AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತರ ಮತ್ತು ನಕಲಿ ವೋಟ್ ಇರಬೇಕೇ? ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ ಎಂದ ಜೋಶಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕಾಕ್ರಾಚ್ ಜನತಾ ಪಾರ್ಟಿ (CJP) ಹಾಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಿವೆ. ಇದಕ್ಕೆ ಕೇಂದ್ರ ಸಚಿವರು ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ, ದೆಹಲಿಯಲ್ಲಿ ನಿನ್ನೆಯ ಪ್ರತಿಭಟನೆ ನ್ಯಾಯಸಮ್ಮತ ಹೋರಾಟ ಆಗಿರಲಿಲ್ಲ ಎಂದಿದ್ದಾರೆ.

ಮೃತರ ಮತ್ತು ನಕಲಿ ವೋಟ್ ಇರಬೇಕೇ? ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ ಎಂದ ಜೋಶಿ
Pralhad Joshi
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 11, 2026 | 7:40 PM

Share

ಹುಬ್ಬಳ್ಳಿ, (ಅಕ್ಟೋಬರ್ 11): “ನಾವು ಕಾನೂನನ್ನು ಮಾನ್ಯ ಮಾಡುವುದಿಲ್ಲ ಎನ್ನುವ ಕಾಂಗ್ರೆಸ್, ದೇಶದಲ್ಲಿ SIR ನೆಪದಲ್ಲಿ ಅರಾಜಕತೆ ಸೃಷ್ಟಿಸಲು ನೋಡುತ್ತಿದೆ” ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ದೆಹಲಿಯಲ್ಲಿ ನಿನ್ನೆಯ ಪ್ರತಿಭಟನೆ ನ್ಯಾಯಸಮ್ಮತ ಹೋರಾಟ ಆಗಿರಲಿಲ್ಲ. ಬದಲಿಗೆ ಅರಾಜಕತೆ ಸೃಷ್ಟಿಸಲು ಮಾಡಿದ ಯತ್ನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಶ್ರೇಷ್ಠ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ, ಮಾದರಿಯಲ್ಲೇ SIR ನ್ಯಾಯ ಮತ್ತು ಅತ್ಯಂತ ಪಾರದರ್ಶಕ ಪದ್ಧತಿಯಲ್ಲಿ ನಡೆಯುತ್ತಿದೆ. ಹಾಗಿದ್ದರೂ ಇದರ ವಿರುದ್ಧ ಕಾಂಗ್ರೆಸ್, ಸಿಜೆಪಿ ಹೋರಾಟ ನಡೆಸುತ್ತಿರುವುದು ಅರಾಜಕತೆ ತರಲು ಎಂದು ಆರೋಪಿಸಿದರು.

ಇದನ್ನೂ ಓದಿ: ಅಪಹರಣ, ಮೊಬೈಲ್ ಜಪ್ತಿ, ವಕೀಲರಿಗೂ ನೋ ಎಂಟ್ರಿ: ಪೊಲೀಸರ ವಿರುದ್ಧ ಸೌರವ್ ದಾಸ್ ಗಂಭೀರ ಆರೋಪ, ಧರಣಿ ಮುಂದುವರೆಸುವುದಾಗಿ ಸಿಜೆಪಿ ಪಟ್ಟು

ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿರುವುದನ್ನು ನೋಡಿಕೊಂಡು ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಂತೆಯೇ ನಿನ್ನೆ ಅರಾಜಕತೆ ತಡೆಯಲು, ನಿಯಂತ್ರಿಸಲು ಕನಿಷ್ಠ ಕ್ರಮವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಸ್ಪಷ್ಟಪಡಿಸಿದರು.

ಮೃತರ ಮತ್ತು ನಕಲಿ ವೋಟ್ ಇರಬೇಕೇ?

ಪ್ರಸ್ತುತ SIR ಪ್ರಕ್ರಿಯೆ ವೇಳೆ ಸರಿಸುಮಾರು 3 ಕೋಟಿ ಹೆಸರುಗಳು ಮೃತರು ಮತ್ತು 3 ಕೋಟಿ ಹೆಸರುಗಳು ಡಬಲ್ ವೋಟರ್ಸ್ ಹಾಗೂ ನಕಲಿ ವೋಟರ್ಸ್ ಹೆಸರಿವೆ. ಇವನ್ನೆಲ್ಲಾ ಸೇರಿಸಬೇಕೇ? ಎಂದು ಪ್ರಶ್ನಿಸಿದರು.

SIR ಅಲ್ಲಿ 13 ಕೋಟಿ ಪತ್ತೆಯಿಲ್ಲದ ಮತದಾರರ ಹೆಸರು ಮರು ಸೇರ್ಪಡೆ ಮಾಡಬೇಕು ಎಂಬುದು ಕಾಂಗ್ರೆಸ್ ಬೇಡಿಕೆಯಾಗಿದೆ. ಆದರೆ, ಇದರಲ್ಲಿ ಮೃತರು, ಸ್ಥಳಾಂತರ ಆದವರು, ನಕಲಿ ಮತದಾರರು, ಅಕ್ರಮ ವಲಸಿಗರು ಹೀಗೆ ಅರ್ಹರಲ್ಲದವರೇ ಇದ್ದಾರೆ. ಇವರನ್ನೆಲ್ಲಾ ಸೇರಿಸಬೇಕಾ? ಒಂದು ವೇಳೆ ಅರ್ಹರಿದ್ದರೆ ಖುದ್ದಾಗಿ ಹಾಜರಾಗಿ ಸರಿಪಡಿಸಿಕೊಳ್ಳಲು ಚುನಾವಣಾ ಆಯೋಗ ಮುಕ್ತ ಅವಕಾಶ ನೀಡಿದೆ ಎಂದರು.

ರಾಹುಲ್ ಗಾಂಧಿ ಮೆಚ್ಚಿಸಲು ಡಿಕೆಶಿ ಡ್ರಾಮಾ: SIR ವಿಚಾರದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ನಾಯಕ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಏನೆಲ್ಲಾ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ 50 ಲಕ್ಷ ಮತದಾರರನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸಿದ್ದಾರೆ ಎಂದಿದ್ದಾರೆ ಸಿಎಂ. ಆದರೆ, ಕೇವಲ 90 ಸಾವಿರ ಮತದಾರರ ಹೆಸರು ಅನರ್ಹರ ಪಟ್ಟಿಯಲ್ಲಿದೆ ಎಂದು ಇಲ್ಲಿನ ಮುಖ್ಯ ಚುನಾವಣಾಧಿಕಾರಿಯೇ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಷಡ್ಯಂತ್ರ ಮಾಡುತ್ತಿರುವುದು ಯಾರು? ಎಂದು ಪ್ರಶ್ನಿಸಿದರು.

ಇಲ್ಲಿರುವುದು ಇವರ ಅಧಿಕಾರಿಗಳೇ ಅಲ್ಲವೇ

ಕೇಂದ್ರ SIR ನೀತಿ, ನಿಯಮ ರೂಪಿಸಿರಬಹುದು. ಆದರೆ, ಇಲ್ಲಿ ಕಾರ್ಯಗತಕ್ಕೆ ತರುತ್ತಿರುವುದು ಯಾರು? ತಹಶೀಲ್ದಾರ್, ಎಸಿ, ಡಿಸಿ ಎಲ್ಲಾರೂ ರಾಜ್ಯ ಸರ್ಕಾರದ ಅಧೀನದಲ್ಲಿ ಇರುವ ಅಧಿಕಾರಿಗಳೇ ಅಲ್ಲವೇ? ಕೇಂದ್ರದ ಷಡ್ಯಂತ್ರ ಏನಿದೆ ಇದರಲ್ಲಿ? ಎಂದು ಸಿಎಂಗೆ ತಿರುಗೇಟು ಕೊಟ್ಟರು.

ಪ್ರತಿಭಟನೆ ನಡೆಸಲು ಪ್ರಜಾಸತ್ತಾತ್ಮಕವಾಗಿ ಎಲ್ಲರಿಗೂ ಹಕ್ಕಿದೆ. ಅವಕಾಶವಿದೆ. ಆದರೆ, ನಾವು ಭಾರತದ ಕಾನೂನನ್ನೇ ಮಾನ್ಯ ಮಾಡುವುದಿಲ್ಲ. ಸಂವಿಧಾನವನ್ನು ಅನುಸರಿಸುವುದಿಲ್ಲ ಎನ್ನುವುದು ಅರಾಜಕತೆ ಉಂಟು ಮಾಡುವುದನ್ನು ತೋರ್ಪಡಿಸುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು