ಹುಬ್ಬಳ್ಳಿ- ಧಾರವಾಡ ನೂತನ ಮೇಯರ್, ಉಪಮೇಯರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ

Hubballi-Dharwad Municipal Corporation:ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಯ ನೂತನ ಮೇಯರ್ ಆಗಿ ಆಯ್ಕೆಯಾದ ಬಿಜೆಪಿಯ ವೀಣಾ ಭರದ್ವಾಡ ಅವರಿಗೆ ಕೇಂದ್ರ ಸಚಿವ ಪಲ್ಹಾದ್ ಜೋಶಿಯವರು ಶುಭ ಹಾರೈಸಿದರು. 

ಹುಬ್ಬಳ್ಳಿ- ಧಾರವಾಡ ನೂತನ ಮೇಯರ್, ಉಪಮೇಯರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ
ಹು-ಧಾ ಪಾಲಿಕೆಗೆ ಹೊಸ ಮೇಯರ್: ಪ್ರಲ್ಹಾದ ಜೋಶಿ ಅಭಿನಂದನೆ
Follow us
|

Updated on:Jun 20, 2023 | 6:15 PM

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ (Hubballi-Dharwad Municipal Corporation) 22ನೇ ಅವಧಿಯ ನೂತನ ಮೇಯರ್ ಆಗಿ (Mayor) ಆಯ್ಕೆಯಾದ ಬಿಜೆಪಿಯ ವೀಣಾ ಭರದ್ವಾಡ ಅವರಿಗೆ ಕೇಂದ್ರ ಸಚಿವ ಪಲ್ಹಾದ್ ಜೋಶಿಯವರು ಶುಭ ಹಾರೈಸಿದರು. ಹು-ಧಾ ಮೇಯರ್ ಆಗಿ ಆಯ್ಕೆಗೊಂಡ ಬಳಿಕ ನೂತನ ಮೇಯರ್ ಹಾಗೂ ಉಪಮೇಯರ್​ಗೆ ಶುಭ ಹಾರೈಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು “ಅವಳಿ ನಗರದ ಜನತೆಗೆ ನಮ್ಮ ಆಡಳಿತದ ಮೇಲೆ ಅಪಾರ ವಿಶ್ವಾಸ ಹಾಗೂ ನಂಬಿಕೆ ಇದೆ. ಅವರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಬೇಕಿದೆ. ಸಾರ್ವಜನಿಕರ ನಿರೀಕ್ಷೆಗಳನ್ನು ಪೂರೈಸಲು ತಮ್ಮನ್ನು ತಾವು ಸಮರ್ಪಿಸಿಕೊಳ್ಳಲಿದ್ದೀರಿ ಎಂಬ ನಂಬಿಕೆ ಇದೆ. ಅತ್ಯಂತ ಯಶಸ್ವಿ ಅವಧಿ ನಿಮ್ಮದಾಗಿರಲಿ ಎಂದು ಪ್ರಲ್ಹಾದ ಜೋಶಿಯವರು (Pralhad Joshi) ಶುಭ ಹಾರೈಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಶುಭಾಶಯ ಸ್ವೀಕರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ನೂತನ ಮೇಯರ್ ವೀಣಾ ಭರದ್ವಾಡ ಅವರು, “ಮೇಯರ್ ಆಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಸಂತಸ ತಂದಿದೆ. ಅವಳಿ ನಗರದ ಜನತೆ ನಮ್ಮಿಂದ ಸಾಕಷ್ಟು ಉತ್ತಮ ಆಭಿವೃದ್ಧಿ ನಿರೀಕ್ಷೆ ಮಾಡಿದ್ದಾರೆ. ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಸಾಕಷ್ಟು ಸವಾಲುಗಳಿದ್ದು, ಪ್ರಮುಖವಾಗಿ ಅಭಿವೃದ್ದಿ ಕಾರ್ಯಗಳತ್ತ ಗಮನ ಹರಿಸುತ್ತೇನೆ. ಕುಂಠಿತಗೊಂಡ ಅಭಿವೃದ್ದಿ ಕಾರ್ಯಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು 82 ಸದಸ್ಯರ ಬಲ ಹೊಂದಿದೆ‌. ಅಧಿಕಾರ ಪಡೆದುಕೊಳ್ಳಲು 46 ಸಂಖ್ಯಾಬಲ ಬೇಕಿತ್ತು. ಬಿಜೆಪಿ ಕಾರ್ಪೊರೇಟರ್​ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್​​​​ 33, ಪಕ್ಷೇತರ 6, AIMIM 3, ಜೆಡಿಎಸ್ 1 ಸ್ಥಾನ ಹೊಂದಿದೆ. ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್​ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು.

Also read: ಜನರಿಗೆ ಹೇಳಿದಂತೆ “ಗ್ಯಾರಂಟಿ” ಕೊಡಲಾಗದೆ ಕಾಂಗ್ರೆಸ್​ ನಾಯಕರಿಂದ ಕುಂಟು ನೆಪ : ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ

ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್​ನ ಸುವರ್ಣ ಅವರು 37 ಮತ ಪಡೆಯುವುರೊಂದಿಗೆ ಸೋಲು ಕಂಡರು. ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಪಾಲಾಗಿದೆ. ಸತೀಶ ಹಾನಗಲ್ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:56 pm, Tue, 20 June 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?