ರೀಲ್ಸ್ ಮಾಡಲು ಹೋಗಿ ಬೈಕ್​ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಯುವಕ, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗದಗ ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿ ಸಮೀರ್ ರೀಲ್ಸ್ ಮಾಡುವಾಗ ಬೈಕ್​ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಸಮೀರ್​ಗೆ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರೀಲ್ಸ್ ಮಾಡಲು ಹೋಗಿ ಬೈಕ್​ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಯುವಕ, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ
ಸಮೀರ್
Follow us
TV9 Web
| Updated By: ಆಯೇಷಾ ಬಾನು

Updated on: Jul 29, 2023 | 12:11 PM

ಧಾರವಾಡ, ಜುಲೈ 29: ಇತ್ತೀಚೆಗೆ ರೀಲ್ಸ್​ಗಳ(Reels) ಹಾವಳಿ ಹೆಚ್ಚಾಗಿದ್ದು ಯುವಕ, ಯುವತಿಯರು ರೀಲ್ಸ್ ಚಟಕ್ಕೆ ದಾಸರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಫಾಲೋವರ್ಸ್ ಗಳಿಸಬೇಕು, ಫೇಮಸ್ ಆಗಬೇಕು ಎಂಬ ಉದ್ದೇಶದಿಂದ ಆಪತನ್ನೂ ಲೆಕ್ಕಿಸದೆ ರೀಲ್ಸ್ ಮಾಡಲು ಮುಂದಾಗುತ್ತಿದ್ದಾರೆ. ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡವರು ಅದೆಷ್ಟೋ ಜನರಿದ್ದಾರೆ. ಗದಗ(Gadag) ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿ ಸಮೀರ್ ರೀಲ್ಸ್ ಮಾಡುವಾಗ ಬೈಕ್​ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.

ನವಲಗುಂದ ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ರೀಲ್ಸ್ ಮಾಡುವಾಗ ಬೈಕ್​ನಿಂದ ಬಿದ್ದು ಗದಗ ಜಿಲ್ಲೆ ನರಗುಂದ ಪಟ್ಟಣದ ನಿವಾಸಿ ಸಮೀರ್​ಗೆ ಗಂಭೀರ ಗಾಯಗಳಾಗಿವೆ. ಸಮೀರ್ ಬೈಕ್ ಮೇಲೆ ಎದ್ದು ನಿಂತು ರೀಲ್ಸ್ ಮಾಡುತ್ತಿದ್ದ. ಈ ವೇಳೆ ಸ್ಲಿಪ್​ ಆಗಿ ಬೈಕ್​ನಿಂದ ಬಿದ್ದು ಗಾಯಗೊಂಡಿದ್ದಾನೆ. ಗಾಯಾಳು ಸಮೀರ್​ಗೆ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭಾರೀ ಮಳೆಗೆ ಗುಡ್ಡ ಕುಸಿತ; ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ

ರೈಲಿನ ಬೋಗಿ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನ ರಕ್ಷಣೆ

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ರೈಲಿನ ಬೋಗಿ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನನ್ನು ಆರ್‌ಪಿಎಫ್(RPF) ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಜುಲೈ 27ರ ಗುರುವಾರ ಸಂಜೆ 6.15ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಮಲಬಾರ್ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಈ ವೇಳೆ ಚಲಿಸುತ್ತಿದ್ದ ರೈಲನ್ನು ಶಂಕರ್ ಬಾಬು ಎಂಬ 70 ವರ್ಷದ ಪ್ರಯಾಣಿಕ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದರು. ಕೂಡಲೇ ಆರ್‌ಪಿಎಫ್ ಸಿಬ್ಬಂದಿ ಪ್ರಕಾಶ್​ ಎಂಬುವವರು ಆತನನ್ನ ರಕ್ಷಣೆ ಮಾಡಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಸಿಬ್ಬಂದಿ ಗಮನಿಸದಿದ್ದರೆ ವೃದ್ಧ ರೈಲಿಗೆ ಸಿಲುಕುವ ಸಾಧ್ಯತೆ ಇತ್ತು. ವೃದ್ಧ ಶಂಕರ್ ಬಾಬು ಕೇರಳದ ಕಣ್ಣೂರಿನ ವಯಲ್‌ವೀಡು ನಿವಾಸಿಯಾಗಿದ್ದಾರೆ. ಅವರ ಬಲಗಾಲಿನ ಬೆರಳಿಗೆ ಗಾಯವಾಗಿದ್ದು, ಸಧ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಧಾರವಾಡಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ