ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ; ತನಿಖೆಗೆ ಒತ್ತಾಯ

ಅಕ್ರಮ ಅವ್ಯವಹಾರ, ಸ್ವಜನ ಪಕ್ಷಪಾತ, ಭ್ರಷ್ಟಾಚಾರದ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವ ಸಲುವಾಗಿ ಎಸಿಬಿ ತನಿಖಾ ಸಂಸ್ಥೆಗೆ ಪ್ರಕರಣ ವಹಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ. 

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ; ತನಿಖೆಗೆ ಒತ್ತಾಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Aug 13, 2021 | 10:38 PM

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್. ದೇವರಾಜ್, ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್​ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆಯನ್ನು ಪಡೆಯದೇ ಕಟ್ಟಡ ನಿರ್ಮಾಣ ಕಂಪೆನಿ, ಸಕ್ಕರೆ ಕಾರ್ಖಾನೆ, ಚಿನ್ನದ ಅಂಗಡಿಗಳಿಗೆ ಬೇಕಾಬಿಟ್ಟಿಯಾಗಿ ಹಲವು ಕೋಟಿ ರೂಪಾಯಿಗಳಷ್ಟು ಸಾಲ ನೀಡಿ ಅವ್ಯವಹಾರ ನಡೆಸಿದ್ದಾರೆ. ಅವರ ವಿರುದ್ಧ ಇರುವ ಅಕ್ರಮ, ಅವ್ಯವಹಾರ, ಸ್ವಜನ ಪಕ್ಷಪಾತ, ಭ್ರಷ್ಟಾಚಾರದ ಬಗ್ಗೆ ಎಸಿಬಿ ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ದಿನೇಶ ಕಲ್ಲಹಳ್ಳಿ ಸಹಕಾರ ಸಂಘಗಳ ನಿಬಂಧಕರಿಗೆ ಪತ್ರದ ಮುಖೇನ ಒತ್ತಾಯಿಸಿದ್ದಾರೆ. 

ರೈತ ಸಹಕಾರಿ ಸಂಸ್ಥೆಗಳು, ಸಹಕಾರಿ ಸಂಘ ಮತ್ತು ಸಹಕಾರ ಬ್ಯಾಂಕ್​ಗಳಿಗೆ ಆರ್ಥಿಕ ನೆರವು ನೀಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್ ದೇವರಾಜ್ ಅನಗತ್ಯವಾಗಿ ಮತ್ತು ವ್ಯವಧಾನವಿಲ್ಲದೆ ಸಹಕಾರಿ ನಿಯಮಾವಳಿಗಳು, ಬ್ಯಾಂಕ್​ನ ಉಪ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಸಾಲ ಪಡೆದ ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್​ಗಳು, ಖಾಸಗಿ ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳು ಯಾವ ಉದ್ದೇಶಕ್ಕೆ ಸಾಲ ಪಡೆದಿದ್ದವೋ ಆ ಉದ್ದೇಶಕ್ಕೆ ಸಾಲವನ್ನು ಉಪಯೋಗಿಸಿಲ್ಲ. ಬದಲಿಗೆ ಸ್ವಂತಕ್ಕೆ ಮತ್ತು ಇತರೆ ವ್ಯವಹಾರಗಳಿಗೆ ದುರುಪಯೋಗಪಡಿಸಿಕೊಂಡು ನಿಗದಿಪಡಿಸಿದ ಕಾಲಾವಧಿಯಲ್ಲಿ ಅಸಲು ಮತ್ತು ಬಡ್ಡಿಯನ್ನು ಬ್ಯಾಂಕ್​ಗೆ ಪಾವತಿಸಿಲ್ಲ. ಈ ಅವ್ಯವಹಾರದ ಹಿಂದೆ ಅಪೆಕ್ಸ್ ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್. ದೇವರಾಜ್​ರ ಪಾತ್ರವೂ ಇದೆ ಎಂದು ಹೇಳಲಾಗಿದೆ.

ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡುವ ಮುನ್ನ ಕಾರ್ಖಾನೆಗಳ ಸ್ಥಿರಾಸ್ತಿ, ಚರಾಸ್ತಿ ಮೌಲ್ಯವನ್ನು ಪರಿಗಣಿಸದೆಯೇ ಸಾಲ ನೀಡಿರುವ ಅಪೆಕ್ಸ್ ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕ ದೇವರಾಜ್ ಅಕ್ರಮದಲ್ಲಿ ತೊಡಗಿದ್ದಾರೆ. ಇದೀಗ ಆ ಕಂಪೆನಿಗಳಿಂದ ಸಾಲ ಮರುಪಾವತಿ ಆಗುವುದು ಅನುಮಾನವಾಗಿದೆ. ಅಪೆಕ್ಸ್ ಬ್ಯಾಂಕ್​ನ ಕಾರ್ಯಚಟುವಟಿಕೆಗಳಿಗೆ ಸಂಬಂಧವೇ ಇಲ್ಲದ ರಿಯಲ್ ಎಸ್ಟೇಟ್, ಕಟ್ಟಡ ನಿರ್ಮಾಣ ಕಂಪೆನಿ, ಟೆಕ್ಸ್​ಟೈಲ್ಸ್ ಕಂಪೆನಿಗೂ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿರುವುದ ದಾಖಲೆಗಳಿಂದ ತಿಳಿದುಬಂದಿದೆ. ಅಡಮಾನ ಸಾಲವನ್ನು ಮುಂಗಡ ಬಂಡವಾಳದ ರೂಪದಲ್ಲಿ ಬಿಡುಗಡೆ ಮಾಡಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಬೊಕ್ಕಸ ತುಂಬಿಸಿರುವುದು ‘ಶಾಸನ ಬದ್ಧ ಲೆಕ್ಕ ಪರಿಶೋಧನಾ ವರದಿ’ಯಿಂದ ತಿಳಿದುಬಂದಿದೆ ಎಂದು ದಿನೇಶ ಕಲ್ಲಹಳ್ಳಿ ನೀಡಿರುವ ದೂರಿನ ಪ್ರತಿಯಲ್ಲಿ ಹೇಳಲಾಗಿದೆ.

ಪ್ರಕರಣದಲ್ಲಿ ರಾಜಕೀಯ ವ್ಯಕ್ತಿಗಳು ಭಾಗಿಯಾಗಿರುವುದು, ಭದ್ರತಾ ಹೂಡಿಕೆಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳಲ್ಲಿ ಅಪೆಕ್ಸ್ ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕರು ಖಾಸಗಿ ಏಜೆನ್ಸಿಗಳಿಗೆ ಲಾಭ ಮಾಡಿಕೊಟ್ಟು ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ಪ್ರಮಾಣದಲ್ಲಿ ನಷ್ಟ ಉಂಟುಮಾಡಿರುವುದು ಬಯಲಾಗಿದೆ ಎಂದು ತಿಳಿಸಲಾಗಿದೆ.

ಹೂಡಿಕೆ ಖರೀದಿಗಳ ವ್ಯವಹಾರಗಳನ್ನು ಪರಿಶೀಲಿಸಿರುವ ಸಹಕಾರ ಸಂಘಗಳ ಜಂಟಿ ನಿಬಂಧಕರ ನೇತೃತ್ವದ ತನಿಖಾ ತಂಡ ಫಿಮ್ಡಾ ದರ ಮತ್ತು ನೈಜ ಖರೀದಿ ದರದ ಮಧ್ಯೆ ಸಾಕಷ್ಟು ವ್ಯತ್ಯಾಸ ಇರುವುದನ್ನು ಪತ್ತೆಹಚ್ಚಿದೆ. ಅಲ್ಲದೆ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್. ದೇವರಾಜ್​ ಅವರ ಏಕಪಕ್ಷೀಯ ತೀರ್ಮಾನದಿಂದ ಬ್ಯಾಂಕ್​ಗೆ 33.21 ಕೋಟಿ ರೂಪಾಯಿ ನಷ್ಟ ಸಂಭವಿಸಿರುವುದು ವರದಿಯಿಂದ ಬೆಳಕಿಗೆ ಬಂದಿದೆ ಎಂದೂ ಉಲ್ಲೇಖಿಸಲಾಗಿದೆ.

ಅಕ್ರಮ ಅವ್ಯವಹಾರ, ಸ್ವಜನ ಪಕ್ಷಪಾತ, ಭ್ರಷ್ಟಾಚಾರದ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವ ಸಲುವಾಗಿ ಎಸಿಬಿ ತನಿಖಾ ಸಂಸ್ಥೆಗೆ ಪ್ರಕರಣ ವಹಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ರೈತರ ಪಾಲಿಗೆ ಸಿಗಬೇಕಾಗಿದ್ದ ಹಣವು ಹೀಗೆ ಅಕ್ರಮವಾಗಿ ಅವ್ಯವಹಾರದ ಪಾಲಾಗಿದೆ. ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕರು ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಬೇಕಾದಂತೆ ಬಳಸಿದ್ದಾರೆ. ಕೋಟ್ಯಂತರ ರೂಪಾಯಿಗಳ ಈ ಬಹುದೊಡ್ಡ ಹಗರಣವನ್ನು ತನಿಖೆ ನಡೆಸಬೇಕು. ಶಾಸನ ಬದ್ಧ ಲೆಕ್ಕ ಪರಿಶೋಧನಾ ವರದಿಯಲ್ಲಿ ಬಯಲಾಗಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಯನ್ನು ಎಸಿಬಿ ಅಥವಾ ಸಿಸಿಬಿಗೆ ನೀಡಬೇಕು ಎಂದು ದಿನೇಶ್ ಕಲ್ಲಹಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಹಕಾರಿ ಸಂಘ, ಬ್ಯಾಂಕ್ ಅವ್ಯವಹಾರ; ತನಿಖೆಗೆ ಆಗ್ರಹ ಎಂಆರ್​ಎನ್​ ಸೌಹಾರ್ದ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ. 40 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ವಿಜಯಪುರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್​ ಇಂದು (ಆಗಸ್ಟ್ 13) ಹೇಳಿದ್ದಾರೆ. ಅವ್ಯವಹಾರವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಇದೇ ರೀತಿ ಈಶ್ವರ ಕ್ರೆಡಿಟ್ ಸೊಸೈಟಿಯಲ್ಲೂ ಅವ್ಯವಹಾರ ನಡೆದಿದೆ. ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಯತ್ನಾಳ್ ಆಗ್ರಹಿಸಿದ್ದಾರೆ.

ಇದೇ ರೀತಿ ಅಪೆಕ್ಸ್​ ಬ್ಯಾಂಕ್​ನಲ್ಲೂ ಅವ್ಯವಹಾರ ನಡೆದಿದೆ. ದಾಖಲೆ ಇಲ್ಲದೆ ಸಾಲ ನೀಡಲಾಗಿದೆ. ಅವ್ಯವಹಾರಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ. ಸಕ್ಕರೆಯಿಲ್ಲದ ಗೋದಾಮಿಗೆ ಸಹಕಾರಿ ಬ್ಯಾಂಕ್‌ಗಳಿಂದ ಸಾಲ ನೀಡಲಾಗಿದೆ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ನಡೆಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಸಚಿವ ಮುರುಗೇಶ್ ನಿರಾಣಿ ವಿರುದ್ಧ ಮತ್ತೆ ಪರೋಕ್ಷವಾಗಿ ಯತ್ನಾಳ್ ಹರಿಹಾಯ್ದಿದ್ದಾರೆ. ಈ ಘಟನೆಯನ್ನು ಕೂಡ ಇಲ್ಲಿ ಸ್ಮರಿಸಿಕೊಳ್ಳಬಹುದು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕರ್ತವ್ಯಲೋಪ, ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ; ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ

Dinesh Kallahalli Interview: ರಮೇಶ್​ ಜಾರಕಿಹೊಳಿ ರಾಜೀನಾಮೆಗೆ ಕಾರಣರಾದ ದಿನೇಶ್ ಕಲ್ಲಹಳ್ಳಿ ಸಂದರ್ಶನ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ