AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸಿ ನೆರವಾಗಿದೆ. ಹಾಗಾದ್ರೆ, ಎಲ್ಲಿಯವರೆಗೆ ವಿಸ್ತರಣೆ ಮಾಡಲಾಗಿದೆ. ಯಾವೆಲ್ಲಾ ಜಿಲ್ಲೆಯ ರೈತರಿಗೆ ಅನ್ವಯಿಸಲಿದೆ ಎನ್ನುವ ವಿವರ ಇಲ್ಲಿದೆ.

ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
Pralhad Joshi
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 16, 2026 | 7:16 PM

Share

ಮುಖ್ಯಾಂಶಗಳು

  • ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು
  • ಜುಲೈ 15ರವರೆಗೆ ಇದ್ದ ಅವಧಿ 31ರವರೆಗೆ ವಿಸ್ತರಣೆ
  • ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಕಾಲಾವಕಾಶ

ಹುಬ್ಬಳ್ಳಿ, (ಜುಲೈ 16): ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ (crop insurance registration) ಅವಧಿ ವಿಸ್ತರಿಸಲಾಗಿದೆ. ರಾಜ್ಯದ ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ ಅನ್ವಯಿಸಲಿದೆ. ಜುಲೈ 15ರವರೆಗೆ ಇದ್ದ ಕಾಲಮಿತಿಯನ್ನು ಜುಲೈ 31ರವರೆಗೆ ವಿಸ್ತರಿಸುವ ಮೂಲಕ ಕೇಂದ್ರ ಸರ್ಕಾರ ಉತ್ತರ ಕರ್ನಾಟಕ ಭಾಗದ ಈ ನಾಲ್ಕು ಜಿಲ್ಲೆಗಳ ರೈತರ ನೆರವಿಗೆ ಧಾವಿಸಿದೆ.

ಈ ಜಿಲ್ಲೆಗಳಲ್ಲಿ ರೈತರು ಮಳೆ ಕೊರತೆಯಿಂದಾಗಿ ಭಿನ್ನ-ವಿಭಿನ್ನ ಬೆಳೆ ಬಿತ್ತನೆ ಮಾಡಿದ್ದು, ಇದರಿಂದಾಗಿ ಬೆಳೆ ವಿಮೆ ಪಾವತಿಸುವಲ್ಲಿ ತಾಂತ್ರಿಕ ತೊಂದರೆ ಎದುರಿಸುತ್ತಿದ್ದರು. ಇದನ್ನು ಮನಗಂಡು ಸಚಿವ ಪ್ರಲ್ಹಾದ ಜೋಶಿ ಅವರು ಈ ಭಾಗದ ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್‌ ಚವ್ಹಾಣ್‌ ಅವರೊಂದಿಗೆ ಚರ್ಚಿಸಿ ಮನವಿ ಮಾಡಿದ್ದರು.

ಇದನ್ನೂ ನೋಡಿ: ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್: ಆಹಾರ ಸಚಿವ ಮಹತ್ವದ ಹೇಳಿಕೆ

ಈ ಜಿಲ್ಲೆಗಳಲ್ಲಿ ಮಳೆ ಅಭಾವ ಬೆಳೆ ವಿಮೆ ನೋಂದಣಿಗೆ ರೈತರಿಗಾಗುತ್ತಿರುವ ತೊಂದರೆ-ತೊಡಕು ಬಗ್ಗೆ ಶಾಸಕರಾದ ಸಿ.ಸಿ.ಪಾಟೀಲ್, ಎಮ್.ಆರ್.ಪಾಟೀಲ್ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ರೈತರೂ ಸಹ ಜೋಶಿ ಅವರ ಗಮನ ಸೆಳೆದಿದ್ದರು. ಈ ಹಿನ್ನಲೆಯಲ್ಲಿ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದರು.

ಅಂತೆಯೇ ಜು.15ರಂದು ರಾಜ್ಯ ಸರ್ಕಾರದ ಕೃಷಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ ತಕ್ಷಣವೇ ಸ್ಪಂದಿಸಿದ್ದಾರೆ. ವಿಮೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ನೋಂದಣಿ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಿದ್ದಾರೆ. ಪ್ರಸ್ತಾವನೆ ಸಲ್ಲಿಸಿದ ಕೇವಲ 24 ಗಂಟೆಯೊಳಗೆ ಕೇಂದ್ರ ಸರ್ಕಾರ ಈ ವಿಶೇಷ ಅನುಮೋದನೆ ನೀಡಿದೆ ಎಂದಿದ್ದಾರೆ ಸಚಿವ ಪ್ರಲ್ಹಾದ ಜೋಶಿ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದು, ಮಳೆ ಕೊರತೆ ಹಾಗೂ ತಾಂತ್ರಿಕ ತೊಂದರೆಗಳಿಂದ ಬೆಳೆ ವಿಮೆ ಮಾಡಿಸಲಾಗದ ರೈತರ ಹಿತರಕ್ಷಣೆಗಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಜಿಲ್ಲೆಗಳ ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಲ್ಹಾದ ಜೋಶಿ ಕೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ