AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli: ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನ

ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿಯಲ್ಲಿ ಸನ್ಮಾನಿಸಿದರು. ಕೆಎಲ್‌ಇ ಶಿಕ್ಷಣ ಸಂಸ್ಥೆಗಳ ಮೂಲಕ ಸಾಹಿತ್ಯ, ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕೋರೆ ಅವರ ಅಪ್ರತಿಮ ಸೇವೆ ಗುರುತಿಸಿ ಈ ಗೌರವ ನೀಡಲಾಗಿದೆ ಎಂದ ಸಚಿವರು, ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿ ಸಮಾಜಮುಖಿ ಕೆಲಸ ಮಾಡಿರುವ ಕೋರೆ ಅವರ ಕೊಡುಗೆಯನ್ನು ಈ ವೇಳೆ ಶ್ಲಾಘಿಸಿದ್ದಾರೆ.

Hubli: ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನ
ಪ್ರಭಾಕರ್ ಕೋರೆ ಅವರಿಗೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಂದ ಸನ್ಮಾನ
ಪ್ರಸನ್ನ ಹೆಗಡೆ
|

Updated on: Jan 27, 2026 | 4:42 PM

Share

ಹುಬ್ಬಳ್ಳಿ, ಜನವರಿ 27: 2026ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಕೆಎಲ್ಇ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರಭಾಕರ್ ಕೋರೆ ಅವರನ್ನು ಕುಟುಂಬದ ಸದಸ್ಯರೊಡಗೂಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ  ಸನ್ಮಾನಿಸಿ, ಅಭಿನಂದಿಸಿದ್ದಾರೆ. ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿನ ಕೋರೆ ಅವರ ಅಭೂತಪೂರ್ವ ಸೇವೆ ಗುರುತಿಸಿ ಅತ್ಯುನ್ನತ ಪ್ರಶಸ್ತಿಗೆ ಕೆಂದ್ರ ಸರ್ಕಾರ ಅವರನ್ನು ಆಯ್ಕೆ ಮಾಡಿದ್ದು, ಗಣರಾಜ್ಯೋತ್ಸವದ ಹಿಂದಿನ ದಿನ ಈ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು.

ಇನ್ನು ಸನ್ಮಾನ ನೆರವೇರಿಸಿದ ಬಳಿಕ  ಕೋರೆ ಅವರನ್ನು ಕೊಂಡಾಡಿರುವ ಜೋಶಿ, ಕೆಎಲ್​​ಇ ಶಿಕ್ಷಣ ಸಂಸ್ಥೆ ಕಟ್ಟಿ ಪ್ರಾಥಮಿಕ ಶಿಕ್ಷಣದಿಂದ ತಾಂತ್ರಿಕ, ವೈದ್ಯಕೀಯದಂತಹ ಉನ್ನತ ಶಿಕ್ಷಣ ಕ್ಷೇತ್ರದಲ್ಲಿನ ಅವರ ನಿಸ್ವಾರ್ಥ ಸೇವೆಯನ್ನು ಹಾಡಿ ಹೊಗಳಿದ್ದಾರೆ. ಸಮಾಜಕ್ಕೆ ಉತ್ತಮ ಶಿಕ್ಷಣ, ಆರೋಗ್ಯ ಕಲ್ಪಿಸುವಲ್ಲಿ ದಶಕದಿಂದಲೂ ನಿರತರಾಗಿರುವ ಇವರು, ಅನೇಕ ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿ ಹಳ್ಳಿಗರ ಆರೋಗ್ಯ ರಕ್ಷಣೆಗೆ ಒತ್ತು ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಮತ್ತು ಜೋಶಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಪದ್ಮ ಪ್ರಶಸ್ತಿ ಪ್ರಕಟ; ರಾಜ್ಯದ ಶತಾವಧಾನಿ ಆರ್​​. ಗಣೇಶ್​​ಗೆ​​ ಪದ್ಮ ಭೂಷಣ, 7 ಮಂದಿಗೆ ಪದ್ಮಶ್ರೀ ಅವಾರ್ಡ್​​

ಪ್ರತಿ ವರ್ಷ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಇಂಜಿನಿಯರಿಂಗ್, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರ್ಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗೆ ಪ್ರಭಾಕರ ಕೋರೆ ಸೇರಿ ರಾಜ್ಯದ 8 ಮಂದಿ ಭಾಜನರಾಗಿದ್ದಾರೆ. ಅಂಕೇಗೌಡ ಎಂ., ಎಸ್​​.ಜಿ. ಸುಶೀಲಮ್ಮ, ಶಶಿಶೇಖರ್​​ ವೆಂಪತಿ, ಶುಭಾ ವೇಂಕಟೇಶ್​​ ಐಯ್ಯಂಗಾರ್​, ಡಾ.ಸುರೇಶ್ ಹನಗವಾಡಿ, ಟಿ.ಟಿ. ಜಗನ್ನಾಥನ್​​ ಕೂಡ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಇನ್ನು ಶತಾವಧಾನಿ ಆರ್​. ಗಣೇಶ್ ಅವರಿಗೆ ಪ್ರಸಕ್ತ ಸಾಲಿನ ಪದ್ಮ ಭೂಷಣ ಪ್ರಶಸ್ತಿ ಒಲಿದು ಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ
ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!