ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ

ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂಬುದು ಕಾಂಗ್ರೆಸ್ ನಾಯಕರಿಗೆ ಈಗ ಅರಿವಿಗೆ ಬಂದಿದೆ. ರಸ್ತೆಗೆ ಮಣ್ಣು ಹಾಕಲಾಗುವುದಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಿಂತ ನಿದರ್ಶನ ಬೇಕೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದ್ದಾರೆ.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ
ಪ್ರಲ್ಹಾದ್ ಜೋಶಿ
Follow us
ಸುಷ್ಮಾ ಚಕ್ರೆ
|

Updated on: Oct 31, 2024 | 9:22 PM

ಹುಬ್ಬಳ್ಳಿ: ಗ್ಯಾರಂಟಿಗಳಿಂದ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಅರಿವಿಗೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದ್ದಾರೆ. ಶಕ್ತಿ ಯೋಜನೆ ನಿಲ್ಲಿಸುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾಯಿತು. ಈಗ ಖುದ್ದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ರಾಜ್ಯ ದಿವಾಳಿ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಅಂತೂ ಕಾಂಗ್ರೆಸ್ ನಾಯಕರಿಗೆ ತಡವಾಗಿ ಆದರೂ ಜ್ಞಾನೋದಯ ಆಗುತ್ತಿದೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

“ರಾಜ್ಯದ ಬಜೆಟ್ ಗಾತ್ರ ನೋಡಿಕೊಂಡು ಗ್ಯಾರಂಟಿ ಘೋಷಿಸಬೇಕು. ಒಂದೇ ಆದರೂ ಅರ್ಥ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು. ಐದಾರು ಯೋಜನೆ ಘೋಷಿಸಿದರೆ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕದಂತಹ ಸ್ಥಿತಿಯಾಗುತ್ತದೆ” ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಹಾಳಾಗಿದೆ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೇ? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್​ ಸುಳಿವು

ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲು ಆಗುವುದಿಲ್ಲ ಎಂಬ ಖರ್ಗೆ ಅವರ ಮಾತು ಗ್ಯಾರಂಟಿಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿವೆ ಎಂಬುದನ್ನು ಸಾರಿ ಹೇಳುವಂತಿದೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ಎದುರಿಸುವ ಆವೇಶದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ಸಾಕಾಗಿ ಹೋಗಿದೆ ಎಂದಿದ್ದಾರೆ ಜೋಶಿ.

ಗ್ಯಾರಂಟಿಗಳಿಂದ ಕರ್ನಾಟಕದ ಸ್ಥಿತಿ ಗತಿ ಬಗ್ಗೆ ಅರಿತ ಕಾಂಗ್ರೆಸ್ ಪಕ್ಷ ಬೇರೆ ರಾಜ್ಯ ಚುನಾವಣೆಗಳಲ್ಲಿ ಕರ್ನಾಟಕವನ್ನು ಮಾದರಿಯಾಗಿ ಅನುಸರಿಸಲು ಹಿಂಜರಿಯುತ್ತಿದೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್