು ಹೇಳಿದ್ದಾರೆ.

130 ಅಧ್ಯಾಪಕರ ಹುದ್ದೆ ಸೃಷ್ಟಿಗೆ ಅಸ್ತು: 2025-26ರಿಂದ 2028-29ರವರೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು ₹ 11,828.79 ಕೋಟಿ ವೆಚ್ಚದಲ್ಲಿ ಈ ಐಐಟಿಗಳಲ್ಲಿ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗುತ್ತಿದ್ದು, 130 ಅಧ್ಯಾಪಕರ ಹುದ್ದೆಗಳನ್ನು (ಪ್ರೊಫೆಸರ್ ಮಟ್ಟದಲ್ಲಿ ಅಂದರೆ ಹಂತ 14 ಮತ್ತು ಅದಕ್ಕಿಂತ ಹೆಚ್ಚಿನ) ಸೃಷ್ಟಿಸಲು ಸಂಪುಟ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.

ಅನುಷ್ಠಾನ ತಂತ್ರ ಮತ್ತು ಗುರಿಗಳು

ಮುಂದಿನ ನಾಲ್ಕು ವರ್ಷಗಳಲ್ಲಿ ಈ ಐಐಟಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹಂತ ಹಂತವಾಗಿ ಹೆಚ್ಚಿಸಲಾಗುತ್ತದೆ. ಮೊದಲ ವರ್ಷದಲ್ಲಿ 1364 ವಿದ್ಯಾರ್ಥಿಗಳು, 2ನೇ ವರ್ಷದಲ್ಲಿ 1738, 3ನೇ ವರ್ಷದಲ್ಲಿ 1767 ಹಾಗೂ 4ನೇ ವರ್ಷದಲ್ಲಿ 1707 ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದ್ದು, ಒಟ್ಟಾರೆ 6500ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ.

ಈ ಐದು ಐಐಟಿಗಳು ಪ್ರಸ್ತುತ 7,111 ವಿದ್ಯಾರ್ಥಿಗಳ ಸಂಖ್ಯೆಗೆ ಬದಲಾಗಿ 13,687 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಿವೆ. ಅಂದರೆ ಈಗಲೇ 6,576 ವಿದ್ಯಾರ್ಥಿಗಳ ಹೆಚ್ಚಳ ಕಂಡಿದೆ. ಒಟ್ಟು ಸೀಟುಗಳ ಸಂಖ್ಯೆಯಲ್ಲಿನ ಈ ಹೆಚ್ಚಳದೊಂದಿಗೆ ಹೆಚ್ಚುವರಿಯಾಗಿ 6,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಯಾಗುತ್ತಾರೆ. ಈ ಮೂಲಕ ದೇಶದ ಅತ್ಯಂತ ಪ್ರತಿಷ್ಠಿತ ಮತ್ತು ಬೇಡಿಕೆಯ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಆಕಾಂಕ್ಷೆಯನ್ನು ಪೂರೈಸಲು ಸಾಧ್ಯವಾಗಲಿದೆ ಎಂದು ಸಚಿವ ಜೋಶಿ ಅಭಿಪ್ರಾಯಪಟ್ಟರು.

ಕಳೆದ 10 ವರ್ಷಗಳಲ್ಲಿ 23 ಐಐಟಿಗಳಲ್ಲಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 65,000 ದಿಂದ 1.35 ಲಕ್ಷಕ್ಕೆ ಏರಿದೆ. ಅಂದರೆ ಶೇ.100ರಷ್ಟು ಹೆಚ್ಚಾಗಿದೆ. 2014 ರ ನಂತರ ಪ್ರಾರಂಭವಾದ 5 ಐಐಟಿಗಳಲ್ಲಿ 6,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ಹೆಚ್ಚುವರಿ ಮೂಲಸೌಕರ್ಯಗಳನ್ನು ರಚಿಸಲಾಗುವುದು. ಇದರಿಂದ ಪದವಿ ಪೂರ್ವ (ಯುಜಿ), ಸ್ನಾತಕೋತ್ತರ (ಪಿಜಿ) ಮತ್ತು ಪಿಎಚ್‌ಡಿ ಕಾರ್ಯಕ್ರಮಗಳನ್ನು ಒಟ್ಟುಗೂಡಿಸಿದರೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ.

ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿ

ಈ ಐದೂ ಐಐಟಿಗಳ ವಿಸ್ತರಣೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುವುದಲ್ಲದೆ, ಇದಕ್ಕೆ ಅನುಗುಣವಾಗಿ ಅಧ್ಯಾಪಕರು, ಆಡಳಿತ ಸಿಬ್ಬಂದಿ, ಸಂಶೋಧಕರು ಮತ್ತು ಸಹಾಯಕ ಸಿಬ್ಬಂದಿ ಸಂಖ್ಯೆ ಸಹ ಹೆಚ್ಚಾಗಲಿದೆ. ನೇರ ಉದ್ಯೋಗವನ್ನು ಸೃಷ್ಟಿಸಲಾಗುತ್ತದೆ. ಐಐಟಿ ಕ್ಯಾಂಪಸ್‌ಗಳ ವಿಸ್ತರಣೆ ವಸತಿ, ಸಾರಿಗೆ, ಸೇವೆ ಹಾಗೂ ಸ್ಥಳೀಯ ಆರ್ಥಿಕತೆಯನ್ನೂ ಉತ್ತೇಜಿಸುತ್ತದೆ. ಐಐಟಿಗಳಿಂದ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರ ಸಂಖ್ಯೆ ಸಹ ಹೆಚ್ಚಾಗಿ ನಾವೀನ್ಯತೆ, ನವೋದ್ಯಮ ಪರಿಸರ ವ್ಯವಸ್ಥೆಗಳು ಮತ್ತಷ್ಟು ಉತ್ತೇಜನಗೊಳ್ಳುತ್ತವೆ. ವೈವಿಧ್ಯಮಯ ವಲಯಗಳಲ್ಲಿ ಉದ್ಯೋಗ ಸೃಷ್ಟಿಗೆ ಕೊಡುಗೆ ನೀಡುತ್ತವೆ ಎಂದು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

2015-16ರಲ್ಲೇ ಆರಂಭವಾದ ಐಐಟಿಗಳಿವು: ಈ ಐದು ಹೊಸ ಐಐಟಿಗಳಲ್ಲಿ ಆಂಧ್ರಪ್ರದೇಶದ ತಿರುಪತಿ ಐಐಟಿ, ಕೇರಳದ ಪಾಲಕ್ಕಾಡ್), ಛತ್ತೀಸ್‌ಗಢದ ಭಿಲಾಯಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕರ್ನಾಟಕದ ಧಾರವಾಡ ಐಐಟಿಗಳು 2015-16ರಲ್ಲಿ ಆರಂಭವಾಗಿದ್ದರೆ, ಉಳಿದ ಮೂರು 2016-17ರಲ್ಲಿ ಅವುಗಳ ತಾತ್ಕಾಲಿಕ ಕ್ಯಾಂಪಸ್‌ಗಳಿಂದ ಪ್ರಾರಂಭವಾದವುಗಳಾಗಿದ್ದು, ಈಗವು ಶಾಶ್ವತ ಕ್ಯಾಂಪಸ್‌ಗಳಿಂದ ಕಾರ್ಯ ನಿರ್ವಹಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

“ಕೇಂದ್ರ ಸಚಿವ ಸಂಪುಟ ಐಐಟಿಗಳ ಅಭಿವೃದ್ಧಿ ಮತ್ತು ಸಾಮರ್ಥ್ಯ ವಿಸ್ತರಣೆಗೆ ಕೈಗೊಂಡ ಈ ನಿರ್ಣಯ, ಕೌಶಲ್ಯಪೂರ್ಣ ಕಾರ್ಯಪಡೆಯನ್ನು ಸೃಷ್ಟಿಸುತ್ತದೆ. ನಾವೀನ್ಯತೆಗೆ ಚಾಲನೆ ನೀಡುವ ಮೂಲಕ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಮೂಲಕ ರಾಷ್ಟ್ರ ನಿರ್ಮಾಣವನ್ನು ಉತ್ತೇಜಿಸುತ್ತದೆ. ಇದು ಸಾಮಾಜಿಕ ಚಲನಶೀಲತೆಯನ್ನು ಹೆಚ್ಚಿಸುತ್ತದೆ. ಶೈಕ್ಷಣಿಕ ಅಸಮಾನತೆಯನ್ನು ಕಡಿಮೆ ಮಾಡುತ್ತದೆ ಮತ್ತು ಭಾರತದ ಜಾಗತಿಕ ಸ್ಥಾನವನ್ನು ಬಲಪಡಿಸುತ್ತದೆ ” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು