Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 1ರಂದು ಉಚಿತವಾಗಿ ಅಕ್ಕಿ ಕೊಡದಿದ್ದರೆ ಪ್ರತಿಭಟನೆ ಮಾಡುತ್ತೇವೆ -ಬಸವರಾಜ ಬೊಮ್ಮಾಯಿ

ಜುಲೈ 1ರಂದು ಉಚಿತವಾಗಿ ಅಕ್ಕಿ ಕೊಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿಯವರು ಸಿಎಂ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ.

ಜುಲೈ 1ರಂದು ಉಚಿತವಾಗಿ ಅಕ್ಕಿ ಕೊಡದಿದ್ದರೆ ಪ್ರತಿಭಟನೆ ಮಾಡುತ್ತೇವೆ -ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jun 18, 2023 | 3:28 PM

ಹುಬ್ಬಳ್ಳಿ: ಜುಲೈ 1ರಂದು ಉಚಿತವಾಗಿ ಅಕ್ಕಿ(Anna Bhagya)ಕೊಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ(Central Government) ನಿರಾಕರಿಸಿದ್ದು ಅಕ್ಕ ಪಕ್ಕದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಜೊತೆ ಅಕ್ಕಿ ಖರೀದಿಗೆ ಮಾತುಕತೆ ನಡೆಯುತ್ತಿದೆ. ಹೀಗಾಗಿ ಜುಲೈ 1ರಿಂದ ಅನ್ನಭಾಗ್ಯ ಜಾರಿಯಾಗುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ. ಇದರ ನಡುವೆ ಈಗ ಬಸವರಾಜ ಬೊಮ್ಮಾಯಿಯವರು ಸಿಎಂ ಸಿದ್ದರಾಮಯ್ಯನವರಿಗೆ(Siddaramaiah) ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಬಳಿಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರೀಯತೆ ಬಹಳ ದಿನ ಉಳಿಯಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರ್ತೀವಿ ಅಂತೀದಾರೆ. ನಮಗೆ, ಬಡಜನರಿಗೆ ಒಳ್ಳೆದಾದ್ರೆ ಸಾಕು ಎಂದು ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ 15 ಕೆಜಿ ಅಕ್ಕಿ ನೀಡಲಿ: ಬಿವೈ ವಿಜಯೇಂದ್ರ

ರಾಜ್ಯದ ರೈತರು ಅಕ್ಕಿ ಕೊಡೋಕೆ ಮುಂದೆ ಬಂದ್ರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಅನ್ನೋದು ಸರಿ ಅಲ್ಲ. ಅಕಸ್ಮಾತ್ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದ್ರೆ ನಾವು ಪ್ರತಿಭಟನೆ ಮಾಡ್ತೀವಿ. ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ, 500 ಹಳ್ಳಿಗೆ ಕುಡಿಯೋ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು. ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನ‌ ಮಾಡಬೇಕಯ್ಯ. ಸೆಷನ್ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗತ್ತೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್