Vice-President to Visit Karnataka: ಇಂದು ಹುಬ್ಬಳ್ಳಿ-ಧಾರವಾಡಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಉಪ ರಾಷ್ಟ್ರಪತಿ ಜಗದೀಪ್ ಧನ್​ ಕರ್ ಅವರು ನಾಳೆ ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದಲ್ಲಿ ಧಾರವಾಡಕ್ಕೆ ಆಗಮಿಸಲಿದ್ದಾರೆ. ಮೈನ್ ಗೇಟ್ ಕ್ಯಾಂಪಸ್, ಕೆಆರ್​ಡಿಸಿ, ಸಿಎಲ್​ಟಿ ಉದ್ಘಾಟನೆ ಮಾಡಲಿದ್ದಾರೆ. ರೂಪ್ ಟಾಪ್ ಸೋಲಾರ್ ಪ್ಯಾನಲ್ ಫೆಸಿಲಿಟಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಎಂ.ಎಂ.ಜೋಶಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. 

Vice-President to Visit Karnataka: ಇಂದು ಹುಬ್ಬಳ್ಳಿ-ಧಾರವಾಡಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ
ಉಪ ರಾಷ್ಟ್ರಪತಿ ಜಗದೀಪ್ ಧನ್​ಕರ್
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ವಿವೇಕ ಬಿರಾದಾರ

Updated on:Mar 01, 2024 | 7:36 AM

ಧಾರವಾಡ, ಮಾರ್ಚ್​​ 01: ಉಪರಾಷ್ಟ್ರಪತಿ ಜಗದೀಪ್ ಧನಕರ್  ಅವರು ಇಂದು (ಮಾ.01) ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದ ಮೂಲಕ  (Jagdeep Dhankhar)   ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಿ, ಮಧ್ಯಾಹ್ನ 2:30ಕ್ಕೆ ಇಲ್ಲಿನ ಐಐಟಿ ಕ್ಯಾಂಪಸ್​​ಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಿಸಲಾಗಿರುವ ಮೈನ್ ಗೇಟ್ ಕ್ಯಾಂಪಸ್, ಕೆಆರ್​ಡಿಸಿ, ಸಿಎಲ್​ಟಿ ಉದ್ಘಾಟನೆ ಮಾಡಲಿದ್ದಾರೆ. ರೂಪ್ ಟಾಪ್ ಸೋಲಾರ್ ಪ್ಯಾನಲ್ ಫೆಸಿಲಿಟಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಎಂ.ಎಂ.ಜೋಶಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ.

ಕಾರ್ಗಿಲ್ ಸ್ತೂಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿ

ಪುಲ್ವಾಮಾ ದಾಳಿಗೆ ಐದು ವರ್ಷದ ಹಿನ್ನೆಲೆಯಲ್ಲಿ ಧಾರವಾಡದ ಡಿಸಿ ಕಚೇರಿ ಬಳಿ ಇರುವ ಕಾರ್ಗಿಲ್ ಸ್ತೂಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿ ನೀಡಿದ್ದರು. ಕಾರ್ಗಿಲ್ ಯುದ್ಧದ ಬಳಿಕ ಸ್ಥಾಪಿಸಲಾಗಿರುವ ಸ್ತೂಪ ಇದಾಗಿದ್ದು, ಹುತಾತ್ಮ ಸೈನಿಕರ ನೆನಪಿಗಾಗಿ ಸ್ಥಾಪಿಸಲಾಗಿದೆ. ಅಲ್ಲಿಗೆ ಭೇಟಿ ನೀಡಿದ ಜೋಶಿ, ಹುತಾತ್ಮ ಸೈನಿಕರಿಗೆ ಪುಷ್ಪಾರ್ಚನೆ ಮೂಲಕ ನಮನ ಸಲ್ಲಿಸಿದರು. ಈ ವೇಳೆ ಅವರು ಸೈನಿಕರನ್ನು ಸ್ಮರಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್‌ಯುಸಿಐ ಸಂಘಟನೆಯಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಹಿನ್ನೆಲೆ ಧಾರವಾಡದಲ್ಲಿ ಎಸ್‌ಯುಸಿಐ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ನಗರದ ಕಲಾಭವನದಿಂದ ರ‍್ಯಾಲಿ ಮೂಲಕ ಆಗಮಿಸಿ ನೂರಕ್ಕೂ ಹೆಚ್ಚು ರೈತರು ಮತ್ತು ಕಾರ್ಮಿಕರಿಂದ ಪ್ರತಿಭಟನೆ ಮಾಡಲಾಗಿದೆ. ಬೆಲೆ ಏರಿಕೆ ತಡೆಗಟ್ಟಬೇಕು. ಸರ್ಕಾರಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಮಾಡಬೇಕು. ಎಲ್ಲರಿಗೂ ಉಚಿತ ಆರೋಗ್ಯ ಸೇವೆ ನೀಡಬೇಕು.

ಇದನ್ನೂ ಓದಿ: ಮಹದಾಯಿ ಹೋರಾಟಗಾರರಿಂದ ಪ್ರಹ್ಲಾದ್​ ಜೋಶಿ ಕಾರಿಗೆ ಮುತ್ತಿಗೆ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

ಜನವಿರೋಧಿ ವಿದ್ಯುತ್ ಕಾಯ್ದೆ-2022ಅನ್ನು ರದ್ದುಗೊಳಿಸಬೇಕು. ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು. ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಲಾಗಿದೆ. ಡಿಸಿ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Thu, 29 February 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM