ಸಂಡೂರು ಅರಣ್ಯದಲ್ಲಿ ಗಣಿಗಾರಿಕೆಗೆ ಅನುಮತಿ: ಮಾತು ತಪ್ಪಿದ ಆರೋಪಕ್ಕೆ ಕುಮಾರಸ್ವಾಮಿ ಸ್ಪಷ್ಟನೆ

ಎಚ್​ಡಿ ಕುಮಾರಸ್ವಾಮಿ ಅವರು ಮೋದಿ ನೇತೃತ್ವದ ಎನ್​ಡಿಎ ಸರ್ಕಾರದಲ್ಲಿ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲೇ ಬಳ್ಳಾರಿಯ ಸಂಡೂರು ಅರಣ್ಯದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಆರು ವರ್ಷಗಳ ಹಿಂದೆ ತಾವೇ ಆಡಿದ್ದ ಮಾತನ್ನು ತಪ್ಪಿದ್ದಾರೆ. ಇನ್ನು ಈ ಬಗ್ಗೆ ಎಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಆಕ್ಷೇಪಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸಂಡೂರು ಅರಣ್ಯದಲ್ಲಿ ಗಣಿಗಾರಿಕೆಗೆ ಅನುಮತಿ: ಮಾತು ತಪ್ಪಿದ ಆರೋಪಕ್ಕೆ ಕುಮಾರಸ್ವಾಮಿ ಸ್ಪಷ್ಟನೆ
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ರಮೇಶ್ ಬಿ. ಜವಳಗೇರಾ

Updated on:Jun 18, 2024 | 8:34 PM

ಧಾರವಾಡ, (ಜೂನ್ 18): ಕೇಂದ್ರದಲ್ಲಿ ಮಂತ್ರಿಯಾಗುತ್ತಿದ್ದಂತೆಯೇ ಎಚ್​ಡಿ ಕುಮಾರಸ್ವಾಮಿ(union minister HD Kumaraswamy) ಅವರು ಸಂಡೂರಿನಲ್ಲಿ ಗಣಿಗಾರಿಕೆ(sandur mining )ನಡೆಸುವ ಕಡತಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ಈ ಹಿಂದೆ ಆರು ವರ್ಷಗಳ ಹಿಂದೆ ಆಡಿದ್ದ ಮಾತನ್ನು ತಪ್ಪಿದ್ದಾರೆ. ಇನ್ನು ಕುಮಾರಸ್ವಾಮಿ ಅವರ ಈ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಸ್ವತಃ ಎಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇದೆಲ್ಲವೂ ಹಿಂದಿನದೇ ಪ್ರಕ್ರಿಯೆ. ನಾನಾಗಿಯೇ ಹೊಸದಾಗಿ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಧಾರವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್‌.ಡಿ.‌ ಕುಮಾರಸ್ವಾಮಿ, 2016ರಿಂದಲೆ ಈ ಪ್ರಸ್ತಾವನೆ ಇತ್ತು. ಇದು ನನ್ನಿಂದ ಈಗ ಆಗಿರುವುದು ಅಲ್ಲ. ಈ ವಿಷಯ ಪ್ರಾರಂಭ ಆಗಿರೋದು 2016ರಿಂದ. ದೇವದಾರ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಒಪ್ಪಿಗೆಯ ಪ್ರಸ್ತಾವನೆ ರಾಜ್ಯದಿಂದ ಹೋಗಿತ್ತು. 2017ರಲ್ಲಿ ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಕೇಂದ್ರದ ಅರಣ್ಯ ಪರಿಸರ ಇಲಾಖೆಯೂ ಒಪ್ಪಿಗೆ ಕೊಟ್ಟಿದೆ. 2016ರಿಂದ ಪ್ರಾರಂಭ ಆಗಿ ಸಹಿ ಹಂತಕ್ಕೆ ನನ್ನ ಮುಂದೆ ಬಂದಿತ್ತು. ಫೈಲ್ ಕ್ಲಿಯರೆನ್ಸ್ ಗೆ ಮಾತ್ರ ನನ್ನ ಬಳಿ ಬಂದಿತ್ತು. ಎರಡು ಫೈನಾನ್ಸಿಯಲ್ ಸಂಸ್ಥೆಗಳಲ್ಲಿ ಸಾಲ‌ ಪಡೆಯಲು ಕೇಂದ್ರ ಸರ್ಕಾರವನ್ನು ಕೇಳಿದ್ದರು. ಗಣಿ ಕಂಪನಿಗಳು ಕೇಳಿದ್ದವು. ಇದೆಲ್ಲವೂ ಹಿಂದಿನದೇ ಪ್ರಕ್ರಿಯೆ. ನಾನಾಗಿಯೇ ಹೊಸದಾಗಿ ಮಾಡಿದ್ದಲ್ಲ ಎಂದು ಸಮಜಾಯಿಷಿ ನೀಡಿದರು.

ಇದನ್ನೂ ಓದಿ: ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ ರೇಸಿಂಗ್ ಚಟುವಟಿಕೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಎಸ್.ಆರ್. ಹಿರೇಮಠ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಅವರು ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದಾರೆ. ಆದರೆ ಅವರು ನೇರವಾಗಿ ಬಂದು ನನ್ನ ಭೇಟಿಯಾಗಲಿ. ನನ್ನ ಕಚೇರಿ ಯಾವಾಗಲೂ ತೆರೆದಿರುತ್ತದೆ. ಅವರು ಬಂದು ಏನಿದೆ ಅಂತಾ ಚರ್ಚೆ ಮಾಡಲಿ, ಚರ್ಚೆಗೆ ನಾನು ಮುಕ್ತವಾಗಿದ್ದೇನೆ. ಲೋಕಾಯುಕ್ತ, ಕೋರ್ಟ್ ಗೆ ಹೋಗಿ ಮುಗಿದು ಹೋಗಿದೆ. ಅದೇ ಕಾರಣಕ್ಕೆ ನಾನು ಸಹಿ ಮಾಡಿದ್ದು, ಅದಿರು ಉತ್ಪಾದನೆಗೆ ಮಾತ್ರ ಕೊಟ್ಟಿರೋ ಒಪ್ಪಿಗೆ ಇದು. ಇದು ಹೊಸದಾದ ಗಣಿಗಾರಿಕೆ ಅನುಮತಿ ಅಲ್ಲ. ಹಿರೇಮಠರಿಗೆ ಗೊಂದಲಗಳಿದ್ದಲ್ಲಿ ಅವರ ಬಳಿಯ ರೇಕಾರ್ಡ್ಸ್ ತರಗೆದುಕೊಂಡು ಬರಲಿ ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆ ವೇಳೆ ಸಂಡೂರಿಗೆ ತೆರಳಿದ್ದ ವೇಳೆ ಕುಮಾರಸ್ವಾಮಿ ಅವರನ್ನು ಸಾಮಾಜಿಕ ಹೋರಾಟಗಾರ ಎಸ್​ಆರ್ ಹಿರೇಮಠ್ ನೇತೃತ್ವದ ಜನಸಂಗ್ರಾಮ ಪರಿಷತ್​ ಕಾರ್ಯಕರ್ತರು ಭೇಟಿ ಮಾಡಿದ್ದು, ದೇವದಾರಿ ಪ್ರದೇಶದ ಕುಮಾರಸ್ವಾಮಿ ದೇವಾಲಯದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕೆಂದು ಮನವಿ ಮಾಡಿದ್ದರು. ಈ ಮನವಿ ಸ್ವೀಕರಿಸಿದ್ದ ಕುಮಾರಸ್ವಾಮಿ, ದೇವಾಲಯದ ಸುತ್ತಮಮುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಎಂದಿಗೂ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಪ್ರದೇಶದಲ್ಲಿ ಗಣಿಗಾರಿಕೆಯನ್ನು ನಿಷೇಧಿಸುತ್ತೇವೆ. ಅಲ್ಲದೇ ಕೇಂದ್ರ ಸರ್ಕಾರದ ಮೇಲೂ ಒತ್ತಡ ಹಾಕುತ್ತೇವೆ ಎಂದು ಭರವಸೆ ನೀಡಿದ್ದರು.

ಆದ್ರೆ, ಇದೀಗ ಕುಮಾರಸ್ವಾಮಿ ಅವರು ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗುತ್ತಿದ್ದಂತೆಯೇ ಸಂಡೂರಿನ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವ ಕಡತಕ್ಕೆ ಸಹಿ ಹಾಕಿದ್ದಾರೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:34 pm, Tue, 18 June 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ