ಧಾರವಾಡ, ಜುಲೈ 29: ಇತ್ತೀಚೆಗೆ ರೀಲ್ಸ್ಗಳ(Reels) ಹಾವಳಿ ಹೆಚ್ಚಾಗಿದ್ದು ಯುವಕ, ಯುವತಿಯರು ರೀಲ್ಸ್ ಚಟಕ್ಕೆ ದಾಸರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಫಾಲೋವರ್ಸ್ ಗಳಿಸಬೇಕು, ಫೇಮಸ್ ಆಗಬೇಕು ಎಂಬ ಉದ್ದೇಶದಿಂದ ಆಪತನ್ನೂ ಲೆಕ್ಕಿಸದೆ ರೀಲ್ಸ್ ಮಾಡಲು ಮುಂದಾಗುತ್ತಿದ್ದಾರೆ. ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡವರು ಅದೆಷ್ಟೋ ಜನರಿದ್ದಾರೆ. ಗದಗ(Gadag) ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿ ಸಮೀರ್ ರೀಲ್ಸ್ ಮಾಡುವಾಗ ಬೈಕ್ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.
ನವಲಗುಂದ ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ರೀಲ್ಸ್ ಮಾಡುವಾಗ ಬೈಕ್ನಿಂದ ಬಿದ್ದು ಗದಗ ಜಿಲ್ಲೆ ನರಗುಂದ ಪಟ್ಟಣದ ನಿವಾಸಿ ಸಮೀರ್ಗೆ ಗಂಭೀರ ಗಾಯಗಳಾಗಿವೆ. ಸಮೀರ್ ಬೈಕ್ ಮೇಲೆ ಎದ್ದು ನಿಂತು ರೀಲ್ಸ್ ಮಾಡುತ್ತಿದ್ದ. ಈ ವೇಳೆ ಸ್ಲಿಪ್ ಆಗಿ ಬೈಕ್ನಿಂದ ಬಿದ್ದು ಗಾಯಗೊಂಡಿದ್ದಾನೆ. ಗಾಯಾಳು ಸಮೀರ್ಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಭಾರೀ ಮಳೆಗೆ ಗುಡ್ಡ ಕುಸಿತ; ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ರೈಲಿನ ಬೋಗಿ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನನ್ನು ಆರ್‌ಪಿಎಫ್(RPF) ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಜುಲೈ 27ರ ಗುರುವಾರ ಸಂಜೆ 6.15ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಮಲಬಾರ್ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಈ ವೇಳೆ ಚಲಿಸುತ್ತಿದ್ದ ರೈಲನ್ನು ಶಂಕರ್ ಬಾಬು ಎಂಬ 70 ವರ್ಷದ ಪ್ರಯಾಣಿಕ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದರು. ಕೂಡಲೇ ಆರ್‌ಪಿಎಫ್ ಸಿಬ್ಬಂದಿ ಪ್ರಕಾಶ್ ಎಂಬುವವರು ಆತನನ್ನ ರಕ್ಷಣೆ ಮಾಡಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಸಿಬ್ಬಂದಿ ಗಮನಿಸದಿದ್ದರೆ ವೃದ್ಧ ರೈಲಿಗೆ ಸಿಲುಕುವ ಸಾಧ್ಯತೆ ಇತ್ತು. ವೃದ್ಧ ಶಂಕರ್ ಬಾಬು ಕೇರಳದ ಕಣ್ಣೂರಿನ ವಯಲ್‌ವೀಡು ನಿವಾಸಿಯಾಗಿದ್ದಾರೆ. ಅವರ ಬಲಗಾಲಿನ ಬೆರಳಿಗೆ ಗಾಯವಾಗಿದ್ದು, ಸಧ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಧಾರವಾಡಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ