AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಲ್ಲಿ ದೇವಿ‌ ಜಾತ್ರೆ ಮಾಡಬೇಕಂದ್ರೆ ಜನ ಐದು ದಿನ ಮನೆ ಖಾಲಿಮಾಡಬೇಕು!: ಕಾರಣ ಇಲ್ಲಿದೆ

ಧಾರವಾಡದ ಕಲಘಟಗಿಯಲ್ಲಿ ಗ್ರಾಮದೇವಿ ಜಾತ್ರೆ ವಿಶಿಷ್ಟ ಆಚರಣೆಗೆ ಸಾಕ್ಷಿಯಾಗಿದೆ. ದೇವಿಯ ಜಾತ್ರೆಗಾಗಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಸರ್ವಧರ್ಮದ ಜನರು ಐದು ದಿನಗಳ ಕಾಲ ಮನೆಗಳನ್ನು ಖಾಲಿ ಮಾಡಿ ಹೊರ ಹೋಗುತ್ತಾರೆ. ದುಷ್ಟ ಶಕ್ತಿಗಳ ನಿವಾರಣೆಗಾಗಿ ಗ್ರಾಮದೇವಿ ಸಂಚರಿಸುತ್ತಾಳೆ ಎಂಬ ನಂಬಿಕೆಯಿಂದ ನೂರಾರು ವರ್ಷಗಳಿಂದ ಈ ಹೊರವಾರ ಪದ್ಧತಿ ಚಾಲ್ತಿಯಲ್ಲಿದೆ.

ಈ ಊರಲ್ಲಿ ದೇವಿ‌ ಜಾತ್ರೆ ಮಾಡಬೇಕಂದ್ರೆ ಜನ ಐದು ದಿನ ಮನೆ ಖಾಲಿಮಾಡಬೇಕು!: ಕಾರಣ ಇಲ್ಲಿದೆ
ಮನೆಗಳಿಗೆ ಬೀಗ, ಊರಿಗೆ ಊರೇ ಖಾಲಿ ಖಾಲಿImage Credit source: Tv9 Kannada
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 17, 2026 | 6:28 PM

Share

ಹುಬ್ಬಳ್ಳಿ, ಫೆಬ್ರವರಿ 17: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಎಲ್ಲಿ ನೋಡಿದ್ರೂ ಜನರು ಹೆಂಡತಿ ಮಕ್ಕಳನ್ನು ಕರೆದುಕೊಂಡು ಮನೆ ತೊರೆಯುತ್ತಿರುವ ದೃಶ್ಯಗಳು ಕಂಡು ಬರ್ತಿವೆ. ಅಷ್ಟಕ್ಕೂ ಊರಿಗೇನು ಯಾವುದೇ ಸಾಂಕ್ರಾಮಿಕ ರೋಗ ಲಗ್ಗೆ ಇಟ್ಟಿಲ್ಲ. ಹೀಗಿದ್ರೂ ಪಟ್ಟಣಕ್ಕೆ ಪಟ್ಟಣವೇ ಬಂದ್​​ ಆಗಿದೆ. ಇದಕ್ಕೆ ಕಾರಣ ದೇವಿಯ ಜಾತ್ರೆ. ಹೌದು, ದೇವಿ ಜಾತ್ರೆ ನಡೆಯಬೇಕಾದ್ರೆ ಐದು ದಿನ ಜನರು ಮನೆ ಖಾಲಿ ಮಾಡಬೇಕು. ಹಿಂದೂಗಳು ಮಾತ್ರವಲ್ಲದೆ ಮುಸ್ಲಿಂ, ಕ್ರಿಶ್ಚಿಯನ್ ಸೇರಿ ಸರ್ವ ಧರ್ಮದವರು ಇಂತಹದೊಂದು ಆಚರಣೆಯನ್ನು ಪಾಲನೆ ಮಾಡಬೇಕು.

ಕಲಘಟಗಿಯ ಗ್ರಾಮದೇವಿ ಜಾತ್ರೆ ಉತ್ತರ ಕರ್ನಾಟಕದ ಅತಿದೊಡ್ಡ ಜಾತ್ರೆಗಳಲ್ಲಿ ಒಂದು. ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಜನರು ಇಲ್ಲಿಗೆ ಭೇಟಿ ನೀಡುತ್ತಾರೆ ಮತ್ತು ಜಾತ್ರೆಯ ವೈಭವಕ್ಕೆ ಸಾಕ್ಷಿಯಾಗುತ್ತಾರೆ. ಮೂರು ವರ್ಷಗಳಿಗೊಮ್ಮೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಗ್ರಾಮದೇವಿಯ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತೆ. ಈ ಬಾರಿ ಇದೇ ಫೆಬ್ರವರಿ 25ರಿಂದ ಜಾತ್ರೆ ಆರಂಭವಾಗಲಿದೆ. ಜಾತ್ರೆ ಹಿನ್ನೆಲೆ ಕಲಘಟಗಿ ಸೇರಿದಂತೆ ಸುತ್ತಲಿನ ಐದು ಹಳ್ಳಿಗಳ ಜನರು ವಿಶಿಷ್ಟವಾದ ಪದ್ಧತಿಯನ್ನು ಆಚರಿಸುತ್ತಾರೆ. ಸಾವಿರಾರು ಜನರು ಕುಟುಂಬ ಸಮೇತ ತಮ್ಮ ಮನೆಗಳಿಗೆ ಬೀಗ ಹಾಕಿ ಪಟ್ಟಣದಿಂದ ಹೊರ ಹೋಗುತ್ತಾರೆ. ಕಲಘಟಗಿ, ದಾಸ್ತಿಕೊಪ್ಪ ಕಲಕುಂಡಿ, ಬೆಂಡಿಗೇರಿ, ಮಾಚಾಪುರ ಗ್ರಾಮಗಳಲ್ಲಿ ಹೊರವಾರ ಪದ್ಧತಿಯನ್ನು ಆಚರಿಸುತ್ತಾರೆ. ಈ ಐದು ಹಳ್ಳಿಗಳಲ್ಲಿ ಬರುವ ಯುಗಾದಿಯವರೆಗೆ ಮದುವೆ, ನಿಶ್ಚಿತಾರ್ಥ, ನಾಮಕರಣ ಸೇರಿದಂತೆ ಯಾವುದೇ ಶುಭ ಕಾರ್ಯಗಳನ್ನೂ ಮಾಡುವುದಿಲ್ಲ. ಈ ವರ್ಷದ ಹೋಳಿ ಹುಣ್ಣಿಮೆಯಂದು ಬಣ್ಣದೋಕುಳಿಯನ್ನು ಸಹ ಆಚರಿಸುವುದಿಲ್ಲ. ಜನರು ಮೂರು ಮಂಗಳವಾರ, ಎರಡು ಶುಕ್ರವಾರ ಸೇರಿ ಐದು ದಿನಗಳ ಕಾಲ ಮನೆಗಳನ್ನು ಖಾಲಿ ಮಾಡುತ್ತಾರೆ. ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಮನೆಯಿಂದ ದೂರವಿರುತ್ತಾರೆ. ಜಾತ್ರೆಗೆ ಮೊದಲು ಐದು ವಾರಗಳ ಆಚರಣೆ ನಡೆಯುತ್ತೆ.

ಇದನ್ನೂ ಓದಿ: ಹುಬ್ಬಳ್ಳಿಯ ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ; ಎತ್ತ ನೋಡಿದ್ರೂ ಜನವೋ ಜನ

ಇನ್ನು ಮನೆ ಬಿಟ್ಟು ತೆರಳುವ ಜನರು ಉದ್ಯಾನ, ಗದ್ದೆಗಳಲ್ಲಿ ಮತ್ತು ಪಟ್ಟಣದ ಹೊರಗಿನ ಮರಗಳ ಕೆಳಗೆ ದಿನ ಕಳೆಯುತ್ತಾರೆ. ಆಹಾರದ ಬುತ್ತಿಗಳನ್ನು ಕಟ್ಟಿಕೊಂಡು ಹೋಗಿ ಒಟ್ಟಾಗಿ ಊಟ ಮಾಡುತ್ತಾರೆ. ಈ ಐದು ದಿನ ಅಂಗಡಿ- ಮುಂಗಟ್ಟು ಮುಚ್ಚಿರುತ್ತೆ. ವ್ಯಾಪಾರ ವಹಿವಾಟುಗಳು ಸ್ಥಗಿತವಾಗುತ್ತವೆ. ಗ್ರಾಮದೇವಿ ಈ ಸಂದರ್ಭದಲ್ಲಿ ಊರಲ್ಲಿ ಸಂಚರಿಸುತ್ತಾಳೆ. ಅವಳು ದುಷ್ಟ ಶಕ್ತಿಗಳನ್ನು ಕೊಲ್ಲುತ್ತಾಳೆ ಎಂಬುದು ಜನರ ನಂಬಿಕೆ. ಹೊರವಾರ ಆಚರಣೆ ಮಾಡೋ ದಿನದಲ್ಲಿ ಮುಂಜಾನೆ ಹತ್ತು ಗಂಟೆಗೆ ಮನೆಯ ಹೊರಗಡೆ ಒಂದು ಚೊಂಬು ನೀರು ತುಂಬಿ ಇಟ್ಟು ಬರೋ ಜನರು, ಸಂಜೆ ಮನೆಗೆ ಹೋಗಿ ನೀರನ್ನು ಪೂಜೆ ಮಾಡಿ ಮನೆಯೊಳಗೆ ಇಡ್ತಾರೆ. ಜಾತ್ರೆ ಸಮಯದಲ್ಲಿ ಒಟ್ಟು ಐದು ದಿನಗಳ ಕಾಲ ಇಂತಹದೊಂದು ಸಂಪ್ರದಾಯವನ್ನು ನೂರಾರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗ್ತಿದೆ. ಹೊರವಾರದ ದಿನ ಮನೆಯಲ್ಲಿದ್ದರೆ ಕೆಡಕಾಗುತ್ತೆ ಅನ್ನೋ ನಂಬಿಕೆ ಜನರಲ್ಲಿದ್ದು, ಹೀಗಾಗಿ ಎಲ್ಲಾ ಧರ್ಮೀಯರು ಇಂತಹದೊಂದು ಆಚರಣೆಯನ್ನು ಕಟ್ಟುನಿಟ್ಟಾಗಿ ಮಾಡುತ್ತಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?