ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ದಿನೇಶ್ ಗೂಳಿಗೌಡ ನೇಮಕ
ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಚಿಸಲಾದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ನೇಮಕವು ತಕ್ಷಣದಿಂದಲೇ ಜಾರಿಗೆ ಬರುತ್ತದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲಾಗಿದೆ. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಇದು ನೆರವಾಗಲಿದೆ.

ಬೆಂಗಳೂರು, ಆಗಸ್ಟ್ 11: ಪಂಚ ಗ್ಯಾರಂಟಿಗಳು (Guarantee) ಕರ್ನಾಟಕ ಸರ್ಕಾರದ (Karnataka Government) ಮಹತ್ವದ ಯೋಜನೆಗಳಾಗಿವೆ. ಈ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಸರ್ಕಾರ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಚನೆ ಮಾಡಿದೆ. ಈ ಪ್ರಾಧಿಕಾರಕ್ಕೆ ಸರ್ಕಾರ ಉಪಾಧ್ಯಕ್ಷರನ್ನು ನೇಮಕ ಮಾಡಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಕರ್ನಾಟಕ ಸರ್ಕಾರ ಇದೇ ವರ್ಷ ಜನವರಿಯಲ್ಲಿ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ರಚನೆ ಮಾಡಿತ್ತು. ತಾಲೂಕು ಹಾಗೂ ಬಿಬಿಎಂಪಿ ಮಟ್ಟದಲ್ಲಿ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ’ ಯನ್ನು ಸರ್ಕಾರ ರಚನೆ ಮಾಡಿತ್ತು.
ಇದನ್ನೂ ಓದಿ: ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೇಮಕ, ರೇವಣ್ಣ ಅಧ್ಯಕ್ಷ
ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಲ್ಲಿ ಅಧ್ಯಕ್ಷ, ಐವರು ಉಪಾಧ್ಯಕ್ಷರು ಮತ್ತು ಜಿಲ್ಲೆಗಳನ್ನು ಪ್ರತಿನಿಧಿಸಲು 31 ಸದಸ್ಯರು ಇದ್ದಾರೆ. ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ, ಎಲ್ಲ ಐವರು ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




