ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ವಿವಿ ಸಿಂಡಿಕೇಟ್ ಸದಸ್ಯರ ಕಿಡಿ; ಮಾನಹಾನಿ ಪ್ರಕರಣ ದಾಖಲಿಸುವ ಎಚ್ಚರಿಕೆ

ವಿವಿಯಲ್ಲಿ 6 ಸಿಂಡಿಕೇಟ್ ಸದಸ್ಯರು ಆರ್​ಎಸ್​ಎಸ್​ ಹಿನ್ನೆಲೆಯವರು. ಸಿಂಡಿಕೇಟ್ ಸದಸ್ಯರು ಹಣ ಪಡೆದ ಬಗ್ಗೆ ಸಾಬೀತುಪಡಿಸಲಿ. ಇಲ್ಲವಾದಲ್ಲಿ ಮಾನಹಾನಿ ಪ್ರಕರಣ ದಾಖಲಿಸುತ್ತೇವೆ ಎಂದು ಹೆಚ್​.ಡಿ.ಕುಮಾರಸ್ವಾಮಿಗೆ  ಧಾರವಾಡ ವಿವಿ ಸಿಂಡಿಕೇಟ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. 

ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ವಿವಿ ಸಿಂಡಿಕೇಟ್ ಸದಸ್ಯರ ಕಿಡಿ; ಮಾನಹಾನಿ ಪ್ರಕರಣ ದಾಖಲಿಸುವ ಎಚ್ಚರಿಕೆ
ವಿವಿ ಸಿಂಡಿಕೇಟ್ ಸದಸ್ಯರು

ಧಾರವಾಡ: ಆರ್​ಎಸ್​ಎಸ್​ನವರೇ ಹೆಚ್ಚಾಗಿ ವಿವಿ ಸಿಂಡಿಕೇಟ್​ಗಳಲ್ಲಿ ಸದಸ್ಯರಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ, ವಿವಿ ಸಿಂಡಿಕೇಟ್ ಸದಸ್ಯರು ತಿರುಗೇಟು ನೀಡಿದ್ದಾರೆ. ಧಾರವಾಡದ ಕರ್ನಾಟಕ ವಿವಿಯ ಸಿಂಡಿಕೇಟ್ ಸದಸ್ಯರಲ್ಲಿ ಆರ್​ಎಸ್​ಎಸ್​ನವರು ಇದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳಿರುವುದು ನಿಜ. ನಾವು ಆರ್​ಎಸ್​ಎಸ್​ (RSS) ಕಾರ್ಯಕರ್ತರೆಂದು ಹೆಮ್ಮೆಯಿಂದ ಹೇಳುತ್ತೇವೆ ಎಂದು ತಿಳಿಸಿದ್ದಾರೆ.

ವಿವಿಯಲ್ಲಿ 6 ಸಿಂಡಿಕೇಟ್ ಸದಸ್ಯರು ಆರ್​ಎಸ್​ಎಸ್​ ಹಿನ್ನೆಲೆಯವರು. ಸಿಂಡಿಕೇಟ್ ಸದಸ್ಯರು ಹಣ ಪಡೆದ ಬಗ್ಗೆ ಸಾಬೀತುಪಡಿಸಲಿ. ಇಲ್ಲವಾದಲ್ಲಿ ಮಾನಹಾನಿ ಪ್ರಕರಣ ದಾಖಲಿಸುತ್ತೇವೆ ಎಂದು ಹೆಚ್​.ಡಿ.ಕುಮಾರಸ್ವಾಮಿಗೆ  ಧಾರವಾಡ ವಿವಿ ಸಿಂಡಿಕೇಟ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಹಣ ತೆಗೆದುಕೊಂಡವರ ಹೆಸರು ಹೇಳಬೇಕು. ಏಳು ದಿನಗಳಲ್ಲಿ ಹಣ ತೆಗೆದುಕೊಂಡಿದ್ದನ್ನು ಸಾಬೀತು ಮಾಡಬೇಕು. ಆಗದಿದ್ದಲ್ಲಿ ಕ್ಷಮಾಪಣೆ ಕೇಳಬೇಕು. ಇಲ್ಲದಿದ್ದರೆ ಮಾನಹಾನಿ ಕೇಸ್ ಹಾಕುತ್ತೇವೆ. ಪ್ರಚಾರಕ್ಕಾಗಿ ಆರ್​ಎಸ್​ಎಸ್ ಬಗ್ಗೆ ಹೇಳುತ್ತಿದ್ದಾರೆ. ಸಂಘ ಪರಿವಾರಕ್ಕೆ ಬೈದರೆ ವೋಟ್ ಬರುತ್ತವೆ ಎಂದು ಹೀಗೆ ಹೇಳುತ್ತಿದ್ದಾರೆ ಎಂದು ಸಿಂಡಿಕೇಟ್ ಸದಸ್ಯ ಸುಂಧೀಂದ್ರ ದೇಶಪಾಂಡೆ ತಿಳಿಸಿದ್ದಾರೆ.

ಆರ್​ಎಸ್​ಎಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
ಆರ್​ಎಸ್​ಎಸ್ ವಿರುದ್ಧ ಇತ್ತೀಚೆಗೆ ಗಂಭೀರ ಆರೋಪಗಳನ್ನು ಮಾಡುತ್ತಾ ಬಂದಿರುವ ಜೆಡಿಎಸ್ ನಾಯಕ, ​ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಅವರು ನಿನ್ನೆ(ಅಕ್ಟೋಬರ್​ 16) ಹೊಸ ಬಾಂಬ್ ಸಿಡಿಸಿದ್ದಾರೆ. ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರ್​ಎಸ್​ಎಸ್​ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾತನಾಡಿರುವ ಹೆಚ್. ಡಿ.ಕುಮಾರಸ್ವಾಮಿ ಮತ್ತೆ ಆರ್​ಎಸ್​ಎಸ್​ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಇವತ್ತು ಈ ಸರ್ಕಾರದಲ್ಲಿ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಆರ್​ಎಸ್​ಎಸ್​ನ ಕಾರ್ಯಕರ್ತರನ್ನು ಸಿಂಡಿಕೇಟ್ ಮೆಂಬರ್ ಮಾಡಿಕೊಂಡಿದ್ದಾರೆ. ಕೆಲಸ ಆಗಲು ಒಂದು ಎರಡು ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದಾರೆ. 40 ವರ್ಷದ ಹಿಂದಿನ ಆರ್​ಎಸ್​ಎಸ್​ ಬೇರೆ, ಈಗಿನ ಆರ್​ಎಸ್​ಎಸ್​ ಬೇರೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ಇದನ್ನೂ ಓದಿ:
‘ಆರ್​ಎಸ್​ಎಸ್​ ಒಂದು ಕೋಮುವಾದಿ ಸಂಘಟನೆ’- ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

RSS ವಿರುದ್ಧ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ: ಎಲ್ಲ ವಿವಿಗಳಲ್ಲಿ ಆರ್​ಎಸ್​ಎಸ್​ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ!

Click on your DTH Provider to Add TV9 Kannada