AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kulkarni Returns: 6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!

ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಬರೋಬ್ಬರಿ 6 ವರ್ಷಗಳ ಬಳಿಕ ತಮ್ಮ ಸ್ವಕ್ಷೇತ್ರ ಧಾರವಾಡಕ್ಕೆ ಭವ್ಯ ಎಂಟ್ರಿ ನೀಡಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧನದ ಬಳಿಕ ಜಿಲ್ಲಾ ಪ್ರವೇಶಕ್ಕೆ ಇದ್ದ ಕಾನೂನು ತೊಡಕುಗಳು ನಿವಾರಣೆಯಾಗಿವೆ. ಕೋರ್ಟ್ ಅನುಮತಿ ಸಿಗುತ್ತಿದ್ದಂತೆಯೇ ಕುಟುಂಬ ಸಮೇತರಾಗಿ ಆಗಮಿಸಿದ ವಿನಯ್ ಕುಲಕರ್ಣಿಗೆ ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ.

Vinay Kulkarni Returns: 6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!
6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Aug 28, 2026 | 12:07 PM

Share

ಮುಖ್ಯಾಂಶಗಳು

  • ಸುದೀರ್ಘ 6 ವರ್ಷಗಳ ಬಳಿಕ ಧಾರವಾಡ ನಿವಾಸಕ್ಕೆ ಶಾಸಕ ವಿನಯ್ ಕುಲಕರ್ಣಿ ಭವ್ಯ ಎಂಟ್ರಿ.
  • ಕೋರ್ಟ್​ ಅನುಮತಿ ಹಿನ್ನೆಲೆ ಪತ್ನಿ, ಮಕ್ಕಳೊಂದಿಗೆ ತವರೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ.
  • ಹಾರೋಬೆಳವಡಿ ವೀರಭದ್ರೇಶ್ವರ ದರ್ಶನ ಪಡೆದು ಮುರುಘಾ ಮಠಕ್ಕೆ ಭೇಟಿ ನೀಡಿದ ವಿನಯ್

ಧಾರವಾಡ, ಆಗಸ್ಟ್ 28: ಶಾಸಕ ವಿನಯ್ ಕುಲಕರ್ಣಿ (Vinay Kulkarni) ಬರೋಬ್ಬರಿ 6 ವರ್ಷಗಳ ಬಳಿಕ ತಮ್ಮ ಸ್ವಕ್ಷೇತ್ರ ಹಾಗೂ ಸ್ವಜಿಲ್ಲೆಯಾದ ಧಾರವಾಡಕ್ಕೆ ಮಂಗಳವಾರ ಅಧಿಕೃತವಾಗಿ ಹೆಜ್ಜೆ ಇಟ್ಟಿದ್ದಾರೆ. ಕೋರ್ಟ್‌ನಿಂದ ಜಿಲ್ಲಾ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ, ತಮ್ಮ ಬೆಂಬಲಿಗರ ಸಾಲು ಸಾಲು ಕಾರುಗಳ ಅಬ್ಬರದ ನಡುವೆ ಧಾರವಾಡದ ಶಿವಗಿರಿ ಬಡಾವಣೆಯಲ್ಲಿರುವ ನಿವಾಸಕ್ಕೆ ಪತ್ನಿ ಹಾಗೂ ಮಕ್ಕಳೊಂದಿಗೆ ಆಗಮಿಸಿದ್ದಾರೆ.

ಬೆಂಬಲಿಗರ ಅದ್ಧೂರಿ ಸ್ವಾಗತ

ಮನೆಗೆ ಬಂದ ನಾಯಕನನ್ನು ಬೆಂಬಲಿಗರು ಆರತಿ ಬೆಳಗಿ, ಮನೆ ಬಾಗಿಲಿಗೆ ಕುಂಬಳಕಾಯಿ ಒಡೆದು ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಿದ್ದಾರೆ. ಧಾರವಾಡಕ್ಕೆ ಆಗಮಿಸುವ ಮಾರ್ಗಮಧ್ಯೆ, ತಮ್ಮ ಮಕ್ಕಳಾದ ಹೇಮಂತ್ ಹಾಗೂ ವೈಶಾಲಿ ಜೊತೆ ಹಾರೋಬೆಳವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ವಿನಯ್ ಕುಲಕರ್ಣಿ, ಬಳಿಕ ಶ್ರೀ ಮುರುಘಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ವೀಡಿಯೋ ಇಲ್ಲಿದೆ

ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ

2016ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಭೀಕರ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ, 2020ರ ನವೆಂಬರ್ 5 ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ಸುಮಾರು 9 ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಅವರಿಗೆ ಬಳಿಕ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಆದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತಿನ ಮೇಲೆ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿತ್ತು. ಇತ್ತೀಚೆಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಆದೇಶ ಹಾಗೂ 42ನೇ ಜೆಎಮ್‌ಎಫ್‌ಸಿ ಕೋರ್ಟ್ ನೀಡಿದ ಅನುಮತಿಯಿಂದಾಗಿ, ಕಳೆದ 6 ವರ್ಷಗಳಿಂದ ಸ್ವಂತ ಜಿಲ್ಲೆಯಿಂದ ದೂರವಿದ್ದ ವಿನಯ್ ಕುಲಕರ್ಣಿಗೆ ಕೊನೆಗೂ ತವರೂರಿಗೆ ಮರಳುವ ಹಾದಿ ಸುಗಮವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Fri, 28 August 26

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ