ಹೊಸ ಸಂಘಟನೆ ಕಟ್ಟಲು ನಿರ್ಧಾರ, ಬಾಗಲಕೋಟೆಯಲ್ಲಿ ಹೆಸರು ಘೋಷಣೆ: ಈಶ್ವರಪ್ಪ

ಬಿಜೆಪಿ ಪಕ್ಷವನ್ನು ಶುದ್ದಿ ಮಾಡುವ ಪಣ ತೊಟ್ಟಿರುವ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಇವತ್ತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಹೊಸ ಸಂಘಟನೆ ಕಟ್ಟಲು ತೀರ್ಮಾನಿಸಿದ್ದೇವೆ. ಸಂಘಟನೆ ಹೆಸರು ಬಾಗಲಕೋಟೆಯಲ್ಲಿ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.

ಹೊಸ ಸಂಘಟನೆ ಕಟ್ಟಲು ನಿರ್ಧಾರ, ಬಾಗಲಕೋಟೆಯಲ್ಲಿ ಹೆಸರು ಘೋಷಣೆ: ಈಶ್ವರಪ್ಪ
ಕೆಎಸ್​ ಈಶ್ವರಪ್ಪ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Oct 07, 2024 | 2:29 PM

ಹುಬ್ಬಳ್ಳಿ, ಅಕ್ಟೋಬರ್​ 07: ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಸಂಘಟನೆ ಬೇಕಾಗಿದೆ. ಹೀಗಾಗಿ ಸಾಧು-ಸಂತರ ಸೂಚನೆಯಂತೆ ಒಂದು ಸಂಘಟನೆ ಕಟ್ಟಲು ತೀರ್ಮಾನ ಮಾಡಿದ್ದೇವೆ. ಈ ಸಂಘಟನೆಗೆ ಸಾಧು-ಸಂತರು ಬೆಂಬಲ ಕೊಡುತ್ತೇವೆ ಎಂದಿದ್ದಾರೆ. ಸಂಘಟನೆ ರಚನೆಯ ಅಂತಿಮ ನಿರ್ಣಯವನ್ನು ಬಾಗಲಕೋಟೆಯಲ್ಲಿ (Bagalkot) ಕೈಗೊಳ್ಳುತ್ತೇವೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಎಲ್ಲ ಜಾತಿಯವರನ್ನು ಸೇರಿಸಿ ಮೊದಲ ಸಭೆ ಮಾಡಿದ್ದೇವೆ. ಎಲ್ಲ ರಾಜಕೀಯ ಪಕ್ಷದವರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ಸಲಹೆ ಬಂದಿವೆ. ಸಾಧು-ಸಂತರು ಕೂಡ ಸಲಹೆ ಕೊಟ್ಡಿದ್ದಾರೆ. ಅವರ ಸಲಹೆಗೆ ನಾವು ಒಪ್ಪಿದ್ದೇವೆ. ಬಾಗಲಕೋಟೆ ಚರಂತಿ ಮಠ ಸಮುದಾಯ ಭವನದಲ್ಲಿ ಅಕ್ಟೋಬರ್ 20 ರಂದು ಕಾರ್ಯಕ್ರಮ ನಡೆಯಲಿದೆ. 30 ರಿಂದ 40 ಜನ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಬಾಗಲಕೋಟೆ ಸಭೆ ಬಳಿಕ ಅಂತೀಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸಮಾಜದಲ್ಲಿ ಎಲ್ಲರಿಗೂ ಅನ್ಯಾಯ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪ ಸಂಖ್ಯಾತರ ವಿರುದ್ಧ ಅಲ್ಲ. ಆದರೆ, ರಾಷ್ಟ್ರದ್ರೋಹಿ ಮುಸ್ಲೀಮರ ವಿರುದ್ಧವಾಗಿರುತ್ತದೆ ಎಂದರು.

ಇದನ್ನೂ ಓದಿ: ಆರ್‌ಎಸ್‌ಎಸ್‌ ಮೂಲಕ ಮತ್ತೆ ಬಿಜೆಪಿ ಸೇರುವ ಅವಶ್ಯಕತೆ ನನಗಿಲ್ಲ: ಕೆಎಸ್​ ಈಶ್ವರಪ್ಪ

ನಾನು ರಾಯಣ್ಣ ಬ್ರಿಗೇಡ್ ಕಟ್ಟಿದಾಗ, ಜನ ಬೆಂಬಲ ಸಿಕ್ಕಿತ್ತು. ಆದರೆ, ಬಿಎಸ್​ ಯಡಿಯೂರಪ್ಪ ಅವರಿಗೆ ಸಹಿಸಿಕೊಳ್ಳಲು ಆಗದೆ ಅಮಿತ್ ಶಾ ಅವರಿಗೆ ದೂರು ಕೊಟ್ಟರು. ದೂರು ಕೊಡಲು ಕಾರಣವೇನು ಎಂದು ಬಿಎಸ್​ ಯಡಿಯೂರಪ್ಪ ಅವರು ಕಾರಣ ಹೇಳಿಲ್ಲ. ಸಂಘಟನೆ ಬೇಡಾ ಅಂತ ಮಾತ್ರ ಹೇಳಿದರು. ನಾನು ಪ್ರಾರ್ಥನೆ ಮಾಡಿದರೂ ಬಿಎಸ್​ ಯಡಿಯೂರಪ್ಪ ಕೇಳಲಿಲ್ಲ. ಅವತ್ತು ನಾನು ತಪ್ಪು ಮಾಡಿದೆ. ರಾಯಣ್ಣ ಬ್ರಿಗೇಡ್ ಇರಬೇಕಿತ್ತು ಎಂದು ಹೇಳಿದರು.

ಅಪ್ಪ ಮಕ್ಕಳು ಹೊಂದಾಣಿಕೆಯಿಂದ ಬಿಜೆಪಿ ಮುಕ್ತಿಯಾಗಬೇಕು. ಬಿಜೆಪಿ ಶುದ್ದೀಕರಣವಾಗಲು ಚುನಾವಣೆ ನಿಂತಿದ್ದೆ. ನಾನು ಬಿಜೆಪಿ ಸೇರಲ್ಲ, ನನಗೆ ಸಮಾಧಾನ ಆದರೆ ಮಾತ್ರ ವಾಪಸ್ ಬಿಜೆಪಿ ಸೇರುತ್ತೇನೆ. ನನ್ನ ಮಗನಿಗೆ ಹಾವೇರಿಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳೆ ಬಿಎಸ್​ ಯಡಿಯೂರಪ್ಪ ಮೋಸ ಮಾಡಿದರು ಎಂದು ಆರೋಪ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ವೀರಭದ್ರಪ್ಪ ಹಾಲರವಿ ಸೇರಿ ಅನೇಕ ಮುಖಂಡರು ಭಾಗಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು