AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಜೋರಾದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ಕಾಂಗ್ರೆಸ್‌ನಲ್ಲಿ ‘ಡಿನ್ನರ್ ಪಾಲಿಟಿಕ್ಸ್’ ಮತ್ತೆ ಸದ್ದು ಮಾಡುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟದ ಬೆನ್ನಲ್ಲೇ ಈ ಬೆಳವಣಿಗೆ ರಾಜಕೀಯ ಕುತೂಹಲ ಕೆರಳಿಸಿದೆ. ಅಧಿಕಾರ ಹಂಚಿಕೆ ಜಟಾಪಟಿಯ ಸಂದರ್ಭದಲ್ಲೇ ನಡೆಯುವ ಈ ಔತಣಕೂಟ ಪಕ್ಷದ ಆಂತರಿಕ ರಾಜಕೀಯದ ಮೇಲೆ ಮಹತ್ವದ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕಾಂಗ್ರೆಸ್​ನಲ್ಲಿ ಜೋರಾದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ
ಇತ್ತೀಚೆಗೆ ಡಿಕೆ ಶಿವಕುಮಾರ್ ಆಯೋಜಿಸಿದ್ದ ಡಿನ್ನರ್ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರುImage Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on:Mar 13, 2026 | 9:53 AM

Share

ಬೆಂಗಳೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಮತ್ತೆ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವುದು ಗಮನಾರ್ಹವಾಗಿದೆ.

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಂಡ ನೆಪದಲ್ಲಿ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಅದರ ಬೆನ್ನಲ್ಲೇ ಮಾರ್ಚ್ 12ರಂದು ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿರುವ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು ರಾಜಕೀಯ ಚರ್ಚೆಗೆ ಕಾರಣವಾಗಿತ್ತು.

ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್‌ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆಳವಣಿಗೆಗಳ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಕೂಟ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ವಿವಿಧ ರೀತಿಯ ಚರ್ಚೆಗೆ ಗ್ರಾಸವಾಗಿದೆ.

ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಘೋಷಣೆಯಾಗಬಹುದಾದ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಯಾರು ಭಾಗವಹಿಸಬೇಕು ಎಂಬುದರ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್​ನತ್ತ 14 ಕಾಂಗ್ರೆಸ್ ಶಾಸಕರು!

ಒಟ್ಟಿನಲ್ಲಿ ಡಿಕೆ ಶಿವಕುಮಾರ್ ಅವರ ಡಿನ್ನರ್ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿರುವ ಈ ಔತಣಕೂಟ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಆಂತರಿಕ ರಾಜಕೀಯದ ಮೇಲೆ ಅದರ ಪರಿಣಾಮ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 am, Fri, 13 March 26

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್