ಮುಖ್ಯಮಂತ್ರಿ ಯಡಿಯೂರಪ್ಪ 79ನೇ ಜನ್ಮದಿನಕ್ಕೆ ಕರೆ ಮಾಡಿ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಟ್ವಿಟರ್ನಲ್ಲಿ ಶುಭ ಕೋರಿದ ಗಣ್ಯರು
Happy Birthday BS Yediyurappa: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಇಂದು 79ನೇ ವಸಂತಕ್ಕೆ ಕಾಲಿರಿಸಿದ್ದು, ಬಿಎಸ್ವೈ ಜನುಮ ದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ರಾಜ್ಯದ ಹಲವು ಗಣ್ಯರು ಹಾಗೂ ಇತರೆ ಪಕ್ಷದ ಮುಖಂಡರು ಟ್ವಿಟರ್ನಲ್ಲಿ ಶುಭಾಶಯ ಕೋರಿದ್ದಾರೆ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಇಂದು 79ನೇ ವಸಂತಕ್ಕೆ ಕಾಲಿರಿಸಿದ್ದು, ಬಿಎಸ್ವೈ ಜನುಮ ದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ರಾಜ್ಯದ ಹಲವು ಗಣ್ಯರು ಹಾಗೂ ಇತರೆ ಪಕ್ಷದ ಮುಖಂಡರು ಟ್ವಿಟರ್ನಲ್ಲಿ ಶುಭಾಶಯ ಕೋರಿದ್ದಾರೆ. ಜೊತೆಗೆ ದೇಶದ ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭ ಕೋರಿದಲ್ಲದೆ, ಸ್ವತಃ ಬಿಎಸ್‌ವೈಗೆ ಕರೆ ಮಾಡಿ ವಿಷ್ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ಬಿಎಸ್‌ವೈಗೆ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿ (chief secretary) ರವಿಕುಮಾರ್ ಸಹ ಬಿಎಸ್ವೈ ಅವರಿಗೆ ಶುಭ ಕೋರಿದರು.
ಬಿ. ಎಸ್. ಯಡಿಯೂರಪ್ಪನವರಿಗೆ ಟ್ವಿಟರ್ನಲ್ಲಿ ಜನ್ಮದಿನದ ಶುಭಾಶಯ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ.@BSYBJP#HBDBSY
— H D Kumaraswamy (@hd_kumaraswamy) February 27, 2021
ಮಾಜಿ ಪ್ರಧಾನಿಗಳಾದ ಹೆಚ್. ಡಿ. ದೇವೆಗೌಡ ಸಹ ಬಿಎಸ್‌ವೈಗೆ ಅಭಿನಂದನೆ ತಿಳಿಸಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ. ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ ಎಂದು ಹಾರೈಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ. ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ.@BSYBJP
— H D Devegowda (@H_D_Devegowda) February 27, 2021
ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಪ್ರಯುಕ್ತ ಟ್ವಿಟರ್ನಲ್ಲಿ ಗಣ್ಯ ನಾಯಕರು ಶುಭಕೋರಿದ್ದಾರೆ.
ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @BSYBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.#BSYediyurappa pic.twitter.com/JVphK8M4oy
— Nalinkumar Kateel (@nalinkateel) February 27, 2021
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು. ತಮ್ಮ ನಾಯಕತ್ವ ಮತ್ತು ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ನಿಮ್ಮ ಬದ್ಧತೆಗೆ ಧನ್ಯವಾದಗಳು! #BSY @BSYBJP @CMofKarnataka pic.twitter.com/5bkjs4oFzz
— Dr Sudhakar K (@mla_sudhakar) February 26, 2021
Greetings to Karnataka CM @BSYBJP Ji on his birthday. Yediyurappa Ji is one of our most experienced leaders, who has devoted his life towards the welfare of farmers and empowering the poor. Praying for his long and healthy life.
— Narendra Modi (@narendramodi) February 27, 2021
Published On - 11:29 am, Sat, 27 February 21