AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಅಪರಾಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್! ವಿನಯ್ ಕುಲಕರ್ಣಿ ಬೆಂಬಲಿಸಿ ಮೌನ ಮೆರವಣಿಗೆಗೆ ನಿರ್ಧಾರ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಬೆಂಬಲಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಏಪ್ರಿಲ್ 25ರಂದು ಧಾರವಾಡದಲ್ಲಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದ್ದು, ಈ ಮೂಲಕ ಕುಲಕರ್ಣಿ ಪರವಾಗಿ ಜನಾಭಿಪ್ರಾಯ ಮೂಡಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಕೊಲೆ ಅಪರಾಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್! ವಿನಯ್ ಕುಲಕರ್ಣಿ ಬೆಂಬಲಿಸಿ ಮೌನ ಮೆರವಣಿಗೆಗೆ ನಿರ್ಧಾರ
ವಿನಯ್ ಕುಲಕರ್ಣಿ ಬೆಂಬಲಿಸಿ ಮೌನ ಮೆರವಣಿಗೆಗೆ ಕಾಂಗ್ರೆಸ್ ಸಭೆಯಲ್ಲಿ ನಿರ್ಧಾರImage Credit source: tv9
ಸಂಜಯ್ಯಾ ಚಿಕ್ಕಮಠ
| Edited By: |

Updated on: Apr 21, 2026 | 10:47 AM

Share

ಹುಬ್ಬಳ್ಳಿ, ಏಪ್ರಿಲ್ 21: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಬೆಂಬಲಕ್ಕೆ ಕಾಂಗ್ರೆಸ್ (Congress) ಪಕ್ಷ ನಿಂತಿದೆ. ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ತಡರಾತ್ರಿ ಪ್ರಮುಖ ನಾಯಕರ ಸಭೆ ನಡೆಯಿತು.

ಹುಬ್ಬಳ್ಳಿ-ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ವಿನಯ್ ಕುಲಕರ್ಣಿಗೆ ರಾಜಕೀಯ ಪಿತೂರಿಯಿಂದ ಶಿಕ್ಷೆಯಾಗಿದೆ ಎಂದು ಆರೋಪಿಸಲಾಯಿತು. ಈ ಹಿನ್ನೆಲೆಯಲ್ಲಿ ಪಕ್ಷದ ಶಕ್ತಿಯನ್ನು ಪ್ರದರ್ಶಿಸಲು ಮತ್ತು ಕುಲಕರ್ಣಿ ಅವರಿಗೆ ನೈತಿಕ ಬೆಂಬಲ ನೀಡಲು ಏಪ್ರಿಲ್ 25ರಂದು ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೌನ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ಜಿಮ್‌ವೊಂದರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಇದು ಆಸ್ತಿ ವಿಚಾರಕ್ಕಾಗಿ ನಡೆದ ಕೊಲೆ ಎಂದು ಬಿಂಬಿತವಾಗಿತ್ತಾದರೂ, ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ಸಿಬಿಐ (CBI) ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಸುದೀರ್ಘ ತನಿಖೆಯ ನಂತರ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026 ರ ಏಪ್ರಿಲ್ 17 ರಂದು ವಿನಯ್ ಕುಲಕರ್ಣಿ ಮತ್ತು ಇತರ 16 ಮಂದಿಯನ್ನು ದೋಷಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕಾಂಗ್ರೆಸ್ ಸಭೆಯ ವಿಡಿಯೋ

ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ

ಈಗಾಗಲೇ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಅವರ ವಿರುದ್ಧದ ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ವಕೀಲರು ಸಿದ್ಧತೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಪಕ್ಷವು ಇದನ್ನು ರಾಜಕೀಯವಾಗಿ ಎದುರಿಸಲು ಸಜ್ಜಾಗಿದ್ದು, 25ರ ಮೆರವಣಿಗೆಯ ಮೂಲಕ ಆಕ್ರೋಶ ಹೊರಹಾಕಲು ಸಜ್ಜಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ