ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು

ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ‌ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. 

ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು
ಡಿಸೇಲ್​​ ಟ್ಯಾಂಕರ್​ ಪಲ್ಟಿ
Updated By: ವಿವೇಕ ಬಿರಾದಾರ

Updated on: Jun 29, 2022 | 10:49 PM

ಧಾರವಾಡ: ಡೀಸೆಲ್ (Diesel) ಟ್ಯಾಂಕರ್ (Tanker) ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಧಾರವಾಡ (Dharwad) ತಾಲೂಕಿನ ಯರಿಕೊಪ್ಪ‌ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 (National Highway 4) ರಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ.  ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಅಪಘಾತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: ಜಮೀನು ಒತ್ತುವರಿ ಪ್ರಶ್ನಿಸಿದ್ದಕ್ಕೆ ಸವರ್ಣಿಯರಿಂದ ಹಲ್ಲೆ ಆರೋಪ: ಅಟ್ರಾಸಿಟಿ‌ ಕೇಸ್ ದಾಖಲು

ಸಾರಿಗೆ ಬಸ್ ಚಾಲಕ, ನಿರ್ವಾಹಕನ ಮೇಲೆ ಪುಡಿರೌಡಿ ಹಲ್ಲೆ

ಕೊಪ್ಪಳ: ಬೈಕ್​ಗೆ ದಾರಿ ಕೊಡಲಿಲ್ಲ ಎಂಬ ಕಾರಣಕ್ಕೆ  ಸಾರಿಗೆ ಬಸ್ ಚಾಲಕ, ನಿರ್ವಾಹಕನ ಮೇಲೆ ಪುಡಿರೌಡಿ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ನಡೆದಿದೆ. ಚಾಲಕ ರುದ್ರಮುನಿಸ್ವಾಮಿ, ನಿರ್ವಾಹಕ ವಿರೇಶ್​ಗೆ ಗಾಯಗಳಾಗಿವೆ. ಪುಡಿರೌಡಿ ಬಸ್​​ನ್ನು ಜಖಂಗೊಳಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ಇದನ್ನು ಓದಿ: ಹಾಡಹಗಲೇ ಬೈಕ್‌ನಲ್ಲಿ ಬಂದು ಪೆಟ್ರೋಲ್ ಬಂಕ್ ಮಾಲೀಕನಿಂದ 10 ಲಕ್ಷ ಹಣ ದರೋಡೆ ಮಾಡಿದ ಖದೀಮರು

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಇಬ್ಬರ ಬಂಧನ

ರಾಮನಗರ: ಆಹಾರ, ನಾಗರಿಕ ‌ಸರಬರಾಜು‌ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ರಾಮನಗರ ತಾಲೂಕಿನ ಬಾನಂದೂರು ಗ್ರಾಮದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜುನಾಥ್(22), ಮಣಿಕಂಠ(19) ಬಂಧಿತ ಆರೋಪಿಗಳು. ಬಂಧಿತರಿಂದ 13 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಳ್ಳಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.