AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಏನೂ ಮಾಡಿಲ್ಲವೆಂದಾದರೆ ಡಿಸಿ ವರ್ಗಾವಣೆ ಏಕೆ, ಸಿದ್ದರಾಮಯ್ಯಗೆ ಜೋಶಿ ಪ್ರಶ್ನೆ

ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕಡುಭ್ರಷ್ಟ ಸರ್ಕಾರ ಎಂದು ಟೀಕಿಸಿರುವ ಅವರು, ಏನು ಮಾಡಿಲ್ಲ ಎಂದರೆ ಮೈಸೂರು ಡಿಸಿಯನ್ನು ಯಾಕೆ ವರ್ಗಾವಣೆ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಮುಡಾ ಹಗರಣ: ಏನೂ ಮಾಡಿಲ್ಲವೆಂದಾದರೆ ಡಿಸಿ ವರ್ಗಾವಣೆ ಏಕೆ, ಸಿದ್ದರಾಮಯ್ಯಗೆ ಜೋಶಿ ಪ್ರಶ್ನೆ
ಪ್ರಲ್ಹಾದ್ ಜೋಶಿ & ಸಿದ್ದರಾಮಯ್ಯ
ಶಿವಕುಮಾರ್ ಪತ್ತಾರ್
| Edited By: |

Updated on:Jul 06, 2024 | 1:24 PM

Share

ಹುಬ್ಬಳ್ಳಿ, ಜುಲೈ 6: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಏನೂ ಮಾಡಿಲ್ಲವೆಂದಾದರೆ ಡಿಸಿ ವರ್ಗಾವಣೆ ಮಾಡಿದ್ದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಬಹಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆಗಿದೆ. ಮೇಲ್ನೋಟಕ್ಕೆ ಇದು ಸ್ಪಷ್ಟವಾಗಿದೆ. 2017 ರಲ್ಲಿ ಈ ನಿರ್ಣಯಗಳಾಗಿವೆ. ಸಿದ್ದರಾಮಯ್ಯ ಗಮನದಲ್ಲಿ ಇದ್ದೇ ಆಗಿರುವ ಬಹುದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ.

ಈ ಹಗರಣದಲ್ಲಿ 4 ಸಾವಿರ ಕೋಟಿ ಅಕ್ರಮ ಎಸಗಿರುವ ಬಗ್ಗೆ ಆರೋಪಗಳಿವೆ. ಬಿಜೆಪಿ ಕಾಲದಲ್ಲಿ ಕೊಟ್ಟಿದ್ದು ಎನ್ನುತ್ತಾರೆ. ಈ ಎಲ್ಲ ಅವ್ಯವಹಾರ ಆಗಿದ್ದು 2013 ರಿಂದ 2018 ರವರೆಗೆ. ನೀವ ಏನೂ ಮಾಡಿಲ್ಲ ಅಂದ್ರೆ ಡಿಸಿಯನ್ನು ಯಾಕೆ ವರ್ಗಾವಣೆ ಮಾಡಿದ್ದೀರಿ? ಅವ್ಯವಹಾರ ನಡೆಯುತ್ತಿದೆ ಎಂದು ಡಿಸಿ ಪತ್ರ ಬರೆದಿದ್ದರು. ಕಳೆದ ಒಂದು ವರ್ಷದಲ್ಲಿ 15 ಕ್ಕೂ ಹೆಚ್ಚು ಪತ್ರ ಬರೆದಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಹಾಗೂ ಮಗ ಜಮೀನು ವಶಪಡಿಸಿಕೊಂಡಿದ್ದಾರೆ ಎಂದಿದ್ದಾರೆ ಎಂದು ಜೋಶಿ ಹೇಳಿದರು.

ಇದು ಸ್ವಂತಕ್ಕೆ ಲಾಭ ಮಾಡಿಕೊಳ್ಳಲು ಮಾಡಿರುವ ಬಹುದೊಡ್ಡ ಹಗರಣ. ಇದರ ತನಿಖೆಯ ಹೊಣೆಯನ್ನು ಸಿಬಿಐಗೆ ಕೊಡಬೇಕು. ಸಿದ್ದರಾಮಯ್ಯ ಏನೂ ಮಾಡಿಲ್ಲ ಎಂದಾದರೆ ಸಿಬಿಐ ತನಿಖೆಗೆ ಕೊಡಲಿ ಎಂದು ಅವರು ಆಗ್ರಹಿಸಿದರು.

ಬಿಜೆಪಿಯದ್ದು 40 ಪರ್ಸೆಂಟ್ ಸರ್ಕಾರ ಎಂದರು. ಅದಕ್ಕೆ ಯಾವ ದಾಖಲೆಯೂ ಇಲ್ಲ. ಕೋರ್ಟ್ ಮಾನಹಾನಿ ಕೇಸ್ ಹಾಕಲಾಗಿತ್ತು. ಅದಕ್ಕೆ ವಾರೆಂಟ್ ತಗೆದುಕೊಂಡಿದ್ದಾರೆ. ಇದೀಗ ಎರಡು ಹಗರಣಗಳಲ್ಲಿ ಮುಖ್ಯಮಂತ್ರಿಯದ್ದೇ ಪಾತ್ರ ಇದೆ ಎಂದು ಜೋಶಿ ಟೀಕಿಸಿದರು.

ಸಿದ್ದರಾಮಯ್ಯರದ್ದು ಕಡುಭ್ರಷ್ಟ ಸರ್ಕಾರ: ಜೋಶಿ

ಒಂದು ಕಡೆ ವಾಲ್ಮೀಕಿ ಹಗರಣ, ಮತ್ತೊಂದು ಕಡೆ ಮುಡಾ ಹಗರಣ. ವಾಲ್ಮೀಕಿ ಹಗರಣ ಮುಚ್ಚಿ ಹಾಕಲು ಎಸ್​​ಐಟಿಯವರು ಕೆಲವರನ್ನು ಬಂಧಿಸಿದ್ದಾರೆ. ಅವರಿಗೆ ಅವಕಾಶ ಕೊಟ್ಟು ನೋಟಿಸ್ ಕೊಟ್ಟಿದ್ದಾರೆ. ನಾಗೇಂದ್ರ ಅವರಿಗೆ ಶುಕ್ರವಾರ ನೋಟಿಸ್ ಕೊಟ್ಟಿದ್ದಾರೆ. ಎಲ್ಲವನ್ನೂ ಮುಚ್ಚಿ ಹಾಕಲು ಷಡ್ಯಂತ್ರ ನಡೆದಿದೆ. ಸಿದ್ದರಾಮಯ್ಯ ಸರ್ಕಾರ ಒಂದು ಕಡುಭ್ರಷ್ಟ ಸರ್ಕಾರ ಎಂದು ಜೋಶಿ ಕಿಡಿಕಾರಿದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಯ ಜಮೀನೇ ಇಲ್ಲ, ನಕಲಿ‌ ದಾಖಲೆ‌ ಸೃಷ್ಟಿ ಎಂದ ಆರ್​​ಟಿಐ ಕಾರ್ಯಕರ್ತ

ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಇಲ್ಲ. ಬೋಗಸ್ ಗ್ಯಾರಂಟಿ ಹೆಸರಲ್ಲಿ ಯಾವ ಕೆಲಸಗಳೂ ನಡೆಯುತ್ತಿಲ್ಲ. ದಿವಾಳಿ ಸರ್ಕಾರದಲ್ಲಿ ಲೂಟಿ ಮಾಡುವ ಕೆಲಸ ನಡೆಯುತ್ತಿದೆ. ಬಣವೆಗೆ ಬೆಂಕಿ ಹಚ್ಚಿ ಸಿಗರೇಟ್ ಹೇಗೆ ಹಚ್ಕೋಬೇಕು ಎಂಬುದನ್ನು ಇವರಿಂದ ನೋಡಿ ಕಲಿಯಬೇಕು. ದಲಿತರ ಹಣ ಗ್ಯಾರಂಟಿಗೆ ಉಪಯೋಗ ಮಾಡಿಕೊಂಡಿದ್ದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು.

ಹಿಂದೂ ವಿರೋಧಿ ಸರ್ಕಾರ: ಜೋಶಿ

ಲವ್ ಜಿಹಾದ್ ಕುರಿತು ಶ್ರೀರಾಮಸೇನೆ ಹೆಲ್ಪಲೈನ್ ಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಈ ಸರ್ಕಾರ ಹಿಂದೂ ವಿರೋಧಿ ಸರ್ಕಾರ. ಸರ್ಕಾರ ಫೇಸ್‌ಬುಕ್‌ ಬಂದ್ ಮಾಡಿರೋದು ತಪ್ಪು. ಈ ವಿಚಾರ ನನಗೆ ಗೊತ್ತಿಲ್ಲ. ಫೇಸ್‌ಬುಕ್‌ ಬಂದ್‌ ಮಾಡಿದ್ದರೆ ಆತ್ಯಂತ ಖಂಡನೀಯ. ಬಾಂಬ್ ಬೆದರಿಕೆ ಹಾಕೋದು ಸರಿ ಅಲ್ಲ. ಹಿಂಸೆ ಯಾವತ್ತೂ ಸರಿ‌ಯಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ಮಾಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Sat, 6 July 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?