ಯೋಗೀಶ್ ಗೌಡ ಕೊಲೆ ಪ್ರಕರಣ: ಮಲ್ಲಮ್ಮ ಸಾಕ್ಷ್ಯ ಹೇಳಿಕೆ ಬೇಡ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ ಸಿಬಿಐ!

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ತೀವ್ರವಾಗಿ ನಡೆಯುತ್ತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಈಗಾಗಲೇ ಮಾಫಿ ಸಾಕ್ಷಿಯಗಿರುವ ಬಸವರಾಜ ಮುತ್ತಗಿ ಹೇಳಿಕೆ ದಾಖಲು ಮಾಡಿದ್ದಾನೆ. ಇದೇ ವೇಳೆ, ಮೃತ ಯೋಗೀಶ್ ಅವರ ಪತ್ನಿ ಮಲ್ಲಮ್ಮ ಅವರ ಸಾಕ್ಷ್ಯ ಹೇಳಿಕೆ ಬೇಡ ಎಂದು ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿರುವುದು ಕುತೂಹಲ ಕೆರಳಿಸಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣ: ಮಲ್ಲಮ್ಮ ಸಾಕ್ಷ್ಯ ಹೇಳಿಕೆ ಬೇಡ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ ಸಿಬಿಐ!
ಸಿಬಿಐ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma

Updated on: Jan 07, 2025 | 10:47 AM

ಧಾರವಾಡ, ಜನವರಿ 7: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮೊದಲು ದೂರುದಾರರಾಗಿದ್ದು ಅವರ ಪತ್ನಿ ಮಲ್ಲಮ್ಮ. ಪೊಲೀಸರು ನಡೆಸಿದ್ದ ತನಿಖೆ ವೇಳೆಯಲ್ಲಿ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದರು. ಬಳಿಕ ತನಿಖೆಯನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಿದ ಬಳಿಕ ಪ್ರಕರಣ ಬೇರೆ ತಿರುವು ಪಡೆದು, ಮಾಜಿ ಸಚಿವ ವಿನಯ ಕುಲಕರ್ಣಿ 9 ತಿಂಗಳು ಜೈಲು ಕಂಡುಬಂದಿದ್ದು ಕೂಡ ಇತಿಹಾಸ. ಆದರೆ ಇದೀಗ ಪ್ರಕರಣದ ವಿಚಾರಣೆ ಅಂತಿಮ ಹಂತಕ್ಕೆ ಬಂದಿದ್ದು, ಪ್ರಕರಣದ ಮೊದಲನೇ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿ ಕೋರ್ಟ್ ಮುಂದೆ ತನ್ನ ಹೇಳಿಕೆಯನ್ನೂ ದಾಖಲಿಸಿದ್ದಾನೆ. ಇನ್ನು ಸಿಬಿಐ ದೋಷಾರೋಪ ಪಟ್ಟಿಯಲ್ಲಿ ಮಲ್ಲಮ್ಮ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿತ್ತು. ಆದರೆ, ಮಲ್ಲಮ್ಮ ಅವರು ತನಿಖೆಗೆ ಸರಿಯಾಗಿ ಸ್ಪಂದಿಸಿರಲಿಲ್ಲ. ಈ ಮಧ್ಯೆ ಕೆಲ ಅನಿರೀಕ್ಷಿತ ಬೆಳವಣಿಗಳೂ ನಡೆದಿದ್ದವು. ಈ ನಿಟ್ಟಿನಲ್ಲಿ ಸಾಕ್ಷಿ ಪಟ್ಟಿಯಿಂದ ಮಲ್ಲಮ್ಮ ಅವರನ್ನು ಕೈಬಿಡಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಸಿಬಿಐ ಲೆಕ್ಕಾಚಾರವೇನು?

ಈ ಮುಂಚೆ, ಅಂದರೆ ಪೊಲೀಸರ ತನಿಖೆ ವೇಳೆಯೂ ಅನೇಕ ಅನಿರೀಕ್ಷಿತ ಬೆಳವಣಿಗೆ ನಡೆದಿದ್ದವು. ಇದರಿಂದಾಗಿ ಯೋಗೀಶ್ ಅಣ್ಣ ಗುರುನಾಥಗೌಡ ಒಟ್ಟಾರೆ ಪ್ರಕರಣದಿಂದ ಮಲ್ಲಮ್ಮ ಅವರನ್ನು ದೂರವೇ ಇಟ್ಟಿದ್ದರು. ಆದರೆ ಸಿಬಿಐ ತನ್ನ ತನಿಖೆ ವೇಳೆ, ಮಲ್ಲಮ್ಮ ಅವರನ್ನು ಸಾಕ್ಷಿಯಾಗಿ ಪರಿಗಣಿಸಿತ್ತು. ಆದರೆ ಇದೀಗ ಸಿಬಿಐ ಮಲ್ಲಮ್ಮ ಅವರನ್ನು ಸಾಕ್ಷಿ ಪಟ್ಟಿಯಿಂದ ಕೈಬಿಟ್ಟಿದೆ. ಸಾಕ್ಷಿ ಹೇಳುವ ಸಂದರ್ಭದಲ್ಲಿ ಮಲ್ಲಮ್ಮ ಪ್ರತಿಕೂಲವಾಗಿ ಹೇಳಿಕೆ ನೀಡಿದರೆ ಅದು ಒಟ್ಟಾರೆ ಪ್ರಕರಣದ ಮೇಲೆ ಹಾಗೂ ವಿಚಾರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬುದೇ ಸಿಬಿಐ ಲೆಕ್ಕಾಚಾರವಾಗಿದೆ.

ಇನ್ನು ಪ್ರಾಸಿಕ್ಯೂಶನ್‌ಗೆ ಸಾಕ್ಷಿ ಪಟ್ಟಿಯಿಂದ ತಮಗೆ ಬೇಡ ಎನಿಸಿದವರನ್ನು ಕೈಬಿಡುವ ಅಧಿಕಾರವಿದ್ದು, ಸಿಬಿಐ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ನ್ಯಾಯಾಲಯಕ್ಕೆ ಸಿಬಿಐ ತಿಳಿಸಿದ್ದೇನು?

ಈಗಾಗಲೇ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿ ಇದ್ದು, ಅವರೇ ಮೊದಲ ಸಾಕ್ಷಿಯಾಗಿದ್ದಾರೆ. ದೂರುದಾರರನ್ನು ಸಾಕ್ಷಿಯನ್ನಾಗಿ ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಮಲ್ಲಮ್ಮ ಅವರ ಸಾಕ್ಷ್ಯ ಹೇಳಿಕೆ ದಾಖಲಿಸುತ್ತಿಲ್ಲ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಮೌಖಿಕವಾಗಿ ತಿಳಿಸಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ಯೋಗೀಶ್​ ಗೌಡರನ್ನು ಕೊಲೆ ಮಾಡಸಿದ್ದೇ ವಿನಯ್​ ಕುಲಕರ್ಣಿ: ಕೇಸ್​ನ ಪ್ರಮುಖ ಆರೋಪಿ ಮುತ್ತಗಿ ಹೇಳಿಕೆ

ವಿನಯ ಕುಲಕರ್ಣಿಯಿಂದ ಸಾಕ್ಷಿಗಳ ಮೇಲೆ ಪ್ರಭಾವ: ಸಿಬಿಐ

ಈ ಮಧ್ಯೆ ಆರೋಪಿ ವಿನಯ ಕುಲಕರ್ಣಿ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿರುವ ಸಿಬಿಐ, ಜಾಮೀನು ರದ್ದು ಕೋರಿ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ವೇಳೆ ವಿನಯ ತಮ್ಮ ವಕೀಲರೊಂದಿಗೆ ಖುದ್ದು ಹಾಜರಾಗಿ, ಸಿಬಿಐ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಿದ್ದರು. ಒಟ್ಟಿನಲ್ಲಿ ವಿಚಾರಣೆ ಕೊನೆಯ ಹಂತದಲ್ಲಿರುವ ಹೊತ್ತಿನಲ್ಲಿ ಅನೇಕ ವಿಚಿತ್ರ ಬೆಳವಣಿಗೆಗಳು ನಡೆಯುತ್ತಿರುವುದು ಮಾತ್ರ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್