ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣದರ್ಪಣೆ -ಕೇಂದ್ರ ಸಚಿವ ಜೋಶಿ ಕ್ಷಮತಾ ಸಂಸ್ಥೆಯಿಂದ ಹೊಸ ಅಭಿಯಾನ
ಸರ್ಕಾರಿ ವಿದ್ಯಾ ಮಂದಿರಗಳು ಕಳೆಗುಂದಬಾರದು. ಆದರೆ ಬಹುತೇಕ ಸರ್ಕಾರಿ ಶಾಲಾ ಕಾಲೇಜುಗಳ ಗೋಡೆಗಳು ಕಳೆಗುಂದಿವೆ. ಈ ನಿಟ್ಟಿನಲ್ಲಿ ತಮ್ಮ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣ ವಿತರಿಸಲು ಪ್ರಲ್ಹಾದ್ ಜೋಶಿ ನಿರ್ಧರಿಸಿದ್ದಾರೆ. ಈ ಅಭಿಯಾನಕ್ಕೆ ಕೈಜೋಡಿಸುವಂತೆ, ಸ್ಥಳೀಯ ಸಂಘ ಸಂಸ್ಥೆಗಳಿಗು ಜೋಶಿ ಮನವಿ ಮಾಡಿದ್ದಾರೆ.
ಸಂಗೀತ, ಕ್ರೀಡೆ, ಸಾರ್ವಜನಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಲ್ಹಾದ್ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆ ಇದೀಗ ಮಹತ್ವದ ಸಾಮಾಜಿಕ ಕಾರ್ಯದಲ್ಲಿ ತೊಡಗಿದೆ. ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹೊಸ ಕಳೆ ತರಲು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಾಗಿದ್ದಾರೆ. ತಮ್ಮ ಕ್ಷಮತಾ ಸೇವಾ ಸಂಸ್ಥೆ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ, ಬಣ್ಣದರ್ಪಣೆ ಅಭಿಯಾನ ಆರಂಭಿಸಿದ್ದಾರೆ.
ಸರ್ಕಾರಿ ವಿದ್ಯಾ ಮಂದಿರಗಳು ಕಳೆಗುಂದಬಾರದು. ಆದರೆ ಬಹುತೇಕ ಸರ್ಕಾರಿ ಶಾಲಾ ಕಾಲೇಜುಗಳ ಗೋಡೆಗಳು ಕಳೆಗುಂದಿವೆ. ಈ ನಿಟ್ಟಿನಲ್ಲಿ ತಮ್ಮ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣ ವಿತರಿಸಲು ಪ್ರಲ್ಹಾದ್ ಜೋಶಿ ನಿರ್ಧರಿಸಿದ್ದಾರೆ. ಈ ಅಭಿಯಾನಕ್ಕೆ ಕೈಜೋಡಿಸುವಂತೆ, ಸ್ಥಳೀಯ ಸಂಘ ಸಂಸ್ಥೆಗಳಿಗು ಜೋಶಿ ಮನವಿ ಮಾಡಿದ್ದಾರೆ.
ಸುಮಾರು ಒಂದು ವರ್ಷದವರೆಗೆ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ, ಬಣ್ಣದರ್ಪಣೆ ಅಭಿಯಾನ ಹಮ್ಮಿಕೊಳ್ಳಲು ಪ್ಲಾನ್ ಮಾಡಲಾಗಿದೆ. ಪ್ರತಿ ತಿಂಗಳು 100 ಶಾಲೆಗಳಿಗೆ ಬಣ್ಣ ಹಚ್ಚುವ ಗುರಿ ಹೊಂದಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1130 ಸರ್ಕಾರಿ ಶಾಲಾ ಕಾಲೇಜುಗಳನ್ನ ಗುರುತಿಸಲಾಗಿದ್ದು, ವರ್ಷದೊಳಗೆ ಎಲ್ಲಾ ಶಾಲಾ ಕಾಲೇಜುಗಳು ಹೊಸ ಬಣ್ಣದೊಂದಿಗೆ ಕಂಗೊಳಿಸುವಂತೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಬಣ್ಣವನ್ನು ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಕೊಡಲಾಗುತ್ತೆ, ಆದರೆ ಪೇಂಟಿಂಗ್ ಮಾಡಿಸುವ ಜವಾಬ್ದಾರಿಯನ್ನ ಸಂಘ ಸಂಸ್ಥೆಗಳು ತೆಗೆದುಕೊಳ್ಳಬೇಕು ಎಂದು ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಣ್ಣದರ್ಪಣ ಅಭಿಯಾನ ಆರಂಭಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಣ್ಣ ನಮ್ಮದು, ಶಾಲೆ ಮತ್ತು ಸಹಾಯ ನಿಮ್ಮದು, ಬನ್ನಿ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ. ನಟ ರಮೇಶ್ ಅರವಿಂದ ಕೂಡ ಜೋಶಿ ಅವರ ಬಣ್ಣದರ್ಪಣ ಅಭಿಯಾನ ಬೆಂಬಲಿಸಿದ್ದಾರೆ.
ವಿಶೇಷವಾಗಿ ಶಾಲಾ ಕಾಲೇಜುಗಳ ಹಳೆಯ ವಿದ್ಯಾರ್ಥಿ ಸಂಘಗಳು ಮುಂದೆ ಬಂದು ಉಚಿತವಾಗಿ ಬಣ್ಣ ಪಡೆದು ತಮ್ಮ ಶಾಲೆ ಮತ್ತು ಕಾಲೇಜುಗಳಿಗೆ ಪೇಂಟ್ ಮಾಡಕೊಳ್ಳಬಹುದಾಗಿದೆ. ನೀವು ಕಲಿತ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚಲು ಕೈ ಜೋಡಿಸುವಂತೆ ಮನವಿ ಮಾಡಿರುವ ಪ್ರಲ್ಹಾದ್ ಜೋಶಿ, ಬಣ್ಣದರ್ಪಣ ಅಭಿಯಾನಕ್ಕೆ ಸಹಯೋಗ ನೀಡುವಂತೆ ವಿದ್ಯಾರ್ಥಿ ಸಂಘಟನೆಗಳಿಗೆ ಕರೆ ನೀಡಿದ್ದಾರೆ.
ಅಲ್ಲದೇ ಸ್ಥಳೀಯ ಸಂಘ ಸಂಸ್ಥೆಗಳು ಈ ಕಾರ್ಯಕ್ಕೆ ಕೈಜೋಡಿಸಬಹುದಾಹುದಾಗಿದೆ. ವಿಶೇಷವಾಗಿ ಗ್ರಾಪಂ, ಜಿ.ಪಂ ಸದಸ್ಯರು ಈ ನಿಟ್ಟಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಸ್ಥಳೀಯ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ಬಣ್ಣ ಹೊಡೆಸುವ ಜವಾಬ್ದಾರಿ ಹೊರಬೇಕು. ಯಾರೇ ಮುಂದೆ ಬಂದರೂ, ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣ ನೀಡಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿಕೊಂಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದ ಕ್ಷಮತಾ ಸೇವಾ ಸಂಸ್ಥೆ, ಲಕ್ಷಾಂತರ ಬಡವರಿಗೆ ದಿನಸಿ ಕಿಟ್ ಗಳನ್ನ ವಿತರಿಸಿ ನೆರವಾಗಿತ್ತು. ಆಕ್ಷಿಜನ್ ಕನ್ವರ್ಟರ್ ಗಳ ವಿತರಣೆ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು, ಉಚಿತವಾಗಿ ಮಾಸ್ಕ್ ಸ್ಯಾನಿಟೈಜರ್, ಪಲ್ಸ್ ಆಕ್ಷಿಮೀಟರ್ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳನ್ನ ಕೈಗೊಂಡಿತ್ತು. ಅತಿವೃಷ್ಟಿಯಿಂದಾಗಿ ಸಮಸ್ಯೆಗೀಡಾದ ಬಡ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳ ವಿತರಣೆ, ಸಹಸ್ರಾರು ಜನರಿಗೆ ಎಂ.ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಕಣ್ಣಿನ ತಪಾಸಣೆ ನಡೆಸಿ, ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ರೀತಿಯ ಕಾರ್ಯಗಳನ್ನ ನೆರವೇರಿಸುತ್ತಾ ಬಂದಿದೆ. ಇದೀಗ ಸರ್ಕಾರಿ ಶಾಲೆಗಳನ್ನ ಕಲರ್ ಫುಲ್ ಮಾಡಲು ಕ್ಷಮತಾ ಸಂಸ್ಥೆ ಮಹತ್ವದ ಹೆಜ್ಜೆಯಿಟ್ಟಿದೆ.
ಪ್ರಲ್ಹಾದ್ ಜೋಶಿ ಫೇಸ್ ಬುಕ್ ಪೋಸ್ಟ್:
Published On - 5:35 pm, Tue, 4 October 22