ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಗೆ ಲಿಂಗಾಯತ ಮುಖಂಡರಿಂದ ಒತ್ತಡ

ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿ ಕಣದಲ್ಲಿದ್ದಾರೆ. ಈ ನಡುವೆ ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಶಿರಹಟ್ಟಿ ಮಠದ ಪೀಠಾಧಿಪತಿ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಗೆ ಲಿಂಗಾಯತ ಮುಖಂಡರಿಂದ ಒತ್ತಡ
ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಗೆ ಲಿಂಗಾಯತ ಮುಖಂಡರಿಂದ ಒತ್ತಡ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Rakesh Nayak Manchi

Updated on: Mar 22, 2024 | 11:33 AM

ಧಾರವಾಡ, ಮಾ.22: ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ (Dharwad) ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿ (Vinod Asooti) ಕಣದಲ್ಲಿದ್ದಾರೆ. ಈ ನಡುವೆ ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಶಿರಹಟ್ಟಿ ಮಠದ ಪೀಠಾಧಿಪತಿ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಗದಗ ಜಿಲ್ಲೆಯ ಶಿರಹಟ್ಟಿ ಮಠದ ಪೀಠಾಧಿಪತಿಯಾಗಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮದ ಭಕ್ತರು ಒತ್ತಾಯಿಸಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ಇದೇ ಕಾರಣಕ್ಕೆ ಸ್ಪರ್ಧೆ ಮಾಡುವಂತೆ ಸ್ವಾಮೀಜಿಗೆ ವಿವಿದ ಲಿಂಗಾಯತ ಮುಖಂಡರು ಹಾಗೂ ಭಕ್ತರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ, ಸಚಿವರ ಮಕ್ಕಳಿಗೆ ಮಣೆ

ಕಳೆದ ತಿಂಗಳು ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಶಿರಹಟ್ಟಿ ಮಠದ ಪಕ್ಕೀರ ಸ್ವಾಮೀಜಿಗಳ 5555 ನಾಣ್ಯಗಳ ತುಲಾಭಾರ ಮಾಡಿದ್ದರು. ಇದಲ್ಲದೆ ಹುಬ್ಬಳ್ಳಿ ಸೇರಿ ವಿವಿಧ ಕಡೆ ಭಾವೈಕ್ಯತಾ ರಥಯಾತ್ರೆ ಮಾಡಿದ್ದರು. ಚುನಾವಣಾ ದೃಷ್ಟಿಯಿಂದಲೇ ದಿಂಗಾಲೇಶ್ವರ ಸ್ವಾಮೀಜಿ ಅವರು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ‌ ಮಾಡಿದರಾ ಅನ್ನೋ ಅನುಮಾನ ಹುಟ್ಟುಹಾಕಿದೆ.

ಐದನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದ ಪ್ರಲ್ಹಾದ್ ಜೋಶಿ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಐದನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸತತ ನಾಲ್ಕು ಬಾರಿ ಗೆದ್ದಿರುವ ಜೋಶಿಗೆ ಈ ಬಾರಿ ಮತ್ತೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಲಿಂಗಾಯತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಹೈಕಮಾಂಡ್ ಬ್ರಾಹ್ಮಣ ಸಮುದಾಯದ ಜೋಶಿ ಅವರಿಗೆ ಮಣೆ ಹಾಕಿದ್ದಾರೆ.

ಇತ್ತ, ಕಾಂಗ್ರೆಸ್ ಹೈಕಮಾಂಡ್ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಅಳೆದು ತೂಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ಕ್ಷೇತ್ರವನ್ನು ಒಬಿಸಿ ಕೋಟಾಕ್ಕೆ ನೀಡಬೇಕು ಎಂಬ ಬೇಡಿಕೆ ವ್ಯಕ್ತವಾದ ಹಿನ್ನೆಲೆ ವಿನೋದ ಅಸೂಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ