ಧಾರವಾಡ: ವಿಶಾಲ ಐಐಟಿ ಕಟ್ಟಡದ ಕಾಮಗಾರಿ ವೀಕ್ಷಣೆ, ತ್ವರಿತ ಮುಗಿಸುವಂತೆ ಸೂಚಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

| Updated By: ಆಯೇಷಾ ಬಾನು

Updated on: Sep 01, 2022 | 7:23 PM

ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ನೂತನ ಕಟ್ಟಡದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಧಾರವಾಡ: ವಿಶಾಲ ಐಐಟಿ ಕಟ್ಟಡದ ಕಾಮಗಾರಿ ವೀಕ್ಷಣೆ, ತ್ವರಿತ ಮುಗಿಸುವಂತೆ ಸೂಚಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಸಚಿವ ಪ್ರಲ್ಹಾದ ಜೋಶಿ
Follow us on

ಧಾರವಾಡ: 700 ಕೋಟಿ ರೂ. ವೆಚ್ಚದಲ್ಲಿ ಐಐಟಿ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಐಐಟಿ ನಿಯೋಜಿತ ಕ್ಯಾಂಪಸ್​ಗೆ ಭೇಟಿ ನೀಡಿದ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಹೇಳಿದ್ರು.

ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ನೂತನ ಕಟ್ಟಡದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಅವರು, ರೂ. 700 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಕಳೆದ ಮೇ 2022ರಂದು ಉದ್ಘಾಟನೆ ಯೋಜನೆ ಹಾಕಲಾಗಿತ್ತು. ಆದರೆ, ಕಾಮಗಾರಿ ಗುಣಮಟ್ಟದಲ್ಲಿ ನಡೆಯುತ್ತಿದ್ದರೂ ವಿಳಂಬವಾದ ಕಾರಣ ಬರುವ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಕಾಮಗಾರಿ ಮುಕ್ತಾಯಗೊಳಿಸಲು ಸೂಚನೆ ನೀಡಿದ್ದೇನೆ.

ಈ ಯೋಜನೆ ಮಾತ್ರವಲ್ಲದೇ ಭಾರತ ಸರ್ಕಾರದ ಯಾವುದೇ ಯೋಜನೆಗೂ ಹಣಕಾಸಿನ ತೊಂದರೆ ಇಲ್ಲ. ಈ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಘಾಟಿಸಲು ಮಾತುಕತೆ ನಡೆದಿದ್ದು, ಅದಕ್ಕಾಗಿಯೇ ಕಟ್ಟಡ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದೇನೆ ಎಂದರು. ಈ ಸಂದರ್ಭದಲ್ಲಿ ಐಐಟಿ ನಿರ್ದೇಶಕ ಡಾ.ಎಸ್. ಶೇಷು, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ ವರಿಷ್ಠಾಧಿಕಾರಿ ಲೋಕೇಶ ಜಗಲಾಸಕರ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:16 pm, Thu, 1 September 22