ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕೇರಳದಲ್ಲಿ ಕೊವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ. 3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಬೆಂಗಳೂರು, ಡಿಸೆಂಬರ್ 16: ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್, ILI ಸಾರಿ ಕೇಸ್ ಕಂಡುಬಂದರೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಕೊವಿಡ್ ಪ್ರಮಾಣ ಹೆಚ್ಚಿಸುತ್ತೇವೆ ಎಂದಿದ್ದಾರೆ.
3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ. 1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ RTPCR ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೋವಿಡ್ 19: ಕೇರಳದಲ್ಲಿ ಒಂದೇ ದಿನ 230 ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 949ಕ್ಕೆ ಏರಿಕೆ
ಕೇರಳದಲ್ಲಿ ಕೊವಿಡ್ ಉಪ ತಳಿ ಪ್ರಕರಣ ದಿನೇದಿನೆ ಹೆಚ್ಚಳವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲೂ 58 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿತ 47 ಜನ ಹೋಮ್ ಐಸೋಲೇಷನ್ನಲ್ಲಿದ್ದಾರೆ. ಕೊರೊನಾ ಸೋಂಕಿತ 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್ನಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದರು.
ರಾಜ್ಯ ಮಟ್ಟದಲ್ಲಿ ಭ್ರೂಣಹತ್ಯೆ ಪತ್ತೆ ಟಾಸ್ಕ್ ಪೋರ್ಸ್ ರಚನೆ
ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ವಿಚಾರವಾಗಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಿಂದ ಸಭೆ ನಡೆಸಲಾಗಿದೆ. ಮುಂದಿನ ವಾರದೊಳಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಟಾಸ್ಕ್ ಪೋರ್ಸ್ ಹೇಗೆ ರಚನೆ, ಯಾರು ಇರುತ್ತಾರೆ ಎನ್ನುವುದರ ಬಗ್ಗೆ ತಿಳಿಸಲಾಗುತ್ತೆ. ಅಧಿಕಾರಿಗಳ ಜೊತೆ ಸಭೆ ಹಾಗೂ ನಿಯಮ ಕುರಿತಾಗಿ ಚರ್ಚಿಸಲಾಗಿದೆ.
ರಾಜ್ಯ ಮಟ್ಟದಲ್ಲಿ ಭ್ರೂಣಹತ್ಯೆ ಪತ್ತೆ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತೆ. ಜಿಲ್ಲಾ ಮಟ್ಟದಲ್ಲೂ ಟಾಸ್ಕ್ ಪೋರ್ಸ್ ರಚನೆ ಮಾಡಲು ಸಲಹೆ ಇದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕೂಡ ಒಂದೇ ಸಲಹೆ ನೀಡಿದೆ. ಬೈಯಪ್ಪನಹಳ್ಳಿ ಪ್ರಕರಣದ ವಿಚಾರವಾಗಿ ಕೋರ್ಟ್ನಲ್ಲಿ ಸ್ಟೇ ಇದೆ. ಅದನ್ನ ವೇಕೆಟ್ ಮಾಡಿಸಬೇಕಾಗಿದೆ. ಕಾನೂನಾತ್ಮಕ ತೊಡಕು ವಿಚಾರವಾಗಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:40 pm, Sat, 16 December 23