AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪಾಕ್ ನಡುವೆ ಡೊನಾಲ್ಡ್ ಟ್ರಂಪ್ ಮಧ್ಯೆಸ್ಥಿಕೆ ಬಗ್ಗೆ ಜೋಶಿ ಹೇಳಿದ್ದಿಷ್ಟು

ಭಾರತ-ಪಾಕಿಸ್ತಾನದ ನಡುವಿನ ಕದನ ವಿರಾಮ ಘೋಷಣೆ ನಂತರ ಕೆಲವರು ಖುಷಿ ಪಟ್ಟ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಇದರಲ್ಲಿ ಯಾವುದೇ ರೀತಿಯ ಸಂತಸ ಪಡುವುದಲ್ಲಾ. ಇದೊಂದು ದೇಶದ ಭದ್ರತೆ ವಿಚಾರ ಎಂದು ಹೇಳಿದ್ದಾರೆ. ಶಾಸಕ ಮಹೇಶ್ ಟೆಂಗಿನಕಾಯಿ ಪಾಕಿಸ್ತಾನ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಭಾರತ ಪಾಕ್ ನಡುವೆ ಡೊನಾಲ್ಡ್ ಟ್ರಂಪ್ ಮಧ್ಯೆಸ್ಥಿಕೆ ಬಗ್ಗೆ ಜೋಶಿ ಹೇಳಿದ್ದಿಷ್ಟು
ಸಚಿವ ಪ್ರಲ್ಹಾದ್​ ಜೋಶಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: May 11, 2025 | 2:21 PM

Share

ಹುಬ್ಬಳ್ಳಿ, ಮೇ 11: ಭಾರತ-ಪಾಕಿಸ್ತಾನದ (India-Pakistan) ನಡುವೆ ಮಧ್ಯಸ್ಥಿಕೆಗೆ ರೆಡಿ ಎಂದಿದ್ದ ಟ್ರಂಪ್ ಕೊನೆಗೂ ಪಾಕ್​ಗೆ ಬುದ್ಧಿ ಹೇಳಿದ್ದಾರೆ. ಭಾರತ-ಪಾಕಿಸ್ತಾನದ ನಡುವಿನ ಕದನಕ್ಕೆ ಬ್ರೇಕ್ ಬಿದ್ದಿದೆ ಎಂದು ಟ್ವೀಟ್ ಮೂಲಕ ಘೋಷಿಸಿದ್ದರು. ಭಾರತ-ಪಾಕ್ ಮಧ್ಯೆ ಟ್ರಂಪ್ ಮಧ್ಯೆಸ್ಥಿಕೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi), ಕೆಲ ಆಡಳಿತಾತ್ಮಕ ನಿರ್ಧಾರ ಇರುತ್ತವೆ. ಇದರಲ್ಲಿ ನಾನು ಏನು ಹೇಳಲ್ಲ. ವಿದೇಶಾಂಗ ಸಚಿವರು ಈ ಕುರಿತು ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.

ಕದನ ವಿರಾಮ ಘೋಷಣೆ ನಂತರ ಕೆಲವರು ಖುಷಿ ಪಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ದೇಶದ ಭದ್ರತೆ ವಿಚಾರ. ಇದರಲ್ಲಿ ಯಾವುದೇ ರೀತಿಯ ಸಂತಸ ಪಡುವುದು ಸರಿಯಲ್ಲ ಎಂದಿದ್ದಾರೆ.

ಪಾಕ್​ಗೆ ಭಾರತ ತಕ್ಕ ಉತ್ತರ ನೀಡಿದೆ

ಭಾರತ ಪಾಕಿಸ್ತಾನ ಯುದ್ಧ ವಿಚಾರವಾಗಿ ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿ ವಿಚಾರವಾಗಿ ಮಾತನಾಡಿದ ಅವರು, ಇದೊಂದು ಪಾಕಿಸ್ತಾನದ ಇಬ್ಬಗೆಯ ನೀತಿ. ಯುದ್ಧ ಆರಂಭವಾದಾಗಿನಿಂದ ಪಾಕ್​ಗೆ ಭಾರತ ತಕ್ಕ ಉತ್ತರ ನೀಡಿದೆ. ವಿಶ್ವ ಮಟ್ಟದಲ್ಲಿ ಕೆಲವು ಕ್ರಮ ಕೈಗೊಳ್ಳಬೇಕಾಗುತ್ತದೆ. ಕದನ ವಿರಾಮ ಬಳಿಕವೂ ಪಾಕ್ ದಾಳಿ ಸರಿಯಾದ ಕ್ರಮವಲ್ಲ. ಪಾಕ್ ಮಿಲಿಟರಿ ಪಡೆ ಸರ್ಕಾರದ ಮಾತು ಕೇಳಲ್ಲ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್
Image
7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಯೋಧ!
Image
ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ
Image
ಕೆಕೆ ಎಕ್ಸ್​ಪ್ರೆಸ್​ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ವ್ಯಕ್ತಿ ಬಂಧನ

ಇದನ್ನೂ ಓದಿ: ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್

ಪಾಕಿಸ್ತಾನ ಭಯೋತ್ಪಾದನೆಯನ್ನ ಪೋಷಣೆ ಮಾಡುತ್ತಾ ಇರುತ್ತೆ. ಪಾಕ್​ಗೆ ಪಾಠ ಕಲಿಸಲು ನಮ್ಮ ಸೇನೆಗೆ ಎಲ್ಲಾ ಸ್ವಾತಂತ್ರ್ಯ ನೀಡಲಾಗಿದೆ. ಯುದ್ಧದಲ್ಲಿ ಸಾಕಷ್ಟು ಸಾವು ನೋವು ಸಂಭವಿಸಿವೆ. ನಾವು ಇದರಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣ ಬೆರೆಸಲ್ಲ. ಪಾಕಿಸ್ತಾನಕ್ಕೆ ಯಾವ ರೀತಿ ಉತ್ತರ ಕೊಡಬೇಕು ಕೊಡಲಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಪಾಕಿಸ್ತಾನವನ್ನು ನಂಬುವುದಿಲ್ಲ: ಶಾಸಕ ಮಹೇಶ್ ಟೆಂಗಿನಕಾಯಿ

ನಗರದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದು, ಯುದ್ದಕ್ಕೆ ಬೆಚ್ಚಿಬಿದ್ದ ಪಾಕ್ ಕದನ ವಿರಾಮಕ್ಕೆ ಮನವಿ ಮಾಡಿತ್ತು. ನಮ್ಮ ಪ್ರಧಾನಿ ನರೇಂದ್ರ ಮೋದಿ ಕೂಡ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ. ಆದರೆ ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ನಂಬುವುದಿಲ್ಲ. ಪಾಕಿಸ್ತಾನ ಯಾವಾಗ ಬೇಕಾದ್ರೂ ಮೋಸ ಮಾಡಬಹುದು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್