ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ: ಸಿದ್ದರಾಮಯ್ಯ

2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣವನ್ನು ವಾಪಸ್​​ ಪಡೆದಿದ್ದಕ್ಕೆ ರಾಜ್ಯ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ರವಿವಾರ ಹುಬ್ಬಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ವೇಳೆ ಬಿಜೆಪಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಭಯೋತ್ಪಾದಕ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Oct 13, 2024 | 2:50 PM

ಹುಬ್ಬಳ್ಳಿ, ಅಕ್ಟೋಬರ್​ 13: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಭಯೋತ್ಪಾದಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸಚಿವ ಸಂಪುಟ ನಿರ್ಧಾರದಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಸಂಪುಟದ ನಿರ್ಧಾರ ನ್ಯಾಯಾಲದ ಮುಂದೆ ಹೋಗಬೇಕು. ನ್ಯಾಯಲಯ ಒಪ್ಪಿದರೆ ಮಾತ್ರ ಪ್ರಕರಣ ಹಿಂಪಡೆಯಲು ಆಗುತ್ತೆ ಎಂದು ತಿಳಿಸಿದರು.

ಬಿಜೆಪಿಯವರು ಸುಖಾ ಸುಮ್ಮನೆ ಪ್ರತಿಭಟನೆ ಮಾಡುತ್ತಾರೆ. ಸುಳ್ಳು ಕೇಸ್​ ಇದ್ದರೆ, ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ, ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳಲು ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಭಯೋತ್ಪಾದಕ: ಟೆಂಗಿನಕಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಯೋತ್ಪಾದಕರು. ಪ್ರಹ್ಲಾದ್ ಜೋಶಿ ಅವರು ಭಯೋತ್ಪಾದಕರಲ್ಲ, ದೇಶ ಭಕ್ತರು ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಕೇಸ್ ಹಿಂಪಡೆದಿದ್ದೀರಿ. ಸಿದ್ದರಾಮಯ್ಯನವರೇ ಭಯೋತ್ಪಾದಕರು. ಟಿಪ್ಪು ಜಯಂತಿ ಮಾಡಿದ ಕೀರ್ತಿ ನಿಮಗೆ ಸಲ್ಲುತ್ತದೆ. ರಾಜ್ಯದಲ್ಲಿ ನೀವು ಅರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದೀರಿ. ಸಿದ್ದರಾಮಯ್ಯ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾದರೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿ ಉಗ್ರಗಾಮಿಗಳ ಪಕ್ಷ ಎಂದ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ಕೊಟ್ಟ ಜೋಶಿ

ಮುಖ್ಯಮಂತ್ರಿಗಳು ನಮ್ಮ ಮನವಿ ತಗೆದುಕೊಂಡಿಲ್ಲ. ಇದು ದುರ್ದೈವದ ಸಂಗತಿ. ಪೊಲೀಸರನ್ನು ಬಳಸಿ‌ ನಮ್ಮನ್ನು ಅರೆಸ್ಟ್ ಮಾಡಿಸಿದರು. ನಾವ ಪೊಲೀಸರ ಪರವಾಗಿ ಹೋರಾಟ ಮಾಡುತ್ತಿದ್ವಿ. ಕಪ್ಪು ಬಾವುಟ‌ ಪ್ರದರ್ಶನ ಮಾಡಿದ ಇಬ್ಬರನ್ನು ವಶಕ್ಕೆ ತಗೆದುಕೊಂಡಿದ್ದಾರೆ. ನಮ್ಮ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದಾರೆ. ಸರ್ಕಾರದಲ್ಲಿ ಏನು ನಡೆಯುತ್ತಿದೆ. ನಮ್ಮ ಹೋರಾಟ ನಿರಂತರ ಎಂದರು.

ಬಿಜೆಪಿ ಭಯೋತ್ಪಾದಕರ ಪಕ್ಷ ಎಂದಿದ್ದ ಖರ್ಗೆ

ಕಳೆದ ಕೆಲ ದಿನಗಳ ಹಿಂದೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಉತ್ತರಿಸಿ, ಬಿಜೆಪಿ ಭಯೋತ್ಪಾದಕರ ಪಕ್ಷ ಎಂದು ಹೇಳಿದ್ದರು. ಬಿಜೆಪಿ ಪ್ರಗತಿಪರ ಚಿಂತಕರನ್ನು ನಗರ ನಕ್ಸಲರು ಎಂದು ಕರೆದು ಅವಮಾನಿಸುವ ಅಭ್ಯಾಸ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು.

Published On - 2:29 pm, Sun, 13 October 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ