ಯಾರು ಈ ಶ್ರೀಕಾಂತ್ ಪೂಜಾರಿ? ರಾಮ ಜನ್ಮಭೂಮಿ ಹೋರಾಟಗಾರನ ಹಿನ್ನೆಲೆ ಇಲ್ಲಿದೆ ನೋಡಿ

ಶ್ರೀಕಾಂತ್ ಪೂಜಾರಿ ಹಿಂದೂ ಪರ ಸಂಘಟನೆಗಳ ಸದಸ್ಯರಾಗಿದ್ದರು ಮತ್ತು 1992 ರಲ್ಲಿ ನಡೆದ ಶ್ರೀರಾಮ ಜನ್ಮಭೂಮಿ ಪ್ರತಿಭಟನೆ ಸೇರಿದಂತೆ ಹಲವಾರು ಆಂದೋಲನಗಳಲ್ಲಿ ಭಾಗವಹಿಸಿದ್ದರು. 1992ರ ಡಿಸೆಂಬರ್ 5ರಂದು ಹುಬ್ಬಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಪೂಜಾರಿ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿತ್ತು.

ಯಾರು ಈ ಶ್ರೀಕಾಂತ್ ಪೂಜಾರಿ? ರಾಮ ಜನ್ಮಭೂಮಿ ಹೋರಾಟಗಾರನ ಹಿನ್ನೆಲೆ ಇಲ್ಲಿದೆ ನೋಡಿ
ಶ್ರೀಕಾಂತ್ ಪೂಜಾರಿ
Follow us
TV9 Web
| Updated By: Ganapathi Sharma

Updated on: Jan 03, 2024 | 6:48 AM

ಹುಬ್ಬಳ್ಳಿ, ಜನವರಿ 3: 1992ರಲ್ಲಿ, ಅಂದರೆ 31 ವರ್ಷಗಳ ಹಿಂದೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ (Hubballi) ಕರಸೇವಕ ಶ್ರೀಕಾಂತ್ ಪೂಜಾರಿ (51) (Srikanth Poojari) ಅವರನ್ನು ಭಾನುವಾರ ಬಂಧಿಸಲಾಗಿರುವುದು ಇದೀಗ ರಾಜಕೀಯ ಆಯಾಮ ಪಡೆದುಕೊಂಡಿದೆ. ಅಯೋಧ್ಯೆ ರಾಮ ಜನ್ಮಭೂಮಿಗಾಗಿ ಹುಬ್ಬಳ್ಳಿಯಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾದವರನ್ನು ಬಂಧಿಸಿರುವುದರ ಹಿಂದೆ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರಿಗೆ ಬೆದರಿಕೆ ಹಾಕುವ ಹುನ್ನಾರವಿದೆ ಎಂದು ರಾಜ್ಯ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಪೂಜಾರಿ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಂತ ಇಂದು (ಬುಧವಾರ) ಪ್ರತಿಭಟನೆಯನ್ನೂ ಬಿಜೆಪಿ ನಡೆಸಲಿದೆ. ಈ ಮಧ್ಯೆ ಹಳೆಯ ಬಾಕಿ ಇರುವ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಪೊಲೀಸ್ ಇಲಾಖೆಯ ಮಾಮೂಲಿ ಪ್ರಕ್ರಿಯೆಯ ಭಾಗವಾಗಿ ಪೂಜಾರಿಯನ್ನು ಬಂಧಿಸಲಾಗಿದೆ ಎಂದು ಸರ್ಕಾರ ಮತ್ತು ಪೊಲೀಸರು ತಿಳಿಸಿದ್ದಾರೆ.

ಶ್ರೀಕಾಂತ್ ಪೂಜಾರಿ ಯಾರು?

ಶ್ರೀಕಾಂತ್ ಪೂಜಾರಿ ಹಿಂದೂ ಪರ ಸಂಘಟನೆಗಳ ಸದಸ್ಯರಾಗಿದ್ದರು ಮತ್ತು 1992 ರಲ್ಲಿ ನಡೆದ ಶ್ರೀರಾಮ ಜನ್ಮಭೂಮಿ ಪ್ರತಿಭಟನೆ ಸೇರಿದಂತೆ ಹಲವಾರು ಆಂದೋಲನಗಳಲ್ಲಿ ಭಾಗವಹಿಸಿದ್ದರು. 1992ರ ಡಿಸೆಂಬರ್ 5ರಂದು ಹುಬ್ಬಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಪೂಜಾರಿ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿತ್ತು. ಹುಬ್ಬಳ್ಳಿಯ ದುರ್ಗದ ಬೈಲ್‌ನಲ್ಲಿ ಅಂಗಡಿಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಪೂಜಾರಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದಾಗ ಪೂಜಾರಿಗೆ 20 ವರ್ಷ ವಯಸ್ಸಾಗಿತ್ತು.

1992 ಮತ್ತು 2018 ರ ನಡುವೆ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪೂಜಾರಿ ವಿರುದ್ಧ 16 ಎಫ್‌ಐಆರ್‌ಗಳು ದಾಖಲಾಗಿವೆ. ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದಕ್ಕಾಗಿ ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 34 ರ ಅಡಿಯಲ್ಲಿ ಅವರ ವಿರುದ್ಧ ಒಂಬತ್ತು ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧ 1992ರ ಪ್ರಕರಣ ಸೇರಿದಂತೆ ಮೂರು ಗಲಭೆ ಪ್ರಕರಣಗಳು ದಾಖಲಾಗಿದ್ದವು. ಒಂದು ಜೂಜಾಟ ಪ್ರಕರಣ ಹಾಗೂ ಮೂರು ಮುನ್ನೆಚ್ಚರಿಕೆ ಕ್ರಮದ ಪ್ರಕರಣಗಳಲ್ಲಿ ಪೂಜಾರಿ ಹೆಸರೂ ಇದೆ.

ಈ ಪೈಕಿ ಹೆಚ್ಚಿನ ಪ್ರಕರಣಗಳು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಇವೆಲ್ಲ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳು.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ವಿರುದ್ಧ 15 ಪ್ರಕರಣಗಳು ದಾಖಲು; ಇವೆಲ್ಲ ಬೋಗಸ್ ಕೇಸ್​ಗಳೆಂದ ಪ್ರಲ್ಹಾದ್ ಜೋಶಿ

ಈ ಮಧ್ಯೆ, ಶ್ರೀಕಾಂತ್ ಪೂಜಾರಿ ವಿರುದ್ಧ ದಾಖಲಾಗಿರುವುದೆಲ್ಲ ಬೋಗಸ್ ಕೇಸ್​ಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಪೂಜಾರಿ 1992 ರ ನಂತರ ವಿವಾಹವಾದರು ಮತ್ತು ಪ್ರತಿಭಟನೆಗಳಿಂದ ದೂರವಿದ್ದರು. ಪೂಜಾರಿ ಹುಬ್ಬಳ್ಳಿಯ ಚನ್ನಪೇಟೆ ನಿವಾಸಿಯಾಗಿದ್ದು, ಕಳೆದ ಕೆಲವು ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್