AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಜಗದೀಶ್ ಶೆಟ್ಟರ್​ಗೆ ಟಿಕೆಟ್ ಸಿಗುತ್ತೆ ಅನ್ನೋ ವಿಶ್ವಾಸವಿದೆ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Jagdish Shettar: ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pralhad Joshi: ಜಗದೀಶ್ ಶೆಟ್ಟರ್​ಗೆ ಟಿಕೆಟ್ ಸಿಗುತ್ತೆ ಅನ್ನೋ ವಿಶ್ವಾಸವಿದೆ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಜಗದೀಶ್ ಶೆಟ್ಟರ್​ಗೆ ಟಿಕೆಟ್ ಸಿಗುತ್ತೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Apr 14, 2023 | 4:47 PM

Share

ಹುಬ್ಬಳ್ಳಿ : ಪ್ರಸ್ತುತ ಅಸೆಂಬ್ಲಿ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಟಿಕೆಟ್ (Hubli-Dharwad Central Assembly constituency) ಸಿಗುವ ವಿಶ್ವಾಸವಿದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ನಗರದಲ್ಲಿಂದು (Hubballi) ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯಲ್ಲಿ (BJP) 52 ಜನ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಶೆಟ್ಟರ್‌ಗೆ ಟಿಕೆಟ್ ಸಿಗುವ ನೀರಿಕ್ಷೆ ಇದೆ. ಈಗಾಗಲೆ ನಮ್ಮ ಅಭಿಪ್ರಾಯವನ್ನು ಮುಖಂಡರ ಬಳಿ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಕಾಂಗ್ರೆಸ್‍ನಂತೆ ಅಪ್ಪ ಮಕ್ಕಳಿಗೆ ಟಿಕೆಟ್ ಕೊಡುವುದಿಲ್ಲ. ಕಾಂಗ್ರೆಸ್ ಯೂಸ್ ಎಂಡ್ ಥ್ರೋ ಪಕ್ಷ, ಅಂತಹ ಪಕ್ಷಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೋಗಬಾರದು ಅನ್ನೋದು ನಮ್ಮ ಅಪೇಕ್ಷೆ. ಸವದಿ ಅವರಿಗೆ ನಮ್ಮ ಪಾರ್ಟಿ ಎಲ್ಲವನ್ನೂ ಕೊಟ್ಟಿದೆ. ಅವರನ್ನು ಉಪಮುಖ್ಯಮಂತ್ರಿಯಾಗಿ ಮಾಡಿದ್ದು ನಮ್ಮ ಪಕ್ಷ. ಇಲ್ಲಿ ಅವರಿಗೆ ಉತ್ತಮ ಭವಿಷ್ಯ ಇತ್ತು ಎಂದಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್‍ಗೆ ಬಹಳ ಅಭ್ಯರ್ಥಿಗಳಿದ್ದರು. ಇದರಿಂದ ಕೆಲವು ಕಡೆ ಗೊಂದಲ ಆಗಿದೆ. ಯಾವ ಪಕ್ಷ ಗೆಲ್ಲುತ್ತದೆಯೋ ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಇನ್ನೆರಡು ದಿನದಲ್ಲಿ ಪಕ್ಷದಲ್ಲಿ ಎದ್ದಿರುವ ಗೊಂದಲಗಳು ಬಗೆಹರಿಯುತ್ತವೆ. ಪಕ್ಷದ ಕಾರ್ಯಕರ್ತರು ನಮ್ಮ ಜೊತೆಗೆ ನಿಲ್ಲುತ್ತಾರೆ ಎಂದು ಅವರು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Fri, 14 April 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!