ಸುಳ್ಳು ಸುದ್ದಿಯ ಸಿದ್ದರಾಮಯ್ಯನವರೇ, ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಕಿಡಿ

ಕುಮಾರಸ್ವಾಮಿ, ಸಾರಾ ಮಹೇಶ್ ಹೊಟ್ಟೆ ಕಿಚ್ಚಿನಿಂದ ಮಾತಾಡ್ತೀದಾರೆ ಎಂದ ಜೋಶಿ, ತಾವು ಮಾಡಲಾರದ್ದು ಬಿಜೆಪಿ‌ ಮಾಡಿದೆ ಎಂದು ಹೊಟ್ಟೆಕಿಚ್ಚಿನಿಂದ ಮಾತಾಡ್ತಿದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು. ಇನ್ನು, ನಾನು ದೇವೇಗೌಡರ ಬಗ್ಗೆ ಮಾತನಾಡಲ್ಲ, ಅವರು ಹಿರಿಯರು- ಸಚಿವ ಪ್ರಹ್ಲಾದ್​ ಜೋಶಿ

ಸುಳ್ಳು ಸುದ್ದಿಯ ಸಿದ್ದರಾಮಯ್ಯನವರೇ, ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಕಿಡಿ
ಸುಳ್ಳು ಸುದ್ದಿಯ ಸಿದ್ದರಾಮಯ್ಯ ನವರೇ, ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 12, 2022 | 3:03 PM

ಹುಬ್ಬಳ್ಳಿ: ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ. ಟ್ವೀಟ್ (Twitter) ಮೂಲಕ ಸಿದ್ದು ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿದ್ದರಾಮಯ್ಯನವರೇ (Siddaramaiah) ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ಕೆಂಪೇಗೌಡರನ್ನು ಆದರ್ಶವಾಗಿಟ್ಟುಕೊಂಡು ಅಭಿವೃದ್ಧಿಗಾಗಿ ಶ್ರಮ ಪಡಲಾಗಿದೆ. ನಾಡಿನ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಮೋದಿ ಶ್ರಮಿಸುತ್ತಿದ್ದಾರೆ. ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆ ಉದ್ಘಾಟಿಸಿದ್ದೇವೆ. ಮೋದಿಯವರ ಕೈಯಿಂದಲೇ ಯೋಜನೆಗಳನ್ನು ಉದ್ಘಾಟಿಸಿದ್ದೇವೆ. ಅಧಿಕಾರ ಕೈಯಲ್ಲಿಲ್ಲ ಎಂಬ ಹತಾಶೆಯಿಂದ, ಪ್ರಶ್ನಿಸುವ ಸಲುವಾಗಿಯೇ ರಾಜ್ಯದ ಜನತೆಗೆ ನೀವು ಸುಳ್ಳು ಸುದ್ದಿ ಹಬ್ಬಿಸಬೇಡಿ. ಯಾಕೆಂದರೆ ನೀವು ಕೂಡ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಎಂದು ಸುಳ್ಳು ಸುದ್ದಿಯ ಸಿದ್ದರಾಮಯ್ಯ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಜೋಶಿ ಟ್ವೀಟ್ ಸಾರಾಂಶ ಹೀಗಿದೆ:

ಸುಳ್ಳು ಸುದ್ದಿಯ ಸಿದ್ದರಾಮಯ್ಯ ನವರೇ, ಕೆಂಪೇಗೌಡರನ್ನು ಆದರ್ಶವಾಗಿಟ್ಟುಕೊಂಡು ನಾಡಿನ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀಯ ಕೈಯಿಂದಲೇ ಇಂದು ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಉದ್ಘಾಟನೆ ಮಾಡಿದ್ದೇವೆ. ಅಧಿಕಾರ ಕೈಯಲಿಲ್ಲ ಎಂಬ ಹತಾಶೆಯಿಂದ ಪ್ರಶ್ನಿಸುವ ಸಲುವಾಗಿ ರಾಜ್ಯದ ಜನತೆಗೆ ಸುಳ್ಳು ಸುದ್ದಿ ಮುಟ್ಟಿಸಬೇಡಿ ಯಾಕೆಂದರೆ ನೀವು ಕೂಡ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು.

ದೇವೇಗೌಡರು ಹಿರಿಯರು, ಅವರ ಬಗ್ಗೆ ಮಾತನಾಡಲ್ಲ:

ಇನ್ನು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರನ್ನು ಆಹ್ವಾನಿಸಿಲ್ಲ ಅನ್ನೋದು ಸರಿಯಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ. ಈ ವಿಚಾರವಾಗಿ ಸಿಎಂ ಬೊಮ್ಮಾಯಿ, ಸಚಿವರಾದ ಅಶೋಕ್, ಅಶ್ವತ್ಥ್ ನಾರಾಯಣ ಜತೆ ಮಾತನಾಡಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವೇಗೌಡರನ್ನು ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ. ಆದ್ರೆ ಯಾಕೆ ಬಂದಿಲ್ಲ ಅನ್ನೋದನ್ನು ವಿಚಾರಿಸುವುದಾಗಿಯೂ ಹೇಳಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಕುಟುಂಬದವರು ಮುಖ್ಯಮಂತ್ರಿ ಮತ್ತು ಸಚಿವರಾಗಿದ್ದವರು. ಆದ್ರೆ ಅವರು ಯಾರೂ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡಲಿಲ್ಲ, ಹೆಸರೂ ಇಡಲಿಲ್ಲ. ಕುಮಾರಸ್ವಾಮಿ ಕುಟುಂಬಕ್ಕೆ ಕೆಂಪೇಗೌಡರ ನೆನಪು ಆಗ ಆಗಲಿಲ್ಲ. ಕುಮಾರಸ್ವಾಮಿ, ಸಾರಾ ಮಹೇಶ್ ಹೊಟ್ಟೆ ಕಿಚ್ಚಿನಿಂದ ಮಾತಾಡ್ತೀದಾರೆ ಎಂದ ಜೋಶಿ, ತಾವು ಮಾಡಲಾರದ್ದು ಬಿಜೆಪಿ‌ ಮಾಡಿದೆ ಎಂದು ಹೊಟ್ಟೆಕಿಚ್ಚಿನಿಂದ ಮಾತಾಡ್ತಿದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು. ಇನ್ನು, ನಾನು ದೇವೇಗೌಡರ ಬಗ್ಗೆ ಮಾತನಾಡಲ್ಲ, ಅವರು ಹಿರಿಯರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಪ್ರಹ್ಲಾದ್​ ಜೋಶಿ ಸೂಕ್ಷ್ಮವಾಗಿ ಹೇಳಿದರು.

Published On - 2:12 pm, Sat, 12 November 22

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್