ಬೆಳಗಾವಿ–ಹುನಗುಂದ–ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ: ಪ್ರಧಾನಿಗೆ ಸಚಿವ ಜೋಶಿ ಕೃತಜ್ಞತೆ
Pralhad Joshi: 320 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆದಿದೆ - ಸಚಿವ ಪ್ರಲ್ಹಾದ ಜೋಶಿ
ಬೆಂಗಳೂರು: ಬೆಳಗಾವಿ –ಹುನಗುಂದ –ರಾಯಚೂರು ರಾಷ್ಟ್ರೀಯ ಹೆದ್ದಾರಿ (Belagavi Hungund Raichur National Highway) ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಲ್ಹಾದ ಜೋಶಿ (Pralhad Joshi) ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು 320 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಶೀಘ್ರವೇ ಈಡೇರಲಿದೆ ಎಂದಿದ್ದಾರೆ.
ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಅರ್ಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, “ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರ ಅನುಕೂಲಕ್ಕೆ ಅನುಗುಣವಾಗಿ ಕಾಮಗಾರಿಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಳಗಾವಿ – ಹುನಗುಂದ – ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. 320 ಕಿಮೀ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವರಾದ ಶ್ರೀ @nitin_gadkari ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. pic.twitter.com/kFrVG5oGsw
— Pralhad Joshi (@JoshiPralhad) November 30, 2022
Also Read: