Jagadish Shettar: ರಾಷ್ಟ್ರಮಟ್ಟದಲ್ಲಿ ಪ್ರಮುಖ ಹುದ್ದೆ ಸೇರಿದಂತೆ ಬಿಜೆಪಿ ಹೈಕಮಾಂಡ್ ನಾಯಕರು ಕೊಟ್ಟ ಸುವರ್ಣ ಆಯ್ಕೆಗಳನ್ನು ತಿರಸ್ಕರಿಸಿದ್ದೇಕೆ ಜಗದೀಶ್ ಶೆಟ್ಟರ್?

Hubballi Dharwad Central Constituency: ಅಷ್ಟೇ ಅಲ್ಲ, ಇನ್ನೂ ಹಲವು ಆಯ್ಕೆಗಳನ್ನು ಮುಂದಿಟ್ಟಿದ್ದರು. ಉದಾಹರಣೆಗೆ ದೇಶದ ಯಾವುದೇ ರಾಜ್ಯದ ರಾಜ್ಯಪಾಲರನ್ನಾಗಿ ಮಾಡುವ ಅವಕಾಶವನ್ನು ನೀಡಲಾಗಿತ್ತು. ಅಷ್ಟೇ ಅಲ್ಲ ಹು-ಧಾ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಅವರ ಕುಟುಂಬದ ಸದಸ್ಯರಿಗೆ ನೀಡಲು ತೀರ್ಮಾನ ಮಾಡಿ ಶೆಟ್ಟರ್ ಅವರಿಗೆ ತಿಳಿಸಲಾಗಿತ್ತು‌‌‌‌.

Jagadish Shettar: ರಾಷ್ಟ್ರಮಟ್ಟದಲ್ಲಿ ಪ್ರಮುಖ ಹುದ್ದೆ ಸೇರಿದಂತೆ ಬಿಜೆಪಿ ಹೈಕಮಾಂಡ್ ನಾಯಕರು ಕೊಟ್ಟ ಸುವರ್ಣ ಆಯ್ಕೆಗಳನ್ನು ತಿರಸ್ಕರಿಸಿದ್ದೇಕೆ ಜಗದೀಶ್ ಶೆಟ್ಟರ್?
ಬಿಜೆಪಿ ಹೈಕಮಾಂಡ್ ಕೊಟ್ಟ ಸುವರ್ಣ ಆಯ್ಕೆಗಳನ್ನು ತಿರಸ್ಕರಿಸಿದ್ದೇಕೆ ಜಗದೀಶ್ ಶೆಟ್ಟರ್?
Follow us
ಸಾಧು ಶ್ರೀನಾಥ್​
|

Updated on:Apr 16, 2023 | 1:16 AM

ಬಿಜೆಪಿ ಹೈಕಮಾಂಡ್ ನಾಯಕರು ಕೊಟ್ಟ ಸುವರ್ಣಾವಕಾಶಗಳನ್ನು, ಸರ್ವತಂತ್ರ ಸ್ವತಂತ್ರ ಆಯ್ಕೆಗಳನ್ನು ಜಗದೀಶ್ ಶೆಟ್ಟರ್ (Jagadish Shettar) ಎಡಗಾಲಲ್ಲಿ ಒದ್ದಿದ್ದೇಕೆ‌? ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ (Karnataka Assembly Elections 2023) ಬಿರುಸು ಪಡೆದಿದೆ. ಏಕೆಂದರೆ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (BJP) ನೀಡಿದ ಅವಕಾಶದ ಪರಿಣಾಮ ಆರು ಬಾರಿ ಶಾಸಕರಾಗಿ, ಪ್ರಮುಖ ಖಾತೆಗಳ ಮಂತ್ರಿಗಳಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ ಎಲ್ಲಾ ಪ್ರಮುಖ ಸ್ಥಾನಮಾನಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಅವರಿಗೆ ಮತ್ತಷ್ಟು ಆಯ್ಕೆಗಳನ್ನು (Hubballi Dharwad Central Constituency)  ಭಾರತೀಯ ಜನತಾ ಪಕ್ಷ ಅವರ ಮುಂದಿಟ್ಟಿತ್ತು.

ಆ ಪ್ರಕಾರ ಜಗದೀಶ್ ಶೆಟ್ಟರ್ ಅವರು ಈಗಾಗಲೇ ರಾಜ್ಯದ ಎಲ್ಲಾ ಪ್ರಮುಖ ಸ್ಥಾನಮಾನಗಳನ್ನು ಅಲಂಕರಿಸಿರುವುದರಿಂದ ಮುಂದೆ ಅವರನ್ನು ತಕ್ಷಣವೇ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ತನ್ಮೂಲಕ ಕೇಂದ್ರದಲ್ಲಿ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್ ತೀರ್ಮಾನ ಮಾಡಿತ್ತು. ಇದನ್ನು ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ‌‌ ನಡ್ಡಾ, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಎಲ್ಲಾ ಪ್ರಮುಖ ನಾಯಕರು ಖುದ್ದಾಗಿ ಮಾತುಕತೆ ನಡೆಸಿ ತಿಳಿಸಿದ್ದರು. ಅದೂ ಕೂಡ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ ಈ ತೀರ್ಮಾನಕ್ಕೆ ಬರಲಾಗಿತ್ತು.

ರಾಜ್ಯಪಾಲರನ್ನಾಗಿ ಮಾಡುವ ಅವಕಾಶ ಸೇರಿದಂತೆ…

ಅಷ್ಟೇ ಅಲ್ಲ, ಇದರ ಜೊತೆ ಇನ್ನೂ ಹಲವು ಆಯ್ಕೆಗಳನ್ನು ಮುಂದಿಟ್ಟಿದ್ದರು. ಉದಾಹರಣೆಗೆ ದೇಶದ ಯಾವುದೇ ರಾಜ್ಯದ ರಾಜ್ಯಪಾಲರನ್ನಾಗಿ ಮಾಡುವ ಅವಕಾಶವನ್ನು ನೀಡಲಾಗಿತ್ತು. ಅಷ್ಟೇ ಅಲ್ಲ ಹು-ಧಾ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಅವರ ಕುಟುಂಬದ ಸದಸ್ಯರಿಗೆ ನೀಡಲು ತೀರ್ಮಾನ ಮಾಡಿ ಶೆಟ್ಟರ್ ಅವರಿಗೆ ತಿಳಿಸಲಾಗಿತ್ತು‌‌‌‌. ಒಂದು ವೇಳೆ ತಮ್ಮ ಕುಟುಂಬದವರಿಗೆ ಬೇಡ ಎನ್ನುವುದಾದರೆ ಅವರು ಸೂಚಿಸುವ ಪಕ್ಷದ ಯಾವುದೇ ಕಾರ್ಯಕರ್ತಗೆ ಟಿಕೆಟ್ ನೀಡಲು ಪಕ್ಷ ಸಮ್ಮತಿಸಿತ್ತು.

Also Read:

ಸಂಧಾನ ಸಭೆ ವಿಫಲ: ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್​​

ಆದರೆ ಜಗದೀಶ್ ಶೆಟ್ಟರ್ ಅವರು ಈ ಎಲ್ಲಾ ಅವಕಾಶಗಳನ್ನು ತಿರಸ್ಕರಿಸಿ ತಮಗೆ ಆರು ಬಾರಿ ಶಾಸಕರಾಗಲು, ಸಚಿವರಾಗಲು, ಮುಖ್ಯಮಂತ್ರಿಯಾಗಲು ಅವಕಾಶ ನೀಡಿದ ಪಕ್ಷ ತೊರೆಯುವ ತೀರ್ಮಾನದತ್ತ ಮುಖ ಮಾಡಿರುವ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:01 am, Sun, 16 April 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್