Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಆಪ್ತ ಸೋಮು ನ್ಯಾಮಗೌಡಗೆ 14 ದಿನಗಳ ನ್ಯಾಯಾಂಗ ಕಸ್ಟಡಿ

ನ್ಯಾಯಾಲಯದ ಆದೇಶದ ನಂತರ ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕಾರಿನಲ್ಲಿ ಕರೆದೊಯ್ದರು. ಸೋಮುರನ್ನು ಭೇಟಿಯಾಗಿ ಮಾತಾಡಲು ಉಪನಗರ ಠಾಣೆ ಬಳಿಗೆ ಸಂಬಂಧಿಕರು ಆಗಮಿಸಿದ್ದರು.

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಆಪ್ತ ಸೋಮು ನ್ಯಾಮಗೌಡಗೆ 14 ದಿನಗಳ ನ್ಯಾಯಾಂಗ ಕಸ್ಟಡಿ
ಸೋಮು ನ್ಯಾಮಗೌಡ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 09, 2021 | 11:06 PM

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ ಅಧಿಕಾರಿಗಳಿಂದ ಗುರುವಾರ ಬಂಧನಕ್ಕೊಳಗಾಗಿದ್ದ ಸೋಮು ನ್ಯಾಮಗೌಡ ಅವರನ್ನು ಎರಡು ವಾರಗಳ ಅವಧಿಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ. ಅವರನ್ನು ಶುಕ್ರವಾರದಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜನ ಪ್ರತಿನಿಧಿಗಳ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

ಇದೇ ಪ್ರಕರಣದಲ್ಲಿ ಸಿಬಿಐನಿಂದ ಕಳೆದ ನವೆಂಬರ್ 5 ರಂದು ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕನಾಗಿರುವ ಸೋಮು ನ್ಯಾಮಗೌಡ ಅವರನ್ನು ಗುರುವಾರದಂದು ಗದಗನಲ್ಲಿ ಸಿಬಿಐ ಬಂಧಿಸಿತ್ತು. ನಂತರ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜನ ಪ್ರತಿನಿಧಿಗಳ ನ್ಯಾಯಾಲಯದ ಎದುರು ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಯನ್ನು ಕೇಳಿತ್ತು. ನ್ಯಾಯಾಲಯವು ನ್ಯಾಮಗೌಡ ಅವರನ್ನು ಒಂದು ದಿನ ಮಟ್ಟಿಗೆ ಸಿಬಿಐ ವಶಕ್ಕೆ ಒಪ್ಪಿಸಿತ್ತು. ಇಂದು (ಶುಕ್ರವಾರ) ಅವರ ಕಸ್ಟಡಿ ಅವಧಿ ಮುಗಿದಿದ್ದರಿಂದ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

ನ್ಯಾಯಾಲಯದ ಆದೇಶದ ನಂತರ ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕಾರಿನಲ್ಲಿ ಕರೆದೊಯ್ದರು. ಸೋಮುರನ್ನು ಭೇಟಿಯಾಗಿ ಮಾತಾಡಲು ಉಪನಗರ ಠಾಣೆ ಬಳಿಗೆ ಸಂಬಂಧಿಕರು ಆಗಮಿಸಿದ್ದರು.

ಹಾಗೆಯೇ, ಸಿಬಿಐನಿಂದ ಯೋಗೀಶ್‌ ಪತ್ನಿ ಮಲ್ಲಮ್ಮ ಅವರ ವಿಚಾರಣೆ ಅಂತ್ಯಗೊಂಡಿದೆ. ಅಧಿಕಾರಿಗಳು ಮಲ್ಲಮ್ಮ ಅವರನ್ನು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರದಂದು ಸತತವಾಗಿ ಎರಡನೇ ದಿನ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ವಿಚಾರಣೆ ಮುಗಿದ ನಂತರ ಮಲ್ಲಮ್ಮ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಏತನ್ಮಧ್ಯೆ, ಜಾಮೀನು ಸುಪ್ರೀಮ್ ಕೋರ್ಟ್​ನಲ್ಲಿ ಜಾಮೀನು ಕೋರಿ ವಿನಯ ಕುಲಕರ್ಣಿ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆ ಜುಲೈ 26 ಕ್ಕೆ ಮುಂದೂಡಿಕೆಯಾಗಿದೆ. ಗುರುವಾರದಂದು ನ್ಯಾಯಮೂರ್ತಿ ಉದಯ ಲಲಿತ್ ಅವರ ನೇತೃತ್ವದ ಪೀಠವು ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ: ವಿನಯ್ ಕುಲಕರ್ಣಿ ಆಪ್ತ, ಕೆಎಎಸ್​ ಸೋಮು ನ್ಯಾಮಗೌಡ ಬಂಧನದ ಹಿಂದಿದೆ ಸಿಬಿಐ ಮಾಸ್ಟರ್​​ ಪ್ಲಾನ್; ಕೇಸು ಮತ್ತಷ್ಟು ಬಿಗಿ

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ