AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ, ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಎಫ್ಐಆರ್ ಆದ್ರೂ ಅರೆಸ್ಟ್ ಆಗಿಲ್ಲ ಆರೋಪಿ

ಗಂಡ ಬೇರೆ ಊರಿಗೆ ಹೋಗುವುದನ್ನೇ ಕಾಯುತ್ತಿದ್ದ ಮೌಲಾಸಾಬ ಹುಲಗೂರ, ಆತನ ಹೆಂಡತಿಗೆ ಜೀವ ಬೇದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಮಹಿಳೆಗೆ ಜೀವ ಬೇದರಿಕೆ ಹಾಕಿ ಈ ವಿಷಯವನ್ನು ಯಾರಿಗಾದರೂ ಹೇಳಿದರೇ ನಿನ್ನ ಗಂಡ ಹಾಗೂ ಮಕ್ಕಳನ್ನು ಕೊಲೆ ಮಾಡಿಸುವುದಾಗಿ ಹೇಳಿ ನಿರಂತರ ಅತ್ಯಾಚಾರ ಮಾಡಿರುವ ಕುರಿತು ಮಹಿಳೆಯೇ ಮಾಧ್ಯಮದ ಮುಂದೆ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ.

ವಿಡಿಯೋ, ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಎಫ್ಐಆರ್ ಆದ್ರೂ ಅರೆಸ್ಟ್ ಆಗಿಲ್ಲ ಆರೋಪಿ
ಅತ್ಯಾಚಾರ ನಿಲ್ಲಿಸಿ
TV9 Web
| Edited By: |

Updated on:May 19, 2022 | 2:47 PM

Share

ಹುಬ್ಬಳ್ಳಿ: ಮಹಿಳೆಯ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ಶೋಷಣೆ ನಡೆಯುತ್ತಲೇ ಇದೆ. ಆದರೂ ಕೂಡ ಮಹಿಳೆಯರಿಗೆ ಸರಿಯಾದ ನ್ಯಾಯವೇ ಸಿಗುತ್ತಿಲ್ಲ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದು ಸುಮಾರು ದಿನಗಳೇ ಕಳೆದರೂ ಆರೋಪಿಗಳ ಬಂಧನಕ್ಕೆ ಮಾತ್ರ ಪೊಲೀಸರು ಮೀನಾಮೇಷ‌ ಎಣಿಸುತ್ತಿದ್ದಾರೆ. ಆರೋಪಿ ಮಹಿಳೆಯ ವಿಡಿಯೋ, ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡಿ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಕಲಘಟಗಿ ತಾಲೂಕಿನ ದೇವಿಕೊಪ್ಪದ ಗ್ರಾಮದಲ್ಲಿ ಸಂತ್ರಸ್ಥ ಮಹಿಳೆ ಮತ್ತು ಈಕೆಯ ಗಂಡ ತರಕಾರಿ ವ್ಯಾಪಾರ ಮಾಡುತ್ತ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ಸಂತ್ರಸ್ಥೆಯ ಗಂಡ ಊರಿನ ಮೌಲಾಸಾಬ ಹುಲಗೂರ ಎಂಬುವವರ ವಾಹನವನ್ನೂ ಚಲಾಯಿಸುವ ಕೆಲಸ ಮಾಡುತ್ತಾನೆ. ಇತ್ತ ಗಂಡ ಬೇರೆ ಊರಿಗೆ ಹೋಗುವುದನ್ನೇ ಕಾಯುತ್ತಿದ್ದ ಮೌಲಾಸಾಬ ಹುಲಗೂರ, ಆತನ ಹೆಂಡತಿಗೆ ಜೀವ ಬೇದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಸುಮಾರು ಎರಡು ತಿಂಗಳ ಕಾಲ ನಿರಂತರ ಅತ್ಯಾಚಾರ ಮಾಡಿರುವ ಮೌಲಾಸಾಬ, ಮಹಿಳೆಗೆ ಜೀವ ಬೇದರಿಕೆ ಹಾಕಿ ಈ ವಿಷಯವನ್ನು ಯಾರಿಗಾದರೂ ಹೇಳಿದರೇ ನಿನ್ನ ಗಂಡ ಹಾಗೂ ಮಕ್ಕಳನ್ನು ಕೊಲೆ ಮಾಡಿಸುವುದಾಗಿ ಹೇಳಿ ನಿರಂತರ ಅತ್ಯಾಚಾರ ಮಾಡಿರುವ ಕುರಿತು ಮಹಿಳೆಯೇ ಮಾಧ್ಯಮದ ಮುಂದೆ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ. ಇದನ್ನೂ ಓದಿ: ಬೇಸಿಗೆ ಮಳೆ ಅವಾಂತರ: ಹೂಡಿಕೆ ತಪ್ಪುವ ಆತಂಕ ವ್ಯಕ್ತಪಡಿಸಿ, ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ

ಇನ್ನೂ ಮಹಿಳೆಗೆ ತನ್ನಲ್ಲಿರುವ ಹಣ ಹಾಗೂ ಬಂಗಾರವನ್ನು ತೋರಿಸುವ ಮೂಲಕ ನನ್ನಲ್ಲಿ ಇಷ್ಟು ದುಡ್ಡಿದೆ ಏನು ಬೇಕಾದರೂ ಮಾಡುತ್ತೇನೆ ಎಂದು ಅವಾಜ್ ಹಾಕಿರುವ ಮೌಲಾಸಾಬ ಮಹಿಳೆಯ ನಗ್ನ ಚಿತ್ರಗಳನ್ನು ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಈ ಕುರಿತು ಧಾರವಾಡ ಮಹಿಳಾ ಪೊಲೀಸ್ ಠಾಣೆ ಹಾಗೂ ಕಲಘಟಗಿ ಪೊಲೀಸ್ ಠಾಣೆಗೆ ದೂರು ನೀಡಿ ಎಫ್ಐಆರ್ ದಾಖಲು ಮಾಡಿದರೂ ಕೂಡ ಆರೋಪಿತನನ್ನು ಬಂಧಿಸಿಲ್ಲ. ನಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಿ ನಮಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಕುಟುಂಬದ ಸದಸ್ಯರು ಕಣ್ಣೀರು ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದರೂ ಪೊಲೀಸ್ ಇಲಾಖೆ ಮಾತ್ರ ಸೂಕ್ತ ಕ್ರಮಕ್ಕೆ ಮುಂದಾಗದೇ ಇರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ. ಈ ಬಗ್ಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ. ಇದನ್ನೂ ಓದಿ: Yasin Malik: ಭಯೋತ್ಪಾದನೆಗೆ ಫಂಡಿಂಗ್ ಪ್ರಕರಣ; ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ ಎಂದು ಘೋಷಿಸಿದ ಕೋರ್ಟ್​

Published On - 2:47 pm, Thu, 19 May 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ